ಆ್ಯಪ್ನಗರ

ಸರಣಿ ಹಬ್ಬಗಳ ಸಮಯದಲ್ಲಿ ನಮ್ಮ ಜವಾಬ್ದಾರಿ ಮತ್ತಷ್ಟು ಹೆಚ್ಚಿದೆ : ಪ್ರಧಾನಿ ಮೋದಿ!

ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕೊರೊನಾ ಕಾಲದಲ್ಲಿ ಸರಣಿ ಹಬ್ಬಗಳು ಬಂದಿದ್ದು, ​ಈ ನಿಟ್ಟಿನಲ್ಲಿ ಭಾರತ ಮತ್ತಷ್ಟು ಜವಾಬ್ದಾರಿಯಿಂದ ವರ್ತಿಸಬೇಕಿದೆ ಎಂದು ದೇಶವಾಸಿಗಳಲ್ಲಿ ಮನವಿ ಮಾಡಿದರು.

Vijaya Karnataka Web 20 Oct 2020, 10:32 pm
ಹೊಸದಿಲ್ಲಿ: ಕೊರೊನಾ ವಿರುದ್ಧದ ಹೋರಾಟದಲ್ಲಿ ಜನತಾ ಕರ್ಫ್ಯೂನಿಂದ ಆರಂಭವಾಗಿ ಇದುವರೆಗೂ ನಾವು ಸಾಧಿಸಿದ ಪ್ರಗತಿ ಶ್ಲಾಘನೀಯ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕೊರೊನಾ ಕಾಲದಲ್ಲಿ ಸರಣಿ ಹಬ್ಬಗಳು ಬಂದಿದ್ದು, ಈ ನಿಟ್ಟಿನಲ್ಲಿ ಭಾರತ ಮತ್ತಷ್ಟು ಜವಾಬ್ದಾರಿಯಿಂದ ವರ್ತಿಸಬೇಕಿದೆ ಎಂದು ದೇಶವಾಸಿಗಳಲ್ಲಿ ಮನವಿ ಮಾಡಿದರು.



ಪ್ರಧಾನಿ ಮೋದಿ ಭಾಷಣದ ಪ್ರಮುಖ ಅಂಶಗಳು:
  • ಹಬ್ಬಗಳ ಸೀಸನ್‌ನಲ್ಲಿ ನಾವು ಮತ್ತಷ್ಟು ಜವಾಬ್ದಾರಿಯಿಂದ ವರ್ತಿಸಬೇಕಿದೆ.
  • ಭಾರತದ ಗುಣಮುಖ ಪ್ರಮಾಣ ಇಡೀ ವಿಶ್ವದಲ್ಲೇ ಅತ್ಯಧಿಕವಾಗಿದ್ದು, ನಾವು ಇದನ್ನು ಕಾಪಾಡಬೇಕಿದೆ.
  • ಭಾರತದಲ್ಲಿ ಕೊರೊನಾ ಗುಣಮುಖ ಪ್ರಮಾಣ ಶೇ.83ರಷ್ಟಿರುವುದು ನಮ್ಮ ಸಾಧನೆಯೇ ಸರಿ.
  • ಯಾವುದೇ ತರಹದ ಬೇಜವಾಬ್ದಾರಿ ನಮ್ಮ ಪ್ರಾಣಕ್ಕೆ ಕುತ್ತು ತರಬಲ್ಲದು ಎಂಬುದನ್ನು ನಾವು ಮರೆಯಬಾರದು.
  • ಕೊರೊನಾ ಲಸಿಕೆ ಬರುವವರೆಗೂ ನಾವು ಜಾಗರೂಕರಾಗಿಬೇಕು.
  • ಸರಣಿ ಹಬ್ಬಗಳು ದೇಶದಲ್ಲಿ ಹೊಸ ಚೈತನ್ಯ ತುಂಬಲಿ ಎಂದು ಹಾರೈಸಿದ ಪ್ರಧಾನಿ ಮೋದಿ.
  • ದೇಶದ ಜನತೆಗೆ ಸರಣಿ ಹಬ್ಬಗಳ ಶುಭ ಕೋರಿದ ಪ್ರಧಾನಿ ಮೋದಿ.
  • ಹಬ್ಬಗಳ ಸಮಯದಲ್ಲಿ ನಾನು ಪ್ರತಿಯೊಂದೂ ಕುಟುಂಬವೂ ಸುರಕ್ಷಿತವಾಗಿರುವುದನ್ನು ನೋಡಬಯಸುವುದಾಗಿ ಹೇಳಿದ ಪ್ರಧಾನಿ.
  • ಕೊರೊನಾ ವಿರುದ್ಧ ನಮ್ಮ ವೈದ್ಯಕೀಯ ಸಮುದಾಯ ನಡೆಸುತ್ತಿರುವ ನಿರಂತರ ಹೋರಾಟಕ್ಕೆ ಗೌರವ ನೀಡುವುದು ನಮ್ಮ ಜವಾಬ್ದಾರಿ ಎಂದ ಪ್ರಧಾನಿ.
  • ಸಾಮಾಜಿಕ ಅಂತರವೂ ಸೇರಿದಂತೆ ಎಲ್ಲಾ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಕೊರೊನಾ ವೈರಸ್‌ನ್ನು ನಾವು ಮಣಿಸೋಣ ಎಂದು ದೇಶದ ಜನತೆಗೆ ಕರೆ ನೀಡಿದ ಪ್ರಧಾನಿ.

ಹೀಗೆ ಕೊರೊನಾ ಕಾಲದ ಸರಣಿ ಹಬ್ಬಗಳ ಸಮಯದಲ್ಲಿ ಜನತೆ ನಿಭಾಯಿಸಬೇಕಾದ ಜವಾಬ್ದಾರಿಗಳ ಬಗ್ಗೆ ವಿಸ್ತೃತವಾಗಿ ಮಾತನಾಡಿದ ಪ್ರಧಾನಿ ಮೋದಿ, ಹಬ್ಬಗಳಿಂದ ದೇಶದಲ್ಲಿ ಹೊಸ ಚೈತನ್ಯ ನಲಿದಾಡುವಂತಾಗಲಿ ಎಂದು ಹಾರೈಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ