ಆ್ಯಪ್ನಗರ

ಹಳೆ ಮದ್ದು ಗುಂಡುಗಳ ವಿಲೇವಾರಿ ವೇಳೆ ಏನಾಯ್ತು ಗೊತ್ತಾ?

ವಾರ್ಧಾ ಜಿಲ್ಲೆಯ ಪುಲ್ಗಾಂವ್‌ನಲ್ಲಿರುವ ಮದ್ದು-ಗುಂಡು ಡಿಪೋ ಸಮೀಪ ಮಂಗಳವಾರ ಬೆಳಗ್ಗೆ ಸ್ಫೋಟ ಸಂಭವಿಸಿದೆ.

Vijaya Karnataka 21 Nov 2018, 9:03 am
ವಾರ್ಧಾ: ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯ ಪುಲ್ಗಾಂವ್‌ನಲ್ಲಿರುವ ಮದ್ದು-ಗುಂಡು ಡಿಪೋ ಸಮೀಪ ಮಂಗಳವಾರ ಬೆಳಗ್ಗೆ ಸಂಭವಿಸಿದ ಸ್ಫೋಟದಲ್ಲಿ ಆರು ಮಂದಿ ಮೃತಪಟ್ಟಿದ್ದು, ಹತ್ತು ಜನರು ಗಾಯಗೊಂಡಿದ್ದಾರೆ.
Vijaya Karnataka Web varsha


ಅವಧಿ ಮೀರಿದ ಮದ್ದು-ಗುಂಡುಗಳು ತುಂಬಿದ್ದ ಪೆಟ್ಟಿಗೆಗಳನ್ನು ವಿಲೇವಾರಿಗಾಗಿ ಗುರುತಿಸಿರುವ ಖಾಲಿ ಜಾಗದಲ್ಲಿ ವಾಹನದಿಂದ ಕೆಳೆಗಿಳಿಸುತ್ತಿದ್ದ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ತೀವ್ರವಾಗಿ ಗಾಯಗೊಂಡ ಇಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

10ರಿಂದ 15 ಮಂದಿ ಉದ್ಯೋಗಿಗಳು ಮತ್ತು ಗುತ್ತಿಗೆ ಕಾರ್ಮಿಕರು ಸ್ಥಳದಲ್ಲಿದ್ದರು. ಮದ್ದುಗುಂಡುಗಳ ವಿಲೇವಾರಿ ಹೊಣೆಯನ್ನು ಮಧ್ಯಪ್ರದೇಶದ ಶಸ್ತ್ರಾಸ್ತ್ರ ಕಾರ್ಖಾನೆಗೆ ವಹಿಸಲಾಗಿದೆ. ಇದೇ ಡಿಪೋದಲ್ಲಿ 2016ರಲ್ಲಿ ನಡೆದ ಸ್ಫೋಟದಲ್ಲಿ 16 ಮಂದಿ ಮೃತಪಟ್ಟಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ