ಆ್ಯಪ್ನಗರ

ಆರ್ಟಿಕಲ್‌ 370 ರದ್ದಿಗೆ 1 ವರ್ಷ, ಜಮ್ಮು ಮತ್ತು ಕಾಶ್ಮೀರದಲ್ಲಿ ಕರ್ಫ್ಯೂ ಜಾರಿ

2019ರ ಆಗಸ್ಟ್‌ 5ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದಲ್ಲಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರಕಾರ ರದ್ದುಗೊಳಿಸಿತ್ತು. ಜೊತೆಗೆ ರಾಜ್ಯವನ್ನು ಎರಡು ಭಾಗವನ್ನಾಗಿ ಮಾಡಿ ಕೇಂದ್ರಾಡಳಿತ ಪ್ರದೇಶವನ್ನಾಗಿ ಪರಿವರ್ತಿಸಲಾಗಿತ್ತು.

Agencies 4 Aug 2020, 2:13 pm
ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಭಾರತ ಸರಕಾರ ಹಿಂಪಡೆದುಕೊಂಡು ಆಗಸ್ಟ್‌ 5ಕ್ಕೆ ಒಂದು ವರ್ಷ ತುಂಬುತ್ತಿದೆ. ಈ ಹಿನ್ನೆಲೆಯಲ್ಲಿ ಕಾಶ್ಮೀರ ಕಣಿವೆಯಲ್ಲಿ ಭಾರಿ ಪ್ರತಿಭಟನೆಗೆ ಸಿದ್ಧತೆಗಳು ನಡೆದಿವೆ ಎಂಬ ಮಾಹಿತಿ ಇದ್ದು, ಕಾಶ್ಮೀರದಲ್ಲಿ ಕರ್ಫ್ಯೂ ವಿಧಿಸಲಾಗಿದೆ.
Vijaya Karnataka Web Jammu and Kashmir Curfew


ಆಗಸ್ಟ್‌ 5 ರಂದು ಕರಾಳ ದಿನ ಆಚರಿಸಲು ಸಂಘಟನೆಗಳು ನಿರ್ಧರಿಸಿರುವುದರಿಂದ ಹಿಂಸಾಚಾರ ತಡೆಗಟ್ಟಲು ಸೋಮವಾರ ಸಂಜೆಯಿಂದ ಬುಧವಾರ ಸಂಜೆಯವರಗೆ ಕಾಶ್ಮೀರದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಜಿಲ್ಲೆಗಳಲ್ಲಿ ಆಗಸ್ಟ್‌ 5ರ ಸಂಜೆವರೆಗೆ ಕರ್ಫ್ಯೂ ಹೇರಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ ಕೊರೊನಾ ಕಾರಣಕ್ಕೆ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.

2019ರ ಆಗಸ್ಟ್‌ನಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದಲ್ಲಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಗಿತ್ತು. ಜೊತೆಗೆ ರಾಜ್ಯವನ್ನು ಎರಡು ಭಾಗವನ್ನಾಗಿ ಮಾಡಿ ಕೇಂದ್ರಾಡಳಿತ ಪ್ರದೇಶವನ್ನಾಗಿ ಪರಿವರ್ತಿಸಲಾಗಿತ್ತು. ಹೀಗೆ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ ಕೇಂದ್ರಾಡಳಿತ ಪ್ರದೇಶಗಳು ಅಸ್ತಿತ್ವಕ್ಕೆ ಬಂದಿದ್ದವು.

ಕಣಿವೆಯಲ್ಲಿ ಗಲಭೆ ನಡೆಯುವ ಸಾಧ್ಯತೆಗಳಿವೆ ಎಂಬ ವರದಿಗಳಿದ್ದು, ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಸಾವಿರಾರು ಜನರನ್ನು ವಶಕ್ಕೆ ಪಡೆಯಲಾಗಿದ್ದು, ಸಂಪರ್ಕ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ