ಆ್ಯಪ್ನಗರ

ಮೋದಿ ಸ್ವಾತಂತ್ರ್ಯ ನಂತರದ ಜನಪ್ರಿಯ ನಾಯಕ

ವಿಶ್ವ ಮಟ್ಟದಲ್ಲಿ ಭಾರತ ಗುರುತಿಸಿಕೊಳ್ಳುತ್ತಿರುವ ರೀತಿ ಹಾಗೂ ಇತ್ತೀಚಿಗೆ ನಡೆದ ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಸಿಕ್ಕಿರುವ ಅಭೂತಪೂರ್ವ ಪ್ರತಿಕ್ರಿಯೆಯ ಆಧಾರದ ಮೇಲೆ ಪ್ರಧಾನಿ ನರೇಂದ್ರ ಮೋದಿ 'ಸ್ವಾತಂತ್ರ್ಯ ನಂತರ ಭಾರತ ಕಂಡ ಅತ್ಯಂತ ಜನಪ್ರಿಯ ನಾಯಕ' ಎಂದು ಬಿಜೆಪಿ ನೇತೃತ್ವದ ಎನ್‌ಡಿಎ ಹೇಳಿದೆ.

ಏಜೆನ್ಸೀಸ್ 12 Apr 2017, 12:11 pm
ಹೊಸದಲ್ಲಿ: ವಿಶ್ವ ಮಟ್ಟದಲ್ಲಿ ಭಾರತ ಗುರುತಿಸಿಕೊಳ್ಳುತ್ತಿರುವ ರೀತಿ ಹಾಗೂ ಇತ್ತೀಚಿಗೆ ನಡೆದ ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಸಿಕ್ಕಿರುವ ಅಭೂತಪೂರ್ವ ಪ್ರತಿಕ್ರಿಯೆಯ ಆಧಾರದ ಮೇಲೆ ಪ್ರಧಾನಿ ನರೇಂದ್ರ ಮೋದಿ 'ಸ್ವಾತಂತ್ರ್ಯ ನಂತರ ಭಾರತ ಕಂಡ ಅತ್ಯಂತ ಜನಪ್ರಿಯ ನಾಯಕ' ಎಂದು ಬಿಜೆಪಿ ನೇತೃತ್ವದ ಎನ್‌ಡಿಎ ಹೇಳಿದೆ.
Vijaya Karnataka Web pm narendra modi indias most popular leader after independence nda
ಮೋದಿ ಸ್ವಾತಂತ್ರ್ಯ ನಂತರದ ಜನಪ್ರಿಯ ನಾಯಕ


ಮೋದಿಯವರಿಗೆ ಸಿಕ್ಕಿರುವ ಯಶಸ್ವಿನ ಆಧಾರದ ಮೇಲೆ ಮುಂದಿನ ಅವಧಿಗೂ ಅವರನ್ನೇ ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಿ, ಒಗ್ಗಟ್ಟು ಪ್ರದರ್ಶಿಸಿರುವ 32 ಪಕ್ಷಗಳ ಎನ್‌ಡಿಎ ಮೋದಿ ಅವರ ನಾಯಕತ್ವದ ಬಗ್ಗೆ ಅಪಾರ ಭರವಸೆಯನ್ನು ವ್ಯಕ್ತಪಡಿಸಿದೆ.

ಮೋದಿ ಸರಕಾರದ ಬಗ್ಗೆ ಈಗಾಗಲೇ ಸಾಕಷ್ಟು ಟೇಕೆಗಳನ್ನು ವ್ಯಕ್ತಪಡಿಸಿದ ಶಿವಸೇನೆ ಸೇರಿ ಇತರೆ ಪಕ್ಷಗಳು ನಾಲ್ಕು ರಾಜ್ಯಗಳ ಚುನಾವಣೆಯಲ್ಲಿ ಎನ್‌ಡಿಎಗೆ ಸಿಕ್ಕಿರುವ ಪ್ರತಿಕ್ರಿಯೆಗೆ ಮೋದಿಯೇ ಕಾರಣವೆಂಬುದನ್ನು ಒಪ್ಪಿಕೊಂಡಿವೆ.

ಆರ್ಥಿಕವಾಗಿಯೂ ಭಾರತ ತ್ವರಿತ ಗತಿಯಲ್ಲಿ ಮುಂದೆ ಸಾಗುತ್ತಿದೆ. ಈ ಎಲ್ಲ ಈ ಹಿನ್ನೆಲೆಯಲ್ಲಿ ಭಾರತವನ್ನು ಮತ್ತಷ್ಟು ಪ್ರಗತಿ ಪಥದಲ್ಲಿ ಸಾಗುವಂತೆ ಮಾಡಲು 2019ರ ಚುನಾವಣೆಯಲ್ಲಿಯೂ ಮೋದಿಯನ್ನೇ ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಲು ಎನ್‌ಡಿಎ ಒಕ್ಕೂರಲಿನ ತೀರ್ಮಾನ ತೆಗೆದುಕೊಂಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ