ಆ್ಯಪ್ನಗರ

ಕಾಂಗ್ರೆಸ್‌ ನಾಯಕ ಅಹ್ಮದ್‌ ಪಟೇಲ್‌ ನಿಧನ: ಪುತ್ರ ಫೈಜಲ್‌ ಜೊತೆ ಫೋನ್‌ ಮೂಲಕ ಮಾತನಾಡಿದ ಪ್ರಧಾನಿ ಮೋದಿ

ಅಹ್ಮದ್ ಪಟೇಲ್ ಸುದ್ದಿ ಅಘಾತವನ್ನುಂಟು ಮಾಡಿದೆ. ತಮ್ಮ ಬಹುತೇಕ ಜೀವನವನ್ನ ಸಮಾಜ ಸೇವೆಗೆ ಮುಡಿಪಾಗಿಟ್ಟಿದ್ದರು. ಕಾಂಗ್ರೆಸ್ ಪಕ್ಷ ಕಟ್ಟುವಲ್ಲಿ ಅಹ್ಮದ್ ಪಟೇಲ್ ಅವರ ಪಾತ್ರ ಪ್ರಮುಖವಾದದ್ದು. ತಮ್ಮ ಅಗಾಧ ನೆನಪಿನ ಶಕ್ತಿಗೆ ಪಟೇಲರು ಹೆಸರುವಾಸಿಯಾಗಿದ್ದರು ಎಂದು ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.

Vijaya Karnataka Web 25 Nov 2020, 8:25 am
ಹೊಸದಿಲ್ಲಿ: ಕಳೆದ ತಿಂಗಳು ಕೊರೊನಾ ಪಾಸಿಟಿವ್‌ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಕಾಂಗ್ರೆಸ್‌ ನಾಯಕ ಅಹ್ಮದ್ ಪಟೇಲ್ ಅವರು ನಿಧನರಾಗಿದ್ದಾರೆ. ಸೋನಿಯಾ ಗಾಂಧಿ ಆಪ್ತ ಎಂದೇ ಬಿಂಬಿತವಾಗಿದ್ದ ಕಾಂಗ್ರೆಸ್‌ನ ನಿಷ್ಠಾವಂತ ನಾಯಕ ಬುಧವಾರ ಮುಂಜಾನೆ 3.30ರ ಸುಮಾರಿಗೆ ನಿಧನರಾಗಿದ್ದಾರೆ.
Vijaya Karnataka Web Ahmed Patel
Senior Congress leader Ahmed Patel (File Photo)


71 ವರ್ಷ ವಯಸ್ಸಿನ ಅಹ್ಮದ್‌ ಪಟೇಲ್ ಅವರು ಕೊರೊನಾ ಪಾಸಿಟಿವ್ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರಾದರೂ, ಬಹುಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ. ಇದೀಗ ಅವರ ನಿಧನದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅಹ್ಮದ್ ಪಟೇಲ್ ಸುದ್ದಿ ಅಘಾತವನ್ನುಂಟು ಮಾಡಿದ್ದು, ಅವರ ಪುತ್ರ ಫೈಜಲ್‌ ಜೊತೆ ಮಾತನಾಡಿರುವುದಾಗಿ ಪ್ರಧಾನಿ ಮೋದಿ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಹಿರಿಯ ಕಾಂಗ್ರೆಸ್‌ ನಾಯಕ ಅಹ್ಮದ್ ಪಟೇಲ್‌ ನಿಧನ: 'ದುಃಖದ ದಿನ' ಎಂದ ರಾಹುಲ್‌-ಪ್ರಿಯಾಂಕ ಗಾಂಧಿ!

"ಅಹ್ಮದ್ ಪಟೇಲ್ ಸುದ್ದಿ ಅಘಾತವನ್ನುಂಟು ಮಾಡಿದೆ. ತಮ್ಮ ಬಹುತೇಕ ಜೀವನವನ್ನ ಸಮಾಜ ಸೇವೆಗೆ ಮುಡಿಪಾಗಿಟ್ಟಿದ್ದರು. ಕಾಂಗ್ರೆಸ್ ಪಕ್ಷ ಕಟ್ಟುವಲ್ಲಿ ಅಹ್ಮದ್ ಪಟೇಲ್ ಅವರ ಪಾತ್ರ ಪ್ರಮುಖವಾದದ್ದು. ತಮ್ಮ ಅಗಾಧ ನೆನಪಿನ ಶಕ್ತಿಗೆ ಪಟೇಲರು ಹೆಸರುವಾಸಿಯಾಗಿದ್ದರು. ಪಟೇಲ್ ಅವರ ಪುತ್ರ ಫೈಸಲ್ ಜೊತೆ ಮಾತನಾಡಿದ್ದು, ಅಹ್ಮದ್ ಆತ್ಮಕ್ಕೆ ಶಾಂತಿ ಸಿಗಲಿ" ಎಂದು ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ