ಆ್ಯಪ್ನಗರ

ಬುರೆವಿ ಚಂಡಮಾರುತ: ನೆರವಿನ ಭರವಸೆ ನೀಡಿದ ನರೇಂದ್ರ ಮೋದಿ!

ನಿವಾರ್‌ ಚಂಡಮಾರುತ ನಿವಾರಣೆಯಾದ ಬೆನ್ನಲ್ಲೇ ತಮಿಳುನಾಡು ಮತ್ತು ಕೇರಳ ರಾಜ್ಯಕ್ಕೆ 'ಬುರೆವಿ' ಚಂಡಮಾರುತ ಅಪ್ಪಳಿಸುತ್ತಿದ್ದು, ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿಗಳ ಜತೆ ಬುಧವಾರ ಚರ್ಚೆ ನಡೆಸಿದ್ದಾರೆ.

Vijaya Karnataka Web 2 Dec 2020, 10:01 pm
ಹೊಸದಿಲ್ಲಿ: ನಿವಾರ್‌ ಚಂಡಮಾರುತ ನಿವಾರಣೆಯಾದ ಬೆನ್ನಲ್ಲೇ ತಮಿಳುನಾಡು ಮತ್ತು ಕೇರಳ ರಾಜ್ಯಕ್ಕೆ 'ಬುರೆವಿ' ಚಂಡಮಾರುತ ಅಪ್ಪಳಿಸುತ್ತಿದ್ದು, ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿಗಳ ಜತೆ ಬುಧವಾರ ಚರ್ಚೆ ನಡೆಸಿದ್ದಾರೆ.
Vijaya Karnataka Web Burevi


ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರೊಟ್ಟಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು. ವಿಜಯನ್‌ ಅವರು ಕೇರಳದಲ್ಲಿ ಈಗಾಗಲೇ ಚಂಡಮಾರತದ ಜತೆ ಹೋರಾಡಲು ಮಾಡಿಕೊಂಡಿರುವ ಸಿದ್ಧತೆಗಳ ಬಗ್ಗೆ ಹಂಚಿಕೊಂಡರು.

ಬುರೆವಿ ಚಂಡಮಾರುತದಿಂದ ಉಂಟಾಗುವ ಪರಿಸ್ಥಿತಿಯ ಬಗ್ಗೆ ಚರ್ಚೆ ನಡೆಸಿದ್ದು, ಕೇಂದ್ರದಿಂದ ಎಲ್ಲ ರೀತಿಯ ನೆರವು ನೀಡುವುದಾಗಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಚಂಡುಮಾರುತ ಭಾದಿತ ಪ್ರದೇಶಗಳಲ್ಲಿ ನೆಲೆಸಿರುವ ಜನರ ಸುರಕ್ಷತೆಗಾಗಿ ಪ್ರಾರ್ಥಿಸುವುದಾಗಿ ನರೇಂದ್ರ ಮೋದಿ ಹೇಳಿದ್ದಾರೆ.

'ನಿವಾರ್‌' ಬೆನ್ನಲ್ಲೇ ಸಿದ್ಧವಾಗ್ತಿದೆ 'ಬುರೆವಿ' ಚಂಡಮಾರುತ: ಡಿ.2ರಿಂದ ಮತ್ತೆ ಮಳೆ ಸಾಧ್ಯತೆ!

ತಮಿಳುನಾಡಿಗೆ ಡಿಸೆಂಬರ್ 4ರಂದು ಚಂಡುಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 3 ರಂದು ಕೇರಳ ಮತ್ತು ದಕ್ಷಿಣ ತಮಿಳುನಾಡಿನಲ್ಲಿ ರೆಡ್ ಆಲರ್ಟ್ ಘೋಷಿಸಲಾಗಿದೆ.

ಅನ್ನದಾತನ ಕೋಪಕ್ಕೆ ಕಾರಣವೇನು? ಸರಕಾರದ ಲೋಪವೇನು? ಹೀಗಿದೆ ವಾಸ್ತವ!

ಈಗಾಗಲೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್‌) ಪೂರ್ವ ಸಿದ್ಧತೆ ಮಾಡಿಕೊಂಡಿದ್ದು, ಜನರ ರಕ್ಷಣೆಗೆ ಸಿದ್ಧರಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ