ಆ್ಯಪ್ನಗರ

ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಇಂದು ಸಂಜೆ 6 ಗಂಟೆಗೆ ಭಾಷಣ

ಆರ್ಥಿಕ ಪ್ರಗತಿಗೆ ಕೈಗೊಳ್ಳುವ ಕ್ರಮಗಳ ಕುರಿತು ಪ್ರಧಾನಿ ಮೋದಿ ಇಂದಿನ ಭಾಷಣದಲ್ಲಿ ಪ್ರಸ್ತಾಪಿಸುವ ಸಾಧ್ಯತೆ ಇದೆ. ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರಕಾರಗಳ ನಡುವೆ ಸಾಕಷ್ಟು ಚರ್ಚೆಯಾಗಿದ್ದು, ಈ ಎಲ್ಲ ವಿಷಯಗಳ ಕುರಿತು ಪ್ರಧಾನಿ ಮಾತನಾಡಬಹುದು ಎಂದು ಅಂದಾಜಿಸಲಾಗಿದೆ.

Vijaya Karnataka Web 20 Oct 2020, 1:51 pm
ಹೊಸದಿಲ್ಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಂಗಳವಾರ ಸಂಜೆ (ಅಕ್ಟೋಬರ್‌ 20) 6 ಗಂಟೆಗೆ ಭಾಷಣ ಮಾಡಲಿದ್ದಾರೆ.
Vijaya Karnataka Web ನರೇಂದ್ರ ಮೋದಿ
ನರೇಂದ್ರ ಮೋದಿ


ಕೊರೊನಾ ಸೋಂಕು ಹಾಗೂ ಸಾಲು ಸಾಲುಗಳ ಹಬ್ಬದ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಮಂಗಳವಾರ ಸಂಜೆ 6 ಗಂಟೆಗೆ ದೇಶವಾಸಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ಕುರಿತು ಖುದ್ದು ಪ್ರಧಾನಮಂತ್ರಿಯೇ ಟ್ವೀಟ್‌ ಮಾಡಿದ್ದಾರೆ.


ಕೊರೊನಾ ಮತ್ತು ಆ ನಂತರ ಜಾರಿಗೆ ತರಲಾದ ಲಾಕ್‌ಡೌನ್‌ಗಳು ಮತ್ತು ಆರ್ಥಿಕ ಪುನಶ್ಚೇತನದ ಕುರಿತು ಪ್ರಧಾನಿ ಮಾಹಿತಿ ಹಂಚಿಕೊಳ್ಳುವ ನಿರೀಕ್ಷೆ ಇದೆ.

ಆರ್ಥಿಕ ಪ್ರಗತಿಗೆ ಕೈಗೊಳ್ಳುವ ಕ್ರಮಗಳ ಕುರಿತು ಪ್ರಧಾನಿ ಮೋದಿ ಇಂದಿನ ಭಾಷಣದಲ್ಲಿ ಪ್ರಸ್ತಾಪಿಸುವ ಸಾಧ್ಯತೆ ಇದೆ.

ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರಕಾರಗಳ ನಡುವೆ ಸಾಕಷ್ಟು ಚರ್ಚೆಯಾಗಿದ್ದು, ಈ ಎಲ್ಲ ವಿಷಯಗಳ ಕುರಿತು ಪ್ರಧಾನಿ ಮೋದಿ ಮಾತನಾಡಬಹುದು ಎಂದು ಅಂದಾಜಿಸಲಾಗಿದೆ.

ಭಾರತದಲ್ಲಿ ಕೊರೊನಾ ಈಗ 76 ಲಕ್ಷ ಗಡಿ ದಾಟಿದೆ. ಆದರೆ ಮೂರು ತಿಂಗಳಲ್ಲಿನಲ್ಲಿ ಇದೇ ಮೊದಲ ಬಾರಿಗೆ ದೇಶದ ಕೊರೊನಾ ಸೋಂಕಿತರ ಸಂಖ್ಯೆ 50 ಸಾವಿರಕ್ಕಿಂತ ಕಡಿಮೆ ಬಂದಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 46,790 ಪ್ರಕರಣಗಳು ಪತ್ತೆಯಾಗಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ