ಆ್ಯಪ್ನಗರ

ಗುಜರಾತ್ ಆಸ್ಪತ್ರೆ ಅಗ್ನಿ ದುರಂತದಲ್ಲಿ 8 ಮಂದಿ ಸಜೀವ ದಹನ.! ಪ್ರಧಾನಿ ಮೋದಿ ಸಂತಾಪ

ಅಗ್ನಿ ದುರಂತ ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಕುಟುಂಬ ಸದಸ್ಯರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೇ ಘಟನೆ ಬಗ್ಗೆ ಮುಖ್ಯಮಂತ್ರಿ ಹಾಗೂ ಮೇಯರ್ ಜೊತೆ ಮಾತನಾಡಿದ್ದೇನೆ ಎಂದು ತಿಳಿಸಿದ್ದಾರೆ.

TIMESOFINDIA.COM 6 Aug 2020, 10:57 am
ಅಹ್ಮದಾಬಾದ್: ಗುಜರಾತ್‌ನ ಅಹ್ಮದಾಬಾದ್‌ನ ನವರಂಗಪುರದಲ್ಲಿರು ಶ್ರೇಯ್ ಆಸ್ಪತ್ರೆಯಲ್ಲಿ ಬುಧವಾರ ತಡ ರಾತ್ರಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಂಟು ಮಂದಿ ರೋಗಿಗಳು ಸಜೀವ ದಹನವಾಗಿದ್ದಾರೆ ಎಂದು ತಿಳಿದು ಬಂದಿದೆ.
Vijaya Karnataka Web Shrey hospital


ಅಡ್ವಾಣಿಯನ್ನು ಮರೆತ ಮೋದಿ, ಗೌರವ ಸಲ್ಲಿಸಿದ ಯೋಗಿ, ಭಾಗವತ್

ಆಸ್ಪತ್ರೆಯ ನಾಲ್ಕನೇ ಮಹಡಿಯಲ್ಲಿ ಐಸಿಯುನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ತಕ್ಷಣ ಕಾರ್ಯಪ್ರವೃತ್ತರಾದ ಆಸ್ಪತ್ರೆಯ ಸಿಬ್ಬಂದಿ 35ಕ್ಕೂ ಹೆಚ್ಚು ರೋಗಿಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿದ್ದರು. ಅದಾಗ್ಯೂ ಎಂಟು ರೋಗಿಗಳು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ.

ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ ಜಿಸಿ ಮುರ್ಮು ರಾಜೀನಾಮೆ!

ಕೆಲ ದಿನಗಳ ಹಿಂದಷ್ಟೇ ಈ ಆಸ್ಪತ್ರೆಯನ್ನು ಕೋವಿಡ್ ಕೇರ್ ಸೆಂಟರ್ ಆಗಿ ಮಾರ್ಪಡಿಸಲಾಗಿತ್ತು, ಆದರೆ ಘಟನೆಗೆ ಸೂಕ್ತ ಕಾರಣ ಇನ್ನೂ ತಿಳಿದು ಬಂದಿಲ್ಲ. ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಕುಟುಂಬ ಸದಸ್ಯರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೇ ಘಟನೆ ಬಗ್ಗೆ ಮುಖ್ಯಮಂತ್ರಿ ಹಾಗೂ ಮೇಯರ್ ಜೊತೆ ಮಾತನಾಡಿದ್ದೇನೆ ಎಂದು ತಿಳಿಸಿದ್ದಾರೆ.



ರಾಮ ಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಿದ ನಂತರ ಪ್ರಧಾನಿ ಮೋದಿಯವರು ಮಾಡಿದ ಸಂಪೂರ್ಣ ಭಾಷಣ

ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಅವರು ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದು, ಗಾಯಾಳುಗಳಿಗೆ 50 ಸಾವಿರ ರೂಪಾಯಿ ಘೋಷಿಸಿದ್ದಾರೆ. ಘಟನೆ ಬಗ್ಗೆ ಕೂಲಂಕುಶ ತನಿಖೆಗೆ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಆದೇಶಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ