ಆ್ಯಪ್ನಗರ

ಪಿ. ಚಿದಂಬರಂ ನ್ಯಾಯಾಂಗ ಬಂಧನ ವಿಸ್ತರಣೆ : ಅ.3ರವರೆಗೂ ತಿಹಾರ್‌ ಜೈಲು

ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಡಿ ಬಂಧಿಯಾಗಿರುವ ಕಾಂಗ್ರಸ್‌ ಹಿರಿಯ ಮುಖಂಡ, ಕೇಂದ್ರ ಮಾಜಿ ಸಚಿವ ಪಿ.ಚಿದಂಬರಂ ಅವರ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಅಕ್ಟೋಬರ್‌ 3ರವೆರೆಗೂ ಇವರು ತಿಹಾರ್‌ ಜೈಲಿನಲ್ಲಿಯೇ ಇರಬೇಕಿದೆ.

TIMESOFINDIA.COM 19 Sep 2019, 5:25 pm
ನವದೆಹಲಿ: ಕಾಂಗ್ರಸ್‌ ಹಿರಿಯ ಮುಖಂಡ, ಕೇಂದ್ರ ಮಾಜಿ ಸಚಿವ ಪಿ.ಚಿದಂಬರಂ ಅವರನ್ನು ದೆಹಲಿ ವಿಶೇಷ ನ್ಯಾಯಾಲಯವು ನ್ಯಾಯಾಂಗ ಬಂಧನವನ್ನು ಮತ್ತೆ 14 ದಿನಗಳವರೆಗೆ ವಿಸ್ತರಿಸಿದೆ. ಅಂದರೆ, ನ್ಯಾಯಾಂಗ ಬಂಧನದಲ್ಲಿರುವ ಅವರು ಅಕ್ಟೋಬರ್‌ 3ರವರೆಗೂ ತಿಹಾರ್‌ ಜೈಲಿನಲ್ಲಿ ಇರಬೇಕಾಗುತ್ತದೆ. ನ್ಯಾಯಾಂಗ ಬಂಧನವನ್ನು ವಿಸ್ತರಿಸಿರುವ ನ್ಯಾಯಾಲಯ, ಚಿದಂಬರಂ ಅವರಿಗೆ ವಿಶೇಷ ಆರೋಗ್ಯ ತಪಾಸಣೆಗೂ ಸಮ್ಮತಿ ಸೂಚಿಸಿದೆ.
Vijaya Karnataka Web p. chidambaram


ಚಿದಂಬರಂ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸುವಂತೆ ಸಿಬಿಐ ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಸಿಬಿಐ ಮನವಿ ಆಧರಿಸಿ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿದೆ. ಚಿಂದಂಬರಂ ಅವರು ಜೈಲಿಗೆ ಬಂದ ಮೊದಲ ದಿನದಿಂದ ಈಗಿನವರೆಗೂ ಪರಿಸ್ಥಿತಿಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ನ್ಯಾಯಾಂಗ ಬಂಧನವನ್ನು ವಿಸ್ತರಿಸಬೇಕೆಂದು ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ನ್ಯಾಯಾಲಯವನ್ನು ಕೋರಿದ್ದರು.

ನ್ಯಾಯಾಂಗ ಬಂಧನ ವಿಸ್ತರಿಸುವಂತೆ ಕೋರಿದ್ದ ಸಿಬಿಐ ಮನವಿಗೆ ಚಿದಂಬರಂ ಪರ ಹಿರಿಯ ವಕೀಲ ಕಪಿಲ್‌ ಸಿಬಲ್‌ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ, ತಿಹಾರ್‌ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚಿಂದಂಬರಂ ಅವರಿಗೆ ವಿಶೇಷ ಆರೋಗ್ಯ ತಪಾಸಣೆ ಮತ್ತು ಸಾಕಷ್ಟು ಹೆಚ್ಚುವರಿ ಡಯಟ್‌ನ ಅವಕಾಶ ಕೋರಿ ಅರ್ಜಿ ಸಲ್ಲಿಸಿದ್ದರು.

ಸೆಪ್ಟೆಂಬರ್‌ 5ರಿಂದಲೂ ನ್ಯಾಯಾಂಗ ಬಂಧನದಲ್ಲಿರುವ ಚಿದಂಬರಂ ಅವರು ಹಲವು ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅವರು ತೂಕ ಕಳೆದುಕೊಂಡಿದ್ದಾರೆ. ಅವರಿಗೆ ಹೆಚ್ಚುವರಿ ಡಯಟ್‌ನ ಅವಶ್ಯಕತೆ ಇದೆ ಎಂದು ಹಿರಿಯ ವಕೀಲ ಕಪಿಲ್‌ ಸಿಬಲ್‌ ನ್ಯಾಯಾಲಯಕ್ಕೆ ತಿಳಿಸಿದ್ದರು.

ಚಿಂದಂಬರಂ ಅವರನ್ನು ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಡಿ ಬಂಧಿಸಲಾಗಿದೆ. ದೆಹಲಿಯ ವಿಶೇಷ ನ್ಯಾಯಾಲಯ ಸೆಪ್ಟೆಂಬರ್‌ 5ರಂದು 14 ದಿಗಳ ನ್ಯಾಯಾಂಗ ಬಂಧನಕ್ಕೆ ಸೂಚಿಸಿತ್ತು. ಇದೀಗ ಮತ್ತೊಮ್ಮೆ ನ್ಯಾಯಾಂಗ ಬಂಧನವನ್ನು 14 ದಿನಗಳವರೆಗೆ ವಿಸ್ತರಿಸಿದೆ . ವಿಶೇಷ ನ್ಯಾಯಾಧೀಶ ಅಜಯ್‌ ಕುಮಾರ್‌ ಕುಹರ್‌ ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ