ಆ್ಯಪ್ನಗರ

ಕೇರಳದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ: 500 ಕೋಟಿ ರೂ. ತುರ್ತು ಪರಿಹಾರ ಘೋಷಣೆ

ಶತಮಾನದ ಮಹಾಮಳೆಗೆ ದೇವರ ನಾಡು ಕೇರಳ ನಲುಗಿ ಹೋಗಿದ್ದು, ಜನರ ಬದುಕು ಮೂರಾಬಟ್ಟೆಯಾಗಿದೆ. ಈ ಹಿನ್ನೆಲೆ ನಿನ್ನೆ ರಾತ್ರಿ ಕೇರಳಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ಪ್ರವಾಹ ಪೀಡಿತ ಪ್ರದೇಶಗಳನ್ನು ವೈಮಾನಿಕ ಸಮೀಕ್ಷೆ ನಡೆಸಿದರು. ಅಲ್ಲದೆ, ತುರ್ತು ಪರಿಹಾರವಾಗಿ 500ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಪ್ರಧಾನಿ ಆದೇಶಿಸಿದ್ದಾರೆ.

TIMESOFINDIA.COM 18 Aug 2018, 1:14 pm
ತಿರುವನಂತಪುರ: ಶತಮಾನದ ಮಹಾಮಳೆಗೆ ದೇವರ ನಾಡು ಕೇರಳ ನಲುಗಿ ಹೋಗಿದ್ದು, ಜನರ ಬದುಕು ಮೂರಾಬಟ್ಟೆಯಾಗಿದೆ. ಈ ಹಿನ್ನೆಲೆ ನಿನ್ನೆ ರಾತ್ರಿ ಕೇರಳಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ಪ್ರವಾಹ ಪೀಡಿತ ಪ್ರದೇಶಗಳನ್ನು ವೈಮಾನಿಕ ಸಮೀಕ್ಷೆ ನಡೆಸಿದರು. ಅಲ್ಲದೆ, ತುರ್ತು ಪರಿಹಾರವಾಗಿ 500ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಪ್ರಧಾನಿ ಆದೇಶಿಸಿದ್ದಾರೆ.
Vijaya Karnataka Web kerala modi 2


ಬೆಳಗ್ಗೆಯಿಂದ ಅಧಿಕಾರಿಗಳೊಂದಿಗೆ ಕೇರಳ ಪರಿಸ್ಥಿತಿ ಕುರಿತು ಸುದೀರ್ಘ ಸಮಾಲೋಚನೆ ನಡೆಸಿದ ಪ್ರಧಾನಿ ಮೋದಿ, ಅಲ್ಲಿನ ಪರಿಸ್ಥಿತಿಯನ್ನು ತಿಳಿದುಕೊಂಡರು. ಈ ವೇಳೆ, ಕೇರಳ ರಾಜ್ಯಪಾಲ ಪಿ.ಸದಾಶಿವಂ ಹಾಗೂ ಸಿಎಂ ಪಿಣರಾಯಿ ವಿಜಯನ್‌ ಜತೆಗೂ ಮೋದಿ ಸಮಾಲೋಚನೆ ನಡೆಸಿದರು. ಅಲ್ಲದೆ, ಕೇರಳ ರಾಜ್ಯಕ್ಕೆ ಕೇಂದ್ರ ಸರಕಾರದಿಂದ 500 ಕೋಟಿ ರೂ. ಅನ್ನು ತುರ್ತು ಪರಿಹಾರವಾಗಿ ಘೋಷಿಸಿದರು. ಹಣಕಾಸಿನ ಸಹಾಯದ ಜತೆಗೆ ಆಹಾರ ಧಾನ್ಯ, ಔಷಧ ಮುಂತಾದ ಎಲ್ಲ ರೀತಿಯ ಸಹಾಯಕ್ಕೆ ಕೇಂದ್ರ ಸರಕಾರ ಸಿದ್ಧವಿದೆ ಎಂದು ಮೋದಿ ಭರವಸೆ ನೀಡಿದ್ದಾರೆ. ಇತ್ತೀಚೆಗಷ್ಟೇ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ 100 ಕೋಟಿ ರೂ. ಗಳ ತುರ್ತು ಪರಿಹಾರ ಘೋಷಿಸಿದ್ದರು. ಈಗ, ಮತ್ತೆ 500 ಕೋಟಿ ರೂ. ಘೋಷಿಸಿದ್ದಾರೆ.

ಮೋದಿ ಸಭೆ


ಇನ್ನು, ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ವೇಳೆ ಪ್ರಧಾನಿ ಜತೆಗೆ ಕೇರಳ ರಾಜ್ಯಪಾಲ ಸದಾಶಿವಂ, ಸಿಎಂ ಪಿಣರಾಯಿ ವಿಜಯನ್, ಕೇಂದ್ರ ಪ್ರವಾಸೋದ್ಯಮ ಖಾತೆ ಸಚಿವ ಕೆ.ಜೆ.ಆಲ್ಫೋನ್ಸ್‌ ಸಾಥ್ ನೀಡಿದ್ದರು. ಇದರೊಂದಿಗೆ ಎನ್‌ಡಿಆರ್‌ಎಫ್ ಸಿಬ್ಬಂದಿ, ಸೇನೆ ಪ್ರವಾಹದಲ್ಲಿ ತೊಂದರಗೆ ಸಿಲುಕಿರುವ ಜನರನ್ನು ರಕ್ಷಣೆ ಮಾಡುತ್ತಿದ್ದಾರೆ.



ಕೇರಳದಲ್ಲಿ ಸುರಿಯುತ್ತಿರುವ ಮಹಾ ಮಳೆಗೆ ಸಿಲುಕಿ ಸಾವಿನ ಸಂಖ್ಯೆ ಏರುತ್ತಲೇ ಇದೆ. ಇಂದು ಮಧ್ಯಾಹ್ನದವರೆಗೆ ಮತ್ತೆ 9 ಮಂದಿ ಬಲಿಯಾಗಿದ್ದು, ಆಗಸ್ಟ್ 9 ರಿಂದ ಇದುವರೆಗೆ 187 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಮೇ ತಿಂಗಳಿಂದ ಇದುವರೆಗೆ ಬಲಿಯಾದವರ ಸಂಖ್ಯೆ 338ಕ್ಕೆ ಹೆಚ್ಚಾಗಿದೆ. ಈ ಹಿನ್ನೆಲೆ, ಕೇರಳದ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕೆಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಮೋದಿಯನ್ನು ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ