ಆ್ಯಪ್ನಗರ

ಜೀವಹಾನಿಯಿಂದ ನೊಂದಿದ್ದೇನೆ: ಪಾಕ್ ವಿಮಾನ ದುರಂತಕ್ಕೆ ಮೋದಿ ವಿಷಾದ!

ಪಾಕಿಸ್ತಾನದ ಕರಾಚಿ ಬಳಿ ಸಂಭವಿಸಿರುವ ವಿಮಾನ ಅಪಘಾತಕ್ಕೆ ಖೇದ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಅಪಘಾತದಲ್ಲಿ ಮೃತಪಟ್ಟವರ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಪ್ರಯಾಣಿಕರು ಶೀಘ್ರವಾಗಿ ಗುಣಮುಖರಾಗಲಿ ಎಂದು ಮೋದಿ ಹಾರೈಸಿದ್ದಾರೆ.

Vijaya Karnataka Web 22 May 2020, 7:19 pm
ನವದೆಹಲಿ: ಪಾಕಿಸ್ತಾನದ ಕರಾಚಿ ಬಳಿ ಸಂಭವಿಸಿರುವ ವಿಮಾನ ಅಪಘಾತಕ್ಕೆ ಖೇದ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಜೀವಹಾನಿಯಿಂದ ಮನಸ್ಸಿಗೆ ನೋವುಂಟಾಗಿದೆ ಎಂದು ಹೇಳಿದ್ದಾರೆ.
Vijaya Karnataka Web Narendra Modi
ಸಂಗ್ರಹ ಚಿತ್ರ


ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಕರಾಚಿ ಬಳಿ ಸಂಭವಿಸಿರುವ ವಿಮಾನ ದುರಂತ ಅತ್ಯಂತ ಖೇದಕರ ಎಂದು ಬಣ್ಣಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬ ವರ್ಗಕ್ಕೆ ಪ್ರಧಾನಿ ಮೋದಿ ಸಾಂತ್ವನ ಹೇಳಿದ್ದಾರೆ.

ಪಾಕಿಸ್ತಾನದಲ್ಲಿ ವಿಮಾನ ದುರಂತ: ಸಿಬ್ಬಂದಿಯೂ ಸೇರಿ ಎಲ್ಲಾ 107 ಪ್ರಯಾಣಿಕರ ದುರ್ಮರಣ?

ಇದೇ ವೇಳೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಪ್ರಯಾಣಿಕರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿರುವ ಪ್ರಧಾನಿ ಮೋದಿ, ದೇವರು ಆಪ್ತರ ಸಾವಿನ ದು:ಖವನ್ನು ಭರಿಸುವ ಶಕ್ತಿ ಕುಟುಂಬಸ್ಥರಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.


ಲಾಹೋರ್‌ನಿಂದ ಕರಾಚಿಗೆ ಬರುತ್ತಿದ್ದ ಪಾಕಿಸ್ತಾನ ಅಂತಾರಾಷ್ಟ್ರೀಯ ವಿಮಾನದ PIAನ PK-8303 ವಿಮಾನ ಕರಾಚಿಯ ಜಿನ್ನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವ ಕೆಲವೇ ನಿಮಿಷಗಳ ಮೊದಲು ಅಪಘಾತಕ್ಕೀಡಾಗಿತ್ತು.

ಇನ್ನೈದು ನಿಮಿಷದಲ್ಲಿ ಇಳಿಯಬೇಕಾಗಿದ್ದ ವಿಮಾನ ದುರಂತ ಅಂತ್ಯ ಕಂಡಾಗ...!

ಕರಾಚಿನಿಲ್ದಾಣದಿಂದ ಸ್ವಲ್ಪ ದೂರದಲ್ಲಿರುವ ಮಾಲಿರ್‌ನ ಮಾಡೆಲ್ ಕಾಲೋನಿ ಬಳಿಯ ಜಿನ್ನಾ ಗಾರ್ಡ್‌ನ್ ವಸತಿ ಪ್ರದೇಶದಲ್ಲಿ ವಿಮಾನ ಅಪಘಾತಕ್ಕೀಡಾಗಿರುವುದು ಸಾವು-ನೋವಿನ ಸಂಖ್ಯೆ ಹೆಚ್ವಳದ ಆತಂಕಕ್ಕೆ ಕಾರಣವಾಗಿದೆ. ಪಾಕಿಸ್ತಾನ ಅಧಿಕೃತ ಸಾವಿನ ಸಂಖ್ಯೆಯನ್ನು ಇನ್ನಷ್ಟೇ ಪ್ರಕಟಿಸಬೇಕಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ