ಆ್ಯಪ್ನಗರ

3 ಗಂಟೆಗೆ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಮಹತ್ವದ ವಿಡಿಯೋ ಕಾನ್ಫರೆನ್ಸ್!

ಪ್ರಧಾನಿ ಮೋದಿ ಇಂದು(ಮಂಗಳವಾರ) ಮತ್ತು ನಾಳೆ(ಬುಧವಾರ)ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಧ ನಡೆಸಲಿದ್ದಾರೆ. ಕೊರೊನಾ ವೈರಸ್ ಹಾವಳಿ ಆರಂಭವಾದಾಗಿನಿಂದ ಮುಖ್ಯಮಂತ್ರಿಗಳೊಂದಿಗೆ ಇದು ಪ್ರಧಾನಿ ಮೋದಿ ಅವರ ಏಳನೇ ವಿಡಿಯೋ ಕಾನ್ಫರೆನ್ಸ್ ಆಗಿರಲಿದೆ.

Vijaya Karnataka Web 16 Jun 2020, 10:16 am
ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ರಾಜ್ಯಗಳ ಪರಿಸ್ಥಿತಿ ಅರಿಯಲು ಪ್ರಧಾನಿ ಮೋದಿ ಇಂದು(ಮಂಗಳವಾರ) ಮಧ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.
Vijaya Karnataka Web PM Modi
ಸಂಗ್ರಹ ಚಿತ್ರ


ಇಂದು(ಮಂಗಳವಾರ) ಮತ್ತು ನಾಳೆ(ಬುಧವಾರ) ದೇಶದ ಎಲ್ಲಾ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಲಿದ್ದು, ಕೊರೊನಾ ವೈರಸ್ ನಿಯಂತ್ರಿಸಲು ಆಯಾ ರಾಜ್ಯ ಸರ್ಕಾರಗಳು ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಪಡೆಯಲಿದ್ದಾರೆ.

ಮೋದಿ-ಮುಖ್ಯಮಂತ್ರಿಗಳ ಸಭೆಯಲ್ಲಿ ಚರ್ಚೆಯಾಗಿದ್ದೇನು?

ಇಂದು(ಮಂಗಳವಾರ) 21 ರಾಜ್ಯಗಳು ಹಾಗೂ 3 ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಿರುವ ಪ್ರಧಾನಿ, ನಾಳೆ(ಬುಧವಾರ) 15 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಾಳಿನ(ಬುಧವಾರ) ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಭಾಗವಹಿಸಲಿದ್ದಾರೆ.


ಈ ಕುರಿತು ಮಾಹಿತಿ ನೀಡಿರುವ ಪ್ರಧಾನಿ ಕಚೇರಿ, ಮಧ್ಯಾಹ್ನ 3 ಗಂಟೆಗೆ ಪ್ರಧಾನಿ ಮೋದಿ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದು, ಆಯಾ ರಾಜ್ಯಗಳಲ್ಲಿ ಕೊರೊನಾ ವೈರಸ್ ಸ್ಥಿತಿಗತಿಯ ಮಾಹಿತಿ ಪಡೆಯಲಿದ್ದಾರೆ ಎಂದು ಸ್ಪಷ್ಟಪಡಿಸಿದೆ.

ಕೊರೊನಾ ವೈರಸ್ ಹಾವಳಿ ಆರಂಭವಾದಾಗಿನಿಂದ ದೇಶದ ಎಲ್ಲಾ ಮುಖ್ಯಮಂತ್ರಿಗಳೊಂದಿಗೆ ಇದು ಪ್ರಧಾನಿ ಮೋದಿ ಅವರ ಏಳನೇ ವಿಡಿಯೋ ಕಾನ್ಫರೆನ್ಸ್ ಆಗಿರಲಿದೆ.

ಸಿಎಂಗಳೊಂದಿಗೆ ಮೋದಿ ವಿಡಿಯೋ ಸಂವಾದ, ನಿರ್ಧಾರವಾಗುತ್ತಾ ಲಾಕ್‌ಡೌನ್ ಭವಿಷ್ಯ?

ಕೊರೊನಾ ಪರೀಕ್ಷೆಯನ್ನು ದ್ವಿಗುಣಗೊಳಿಸುವ ಹಾಗೂ ಇನ್ನಿತರ ಪ್ರಮುಖ ವಿಷಯಗಳ ಕುರಿತು ಇಂದಿನ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆ ದಟ್ಟವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ