ಆ್ಯಪ್ನಗರ

ಸಾಮಾನ್ಯ ಜನರ ದೃಷ್ಟಿಕೋನದಿಂದ ಆಡಳಿತ ನಡೆಸಿ: ಮೋದಿ ಸೂಚನೆ

ದೇಶದ ಶ್ರೀಸಾಮಾನ್ಯನನ್ನೂ ದೃಷ್ಟಿಯಲ್ಲಿಟ್ಟುಕೊಂಡು ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಸರಕಾರದ ವಿವಿಧ ಸಚಿವಾಲಯಗಳ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.

PTI 11 Jun 2019, 5:00 am
ಹೊಸದಿಲ್ಲಿ: ದೇಶದ ಶ್ರೀಸಾಮಾನ್ಯನನ್ನೂ ದೃಷ್ಟಿಯಲ್ಲಿಟ್ಟುಕೊಂಡು ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಸರಕಾರದ ವಿವಿಧ ಸಚಿವಾಲಯಗಳ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ. ಭಾರತೀಯ ಮತದಾರರು ಮುಂದಿನ ಐದು ವರ್ಷಗಳಲ್ಲಿ ದೇಶದ ಅಭಿವೃದ್ಧಿ ಕುರಿತು ತಮ್ಮದೇ ಕಲ್ಪನೆಗಳನ್ನು ಹೊಂದಿದ್ದಾರೆ. ಆಡಳಿತದಲ್ಲಿ ಇನ್ನಷ್ಟು ಸುಧಾರಣೆಗಳನ್ನು ಬಯಸಿದ್ದಾರೆ. ಜನರ ಈ ನಿರೀಕ್ಷೆಯನ್ನು ಸವಾಲು ಎಂದು ಪರಿಗಣಿಸದೇ ಅದನ್ನೊಂದು ಅವಕಾಶ ಎಂದು ತಿಳಿದು ಪ್ರಾಮಾಣಿಕ ನೆಲೆಯಲ್ಲಿ ಕಾರ್ಯಕ್ರಮಗಳನ್ನು ಜನಸ್ನೇಹಿ ಮಾದರಿಯಲ್ಲಿ ಅನುಷ್ಠಾನಗೊಳಿಸಿ ಎಂದು ನಿರ್ದೇಶನ ನೀಡಿದ್ದಾರೆ. ಮೇಕ್‌ ಇನ್‌ ಇಂಡಿಯಾ ಯೋಜನೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಬೇಕಿದ್ದು, ಈ ನಿಟ್ಟಿನಲ್ಲಿ ತ್ವರಿತಗತಿಯಲ್ಲಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಕಿವಿಮಾತು ಹೇಳಿದ್ದಾರೆ.
Vijaya Karnataka Web pm directs ministries to focus on ease of living for common man
ಸಾಮಾನ್ಯ ಜನರ ದೃಷ್ಟಿಕೋನದಿಂದ ಆಡಳಿತ ನಡೆಸಿ: ಮೋದಿ ಸೂಚನೆ




ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ