ಆ್ಯಪ್ನಗರ

ಕಣಿವೆ ರಾಜ್ಯದಲ್ಲಿ ಶ್ರದ್ಧೆ, ವೃತ್ತಿಪರತೆಯಿಂದ ಕಾರ್ಯಾಚರಣೆ: ಸೇನೆ

ಮಾನವೀಯ ಮೌಲ್ಯಗಳನ್ನು ಗೌರವಿಸುತ್ತಾ ವೃತ್ತಿಪರತೆ ಹಾಗೂ ಸಮರ್ಪಣಾ ವಿಧಾನದಲ್ಲಿ ಭದ್ರತಾ ಪಡೆಗಳು ಉಗ್ರರ ವಿರುದ್ಧ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ ಎಂದು ಸೇನೆ ಹೇಳಿದೆ.

PTI 21 Jun 2019, 5:00 am
ಶ್ರೀನಗರ:ಮಾನವೀಯ ಮೌಲ್ಯಗಳನ್ನು ಗೌರವಿಸುತ್ತಾ ವೃತ್ತಿಪರತೆ ಹಾಗೂ ಸಮರ್ಪಣಾ ವಿಧಾನದಲ್ಲಿ ಭದ್ರತಾ ಪಡೆಗಳು ಉಗ್ರರ ವಿರುದ್ಧ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರ್ಯಾಚರಣೆ ನಡೆಸುತ್ತಿವೆ ಎಂದು ಭಾರತೀಯ ಸೇನೆ ಸ್ಪಷ್ಟಪಡಿಸಿದೆ.
Vijaya Karnataka Web army


ಸಮಾಜದಲ್ಲಿನ ಮೌಲ್ಯಗಳನ್ನು ಗೌರವಿಸುವ ಕಟ್ಟುನಿಟ್ಟಾದ ನೀತಿ ಸಂಹಿತೆ ನಮ್ಮಲ್ಲಿದೆ. ಅದನ್ನು ಯಾವುದೇ ಕಾರಣಕ್ಕೂ ಯೋಧರು ಮೀರುವುದಿಲ್ಲ. ಅದರಂತೆಯೇ ನಡೆದುಕೊಳ್ಳಲಾಗುತ್ತಿದೆ ಎಂದು ಉತ್ತರ ವಿಭಾಗದ ಕಮಾಂಡ್‌ ಮುಖ್ಯಸ್ಥ ಲೆಫ್ಟಿನೆಂಟ್‌ ಜನರಲ್‌ ರಣಬೀರ್‌ ಸಿಂಗ್‌ ಸುದ್ದಿಗಾರರಿಗೆ ಹೇಳಿದ್ದಾರೆ.

ದಕ್ಷಿಣ ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯ ವುಜುರ್‌ನಲ್ಲಿ ಸಮಾರಂಭವೊಂದರಲ್ಲಿ ಸಿಂಗ್‌ ಭಾಗವಹಿಸಿದ್ದರು. ಆರ್ಮಿ ಗುಡ್‌ವಿಲ್‌ ಶಾಲೆಗೆ ಲ್ಯಾನ್ಸ್‌ ನಾಯಕ್‌ ನಾಜಿರ್‌ ಅಹ್ಮದ್‌ ವಾನಿ ಹೆಸರನ್ನು ನಾಮಕರಣ ಮಾಡಲಾಯಿತು. ಜನವರಿಯಲ್ಲಿ ಅಹ್ಮದ್‌ ವಾನಿಗೆ ಮರಣೋತ್ತರ ಅಶೋಕ ಚಕ್ರ ಪುರಸ್ಕಾರ ಪ್ರದಾನ ಮಾಡಲಾಗಿತ್ತು.

2018ರ ನವೆಂಬರ್‌ನಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಕುಲ್ಗಾಮ್‌ನಲ್ಲಿ ಅಹ್ಮದ್‌ ವಾನಿ ಹುತಾತ್ಮರಾಗಿದ್ದರು. ಆರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದವು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ