ಆ್ಯಪ್ನಗರ

ಕೇಂದ್ರ ಬಜೆಟ್‌ ಹೇಗಿರಬೇಕು, ನೀವು ಕೂಡ ಸಲಹೆ ನೀಡಬಹುದು.... ಹೀಗೆ ಮಾಡಿ...

ಕೇಂದ್ರ ಬಜೆಟ್‌ ಮಂಡನೆ ಮಾಡಲು ಈಗಾಗಲೇ ಎಲ್ಲ ತಯಾರಿ ನಡೆದಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಆರ್ಥಿಕ ತಜ್ಞರನ್ನು, ಉದ್ಯಮಿಗಳನ್ನು, ಇಲಾಖೆ ಹಿರಿಯರ ಜತೆ ಸಮಾಲೋಚನೆ ನಡೆಸಿದ್ದಾರೆ.

Vijaya Karnataka Web 8 Jan 2020, 9:41 pm
ಹೊಸದಿಲ್ಲಿ: ಮುಂದಿನ ತಿಂಗಳ ಮೊದಲ ವಾರದಲ್ಲಿ ಕೇಂದ್ರ ಸರಕಾರದ ಬಜೆಟ್‌ ಮಂಡನೆಯಾಗುವ ನಿರೀಕ್ಷೆ ಇದೆ. ಈ ಬಜೆಟ್‌ ಹೇಗಿರಬೇಕು, ನಿಮ್ಮ ಆಶಯಗಳೇನು ಎಂಬುದರ ಕುರಿತು ನಾಗರಿಕರು ಕೂಡ ಸಲಹೆ ನೀಡಬಹುದು.
Vijaya Karnataka Web ಬಜೆಟ್‌ 2020
ಬಜೆಟ್ 2020


ಇದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಸರಕಾರ ವಿಶೇಷ ಅವಕಾಶ ಮಾಡಿಕೊಟ್ಟಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ, ಮೈ ಗೌ ಡಾಟ್ ಇನ್‌ನಲ್ಲಿ ಪ್ರಸಕ್ತ ವರ್ಷದ ಕೇಂದ್ರ ಬಜೆಟ್‌ಗೆ ಸಲಹೆ ಮತ್ತು ಸೂಚನೆಗಳನ್ನು ಹಂಚಿಕೊಳ್ಳುವಂತೆ ಜನತೆಗೆ ಆಹ್ವಾನ ನೀಡಿದ್ದಾರೆ.

ಕೇಂದ್ರ ಮುಂಗಡಪತ್ರ, 130 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತಿದ್ದು, ದೇಶದ ಅಭಿವೃದ್ಧಿಯ ಮುಂದಿನ ಹಾದಿಯನ್ನು ಸೂಚಿಸುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.


2020-21ನೇ ಸಾಲಿನ ಕೇಂದ್ರ ಮುಂಗಡ ಪತ್ರಕ್ಕೆ ದೇಶದ ಜನತೆ ತಮ್ಮ ಸಲಹೆಗಳನ್ನು ನೀಡಬಹುದು ಎಂದು ಹಣಕಾಸು ಸಚಿವಾಲಯ ಸಹ ಸಲಹೆ ಮಾಡಿದೆ.

ಆರೋಗ್ಯ, ಶಿಕ್ಷಣ, ಬ್ಯಾಂಕಿಂಗ್, ಮೂಲಸೌಕರ್ಯ, ಇಂಧನ, ಗ್ರಾಮೀಣಾಭಿವೃದ್ಧಿ, ಕೃಷಿ ಹಾಗೂ ಆರ್ಥಿಕ ತಜ್ಞರು ಮತ್ತು ಕೈಗಾರಿಕಾ ಸಂಸ್ಥೆಗಳೂ ಸೇರಿದಂತೆ ವಿವಿಧ ವಲಯಗಳ ಪ್ರತಿನಿಧಿಗಳೊಂದಿಗೆ ಬಜೆಟ್ ಪೂರ್ವ ಸಮಾಲೋಚನೆಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಡೆಸಿದರು.

ಮುಂದಿನ ಫೆಬ್ರವರಿ ತಿಂಗಳ ಮೊದಲ ವಾರದಲ್ಲಿ ಕೇಂದ್ರ ಬಜೆಟ್ ಸಂಸತ್ತಿನಲ್ಲಿ ಮಂಡನೆಯಾಗುವ ನಿರೀಕ್ಷೆಯಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ