ಆ್ಯಪ್ನಗರ

ನೆರೆ ಭೀತಿ: ಕೊಲ್ಹಾಪುರದ 700 ನಿವಾಸಿಗಳ ಸ್ಥಳಾಂತರ

ಕಳೆದ ತಿಂಗಳು ಕೊಲ್ಹಾಪುರ ಸೇರಿದಂತೆ ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಮಳೆ ಹಾಗೂ ನೆರೆಗೆ 43 ಮಂದಿ ಮೃತಪಟ್ಟಿದ್ದರು. ಈಗ ಮತ್ತೆ ಭಾರಿ ಮಳೆಯಾಗುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ.

PTI 9 Sep 2019, 5:00 am
ಮುಂಬಯಿ: ಮಹಾರಾಷ್ಟ್ರದ ಕೊಲ್ಹಾಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶನಿವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಮನೆ ಮಾಡಿದ್ದು, ಕೊಲ್ಹಾಪುರದ 347 ಕುಟುಂಬಗಳ 700ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ತಾಣಗಳಿಗೆ ಸ್ಥಳಾಂತರಿಸಲಾಗಿದೆ.
Vijaya Karnataka Web kolhapura


ಕಳೆದ ತಿಂಗಳು ಕೊಲ್ಹಾಪುರ ಸೇರಿದಂತೆ ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಮಳೆ ಹಾಗೂ ನೆರೆಗೆ 43 ಮಂದಿ ಮೃತಪಟ್ಟಿದ್ದರು. ಈಗ ಮತ್ತೆ ಭಾರಿ ಮಳೆಯಾಗುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಮುಂಬಯಿ, ಠಾಣೆ, ರಾಯಗಢ ಹಾಗೂ ಪಾಲ್ಗರ್‌ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಹಲವು ಕಡೆಗಳಲ್ಲಿ ಶನಿವಾರ 100 ಮಿ.ಮೀಗೂ ಅಧಿಕ ಮಳೆಯಾಗಿದೆ. ಗೊಂಡಿಯಾದಲ್ಲಿ 208 ಮಿ.ಮೀ ಮಳೆ ಸುರಿದಿದೆ. ಕೊಂಕಣ ಹಾಗೂ ಮಧ್ಯ ಮಹಾರಾಷ್ಟ್ರಗಳಲ್ಲಿ ಸರಾಸರಿಗಿಂತ ಹೆಚ್ಚು ಮಳೆಯಾಗಿದೆ. ಆದರೆ ಮರಾಠವಾಡ ಪ್ರದೇಶದಲ್ಲಿ ಶೇ.18ರಷ್ಟು ಮಳೆ ಕೊರತೆಯಾಗಿದೆ. ರೈತರ ಆತ್ಮಹತ್ಯೆಗಳಿಂದ ಸದಾ ಸುದ್ದಿಯಲ್ಲಿರುವ ವಿದರ್ಭ ಪ್ರದೇಶದಲ್ಲಿಯೂ ಈ ಸಲ ವಾಡಿಕೆ ಪ್ರಮಾಣದ ಮಳೆಯಾಗಿದೆ.

ಕೊಚ್ಚಿಹೋದ ಬಾಲಕಿ: ಈ ಮಧ್ಯೆ, ಮಧ್ಯಪ್ರದೇಶದ ಹಲವು ಭಾಗಗಳಲ್ಲೂ ಭಾನುವಾರ ಮಳೆಯಾಗಿದೆ. ಭೋಪಾಲ್‌ನಲ್ಲಿ 2 ವರ್ಷದ ಬಾಲಕಿಯೊಬ್ಬಳು ಭಾನುವಾರ ಮಳೆ ನೀರಿನಿಂದ ತುಂಬಿ ಹರಿಯುತ್ತಿದ್ದ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದಾಳೆ. ಹಲವು ಗಂಟೆಗಳ ಶೋಧದ ಬಳಿಕ ಬಾಲಕಿಯ ಮೃತದೇಹ ಪತ್ತೆಯಾಗಿದೆ. ರಾಜ್ಯದ 32 ಜಿಲ್ಲೆಗಳಲ್ಲಿ 24 ಗಂಟೆಗಳಲ್ಲಿ ಮತ್ತಷ್ಟು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ