ಆ್ಯಪ್ನಗರ

ಆಂಜನೇಯ ದೇವಸ್ಥಾನದ ಮೇಲೆ ಹಾರಾಡಿದ ಪಾಕ್ ಧ್ವಜ

ಸಾಂದರ್ಭಿಕ ಚಿತ್ರ

ಟೈಮ್ಸ್ ಆಫ್ ಇಂಡಿಯಾ 26 Aug 2017, 12:21 pm
ಜಬಲ್‌ಪುರ್: ಮಧ್ಯಪ್ರದೇಶದ ನರಸಿಂಗ್‌ಪುರ್ ಎಂಬಲ್ಲಿ ಆಂಜನೇಯ ದೇವಸ್ಥಾನದ ಮೇಲೆ ದುಷ್ಕರ್ಮಿಗಳು ಪಾಕಿಸ್ತಾನದ ಧ್ವಜ ಹಾರಿಸಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.
Vijaya Karnataka Web pakistani flag atop temple madhya pradesh town tense
ಆಂಜನೇಯ ದೇವಸ್ಥಾನದ ಮೇಲೆ ಹಾರಾಡಿದ ಪಾಕ್ ಧ್ವಜ


ಘಟನೆ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನೆ ನೀಡುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದು, ನರಸಿಂಗ್‌ಪುರ್ ಪ್ರದೇಶದಲ್ಲಿ 144 ಸೆಕ್ಸನ್ ಜಾರಿ ಮಾಡಲಾಗಿದೆ.

ಈ ದುಷ್ಕೃತ್ಯ ಎಸಗಿದವರನ್ನು ಪತ್ತೆ ಮಾಡಲು ಪೊಲೀಸರು ಇದುವರೆಗೂ 100ಕ್ಕೂ ಅಧಿಕ ಜನರನ್ನು ವಿಚಾರಣೆ ನಡೆಸಿದ್ದಾರೆ. 'ಘಟನೆಗೆ ಸಂಬಂಧಿಸಿದ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿತ್ತು. ಆದರೆ, ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಧ್ವಜ ಮೆರವಣಿಗೆ ನಡೆಸಲಾಗುತ್ತಿದೆ' ಎಂದು ನರಸಿಂಗ್‌ಪುರ್‌ನ ಹೆಚ್ಚುವರಿ ಪೊಲೀಸ್ ಆಯುಕ್ತ ಅಭಿಷೇಕ್ ರಾಜನ್ ತಿಳಿಸಿದ್ದಾರೆ.

ದೇವಾಲಯದ ಆಡಳಿತ ಮಂಡಳಿ ಪಾಕ್ ಧ್ವಜ ತೆರವುಗೊಳಿಸಿ, ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆಯನ್ನು ಖಂಡಿಸಿ ಬಲಪಂಥೀಯ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿವೆ.

JABALPUR: Authorities imposed section 144 in Madhya Pradesh's Narsinghpur after a Pakistani flag was found hoisted atop a Hanuman temple, triggering tension in town.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ