ಆ್ಯಪ್ನಗರ

ಇಂದಿನಿಂದ ಅಯೋಧ್ಯೆ ಕೇಸ್‌ ವಿಚಾರಣೆ

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್‌.ಎ.ಬೋಬ್ಡೆ ಹಾಗೂ ಬಿ.ಆರ್‌.ಗವಾಯಿ ಅವರನ್ನೊಳಗೊಂಡ ಪೀಠ ಈ ಅಭಿಪ್ರಾಯಪಟ್ಟಿದೆ.

PTI 6 Aug 2019, 5:00 am
ಹೊಸದಿಲ್ಲಿ: ಅಯೋಧ್ಯೆಯ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದ ಪ್ರಕರಣದ ವಿಚಾರಣೆ ಮಂಗಳವಾರದಿಂದ ಸುಪ್ರೀಂ ಕೋರ್ಟ್‌ನಲ್ಲಿ ಆರಂಭವಾಗಲಿದ್ದು, ಸಕಲ ವ್ಯವಸ್ಥೆಯ ಪರಿಶೀಲನೆ ನಂತರ ವಿಚಾರಣೆಯ ದಿನವಹಿ ಕಲಾಪಗಳನ್ನು ರೆಕಾರ್ಡ್‌ ಮಾಡಿಕೊಳ್ಳುವ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದೆ.
Vijaya Karnataka Web supremecourt1-ke4G--621x414@LiveMint


ಈ ಪ್ರಕರಣದಲ್ಲಿ ವಿಚಾರಣೆಯ ದಿನನಿತ್ಯದ ಕಲಾಪಗಳನ್ನು ನೇರ ಪ್ರಸಾರ ಮಾಡುವಂತೆ ಅಥವಾ ವಿಡಿಯೊ ರೆಕಾರ್ಡಿಂಗ್‌ ಮೂಲಕ ದಾಖಲಿಸಿಕೊಳ್ಳುವಂತೆ ಕೋರಿ ಆರೆಸ್ಸೆಸ್‌ ಮಾಜಿ ನಾಯಕ ಕೆ.ಎನ್‌.ಗೋವಿಂದಾಚಾರ್ಯ ಅವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್‌.ಎ.ಬೋಬ್ಡೆ ಹಾಗೂ ಬಿ.ಆರ್‌.ಗವಾಯಿ ಅವರನ್ನೊಳಗೊಂಡ ಪೀಠ ಈ ಅಭಿಪ್ರಾಯಪಟ್ಟಿದೆ.

ಅರ್ಜಿಯ ತುರ್ತು ವಿಚಾರಣೆಗೆ ನಿರಾಕರಿಸಿದ ಕೋರ್ಟ್‌, ''ನ್ಯಾಯಾಲಯದ ಕಾರ್ಯಕಲಾಪಗಳನ್ನು ನೇರ ಪ್ರಸಾರ ಮಾಡುವುದು ಅಥವಾ ವಿಡಿಯೊ ಚಿತ್ರೀಕರಣದ ಮೂಲಕ ದಾಖಲಿಸಿಕೊಳ್ಳುವುದು ಸುಲಭದ ಕಾರ್ಯವಲ್ಲ. ಇದಕ್ಕೆ ಸಿದ್ಧತೆಗಳು ಮತ್ತು ಸಾಧನಗಳ ವ್ಯವಸ್ಥೆ ಬೇಕಿದೆ. ಪರಿಶೀಲನೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು,'' ಎಂದು ಹೇಳಿದೆ.

ಸಾಂವಿಧಾನಿಕ ಹಾಗೂ ರಾಷ್ಟ್ರೀಯ ಹಿತಾಸಕ್ತಿ ಕುರಿತ ಪ್ರಕರಣಗಳ ವಿಚಾರಣೆಯ ನೇರ ಪ್ರಸಾರಕ್ಕೆ ಅವಕಾಶ ನೀಡಿ 2018ರ ಸೆಪ್ಟೆಂಬರ್‌ 26ರಂದು ಕೋರ್ಟ್‌ ತೀರ್ಪು ನೀಡಿತ್ತು. ಇದನ್ನು ಉಲ್ಲೇಖಿಸಿ ಅರ್ಜಿದಾರ ಗೋವಿಂದಾಚಾರ್ಯ ಅವರು ಅಯೋಧ್ಯೆ ಪ್ರಕರಣದ ವಿಚಾರಣೆಯಲ್ಲಿ ಇದಕ್ಕೆ ಅವಕಾಶ ಮಾಡಿಕೊಡಬೇಕೆಂದು ಕೋರ್ಟ್‌ ಮೊರೆ ಹೋಗಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ