ಆ್ಯಪ್ನಗರ

ಡಿಸಿಜಿಐ ನಿರ್ಧಾರ ಸ್ವಾಗತಿಸಿದ ಪ್ರಧಾನಿ: ಭಾರತೀಯರು ಹೆಮ್ಮೆಪಡುವ ಕ್ಷಣ ಎಂದ ಮೋದಿ!

ದೇಶದ ಮೊಟ್ಟ ಮೊದಲ ಕೊರೊನಾ ವೈರಸ್ ಲಸಿಕೆಗೆ, ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ) ಅನುಮತಿ ನೀಡಿರುವದನ್ನು ಸ್ವಾಗತಿಸಿರುವ ಪ್ರಧಾನಿ ಮೋದಿ, ಇದು ಪ್ರತಿಯೊಬ್ಬ ಭಾರತೀಯರೂ ಹೆಮ್ಮೆಪಡುವ ಕ್ಷಣ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

Vijaya Karnataka Web 3 Jan 2021, 11:43 am
ಹೊಸದಿಲ್ಲಿ: ದೇಶದ ಮೊಟ್ಟ ಮೊದಲ ಕೊರೊನಾ ವೈರಸ್ ಲಸಿಕೆಗೆ, ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ) ಅನುಮತಿ ನೀಡಿದೆ.
Vijaya Karnataka Web PM Modi
ಸಂಗ್ರಹ ಚಿತ್ರ


ಆಕ್ಸ್‌ಫರ್ಡ್‌-ಆಸ್ಟ್ರಾಜೆನಿಕಾ ಕೊರೊನಾ ಲಸಿಕೆ ಹಾಗೂ ಭಾರತ್ ಬಯೋಟೆಕ್ ಸಂಸ್ಥೆಯ ಕೋವ್ಯಾಕ್ಸಿನ್‌ ಲಸಿಕೆಗಳ ಸಾರ್ವತ್ರಿಕ ಬಳಕೆಗೆ ಅನುಮತಿ ನೀಡಿರುವ ಡಿಸಿಜಿಐ, ಶೀಘ್ರದಲ್ಲೇ ಈ ಲಸಿಕೆ ಹಂಚಿಕೆ ಹಾಗೂ ವಿತರಣೆಗೆ ಮುಂದಡಿ ಇಡಲಾಗುವುದು ಎಂದು ಸ್ಪಷ್ಟಪಡಿಸಿದೆ. ಈ
ಎರಡೂ ಲಸಿಕೆಗಳನ್ನು ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ ಎಂದೂ ಡಿಸಿಜಿಐ ಸ್ಪಷ್ಟಪಡಿಸಿದೆ.

ಇನ್ನು ಡಿಸಿಜಿಐ ನಿರ್ಧಾರವನ್ನು ಸ್ವಾಗತಿಸಿರುವ ಪ್ರಧಾನಿ ಮೋದಿ, ಇದು ಪ್ರತಿಯೊಬ್ಬ ಭಾರತೀಯರೂ ಹೆಮ್ಮೆಪಡುವ ಕ್ಷಣ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಭಾರತಕ್ಕೆ ಸಿಕ್ತು ಲಸಿಕೆ ಬಲ: ದೇಶದ ಮೊಟ್ಟ ಮೊದಲ ಕೊರೊನಾ ಲಸಿಕೆಗೆ ಡಿಸಿಜಿಐ ಸಮ್ಮತಿ!


ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ದೇಶವಾಸಿಗಳು ಬಹಳ ದಿನಗಳಿಂಧ ಕಾತರದಿಂದ ಕಾಯುತ್ತಿದ್ದ ಕ್ಷಣ ಬಂದಾಗಿದೆ ಎಂದು ಹೇಳಿದ್ದಾರೆ.

ಕೊರೊನಾ ಲಸಿಕೆಗೆ ಅನುಮತಿ ನೀಡಿರುವ ಡಿಸಿಜಿಐ ನಿರ್ಧಾರವನ್ನು ಐತಿಹಾಸಿಕ ಎಂದು ಬಣ್ಣಿಸಿರುವ ಪ್ರಧಾನಿ ಮೋದಿ, ಲಸಿಕೆ ಲಭ್ಯತೆಗಾಗಿ ಶ್ರಮಿಸಿದ ವೈದ್ಯ ವಿಜ್ಞಾನಿಗಳ ಶ್ರಮವನ್ನು ದೇಶ ಸದಾ ಸ್ಮರಿಸಲಿದೆ ಎಂದು ಹೇಳಿದ್ದಾರೆ.

ಕೊರೊನಾ ವೈರಸ್‌ಗೆ ಇದೆ ಲಸಿಕೆ.. ಆದ್ರೂ ಇರಲಿ ಎಚ್ಚರಿಕೆ..! ಪ್ರಧಾನಿ ಮೋದಿ ಕರೆ..

ಡಿಸಿಜಿಐ ಅನುಮತಿ ನೀಡಿರುವ ಕೊರೊನಾ ಲಸಿಕೆಗಳು ದೇಶೀಯ ನಿರ್ಮಿತವಾಗಿದ್ದು, ನಮ್ಮ ವೈದ್ಯ ವಿಜ್ಞಾನಿಗಳು ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಕಟಿಬದ್ಧರಾಗಿದ್ದಾರೆ ಎಂಬುದಕ್ಕೆ ಇದು ಸಾಕ್ಷಿ ಎಂದು ಪ್ರಧಾನಿ ಮೋದಿ ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ.

ದೇಶದಿಂದ ಮಾರಕ ಕೊರೊನಾ ವೈರಸ್‌ನ್ನು ಒದ್ದೊಡಿಸುವ ಕ್ಷಣ ಹತ್ತಿರವಾಗಿದ್ದು, ಈ ವೇಳೆ ನಾನು ದೇಶದ ವೈದ್ಯಕೀಯ ಸಮುದಾಯ, ಪೊಲೀಸ್, ಕೊರೊನಾ ವಾರಿಯರ್ಸ್‌ಗಳಿಗೆ ತುಂಬು ಹೃದುಯದ ಧನ್ಯವಾದ ಅರ್ಪಿಸುವುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ