ಆ್ಯಪ್ನಗರ

ಯುವಕನ ಹಣೆಯಲ್ಲಿ ಲಾಕ್‌ಡೌನ್ ಉಲ್ಲಂಘನೆಯ ಬರಹ!ಪೊಲೀಸರಿಂದ ಅಮಾನವೀಯ ವರ್ತನೆ

ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರ ಲಾಕ್‌ಡೌನ್ ಉಲ್ಲಂಘನೆ ಮಾಡಿದ ಕಾರಣಕ್ಕಾಗಿ ಯುವಕನೊಬ್ಬರ ಹಣೆಯ ಮೇಲೆ ನನ್ನಿಂದ ದೂರವಿರಿ, ನಾನು ಲಾಕ್‌ಡೌನ್ ಉಲ್ಲಂಘಿಸಿದ್ದೇನೆ ಎಂದು ಬರೆದಿರುವ ಪೊಲೀಸ್ ಅಧಿಕಾರಿಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

Vijaya Karnataka Web 29 Mar 2020, 12:34 pm
ಭೋಪಾಲ್: ಕೊರೊನಾ ಲಾಕ್‌ಡೌನ್‌ ಉಲ್ಲಂಘನೆ ಮಾಡಿದ್ದಕ್ಕೆ ಯುವಕನೊಬ್ಬನ ಹಣೆಯಲ್ಲಿ ‘ ನಾನು ಲಾಕ್‌ಡೌನ್ ಆದೇಶ ಉಲ್ಲಂಘನೆ ಮಾಡಿದ್ದೇನೆ. ನನ್ನಿಂದ ದೂರವಿರಿ’ ಎಂದು ಮಧ್ಯಪ್ರದೇಶದ ಪೊಲೀಸ್‌ ಅಧಿಕಾರಿ ಬರೆದಿರುವ ಪ್ರಕರಣದ ವಿರುದ್ಧ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.
Vijaya Karnataka Web mp lock down


ಮಧ್ಯಪ್ರದೇಶದ ಕಾರ್ಮಿಕನೊಬ್ಬ ಕೊರೊನಾ ಲಾಕ್‌ಡೌನ್‌ ಉಲ್ಲಂಘನೆ ಮಾಡಿ ಹೊರಬಂದಿದ್ದಕ್ಕಾಗಿ ಪೊಲೀಸ್ ಅಧಿಕಾರಿಯೊಬ್ಬರು ಆತನ ಹಣೆಯಲ್ಲಿ ಈ ರೀತಿ ಬರೆದಿದ್ದರು.

ಕೊರೊನಾ ಲಾಕ್‌ಡೌನ್ ಉಲ್ಲಂಘನೆ, ಕುಕ್ಕೆ ಸುಬ್ರಹ್ಮಣ್ಯದ ಅರ್ಚಕರಿಗೆ ಪೊಲೀಸ್ ಲಾಠಿ ಏಟು

ಲಾಕ್‌ಡೌನ್ ಉಲ್ಲಂಘನೆ ಮಾಡಿದ್ದಕ್ಕಾಗಿ ಯುವಕನಿಗೆ ಈ ಶಿಕ್ಷೆ ನೀಡಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಪೊಲೀಸರ ಈ ನಡೆಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಕಾರ್ಮಿಕನೊಬ್ಬರ ಮೇಲೆ ಪೊಲೀಸರು ಲಾಕ್‌ಡೌನ್ ಉಲ್ಲಂಘನೆ ಮಾಡಿದ್ದಾನೆಂಬ ಕಾರಣಕ್ಕಾಗಿ ಅಮಾನವೀಯವಾಗಿ ವರ್ತನೆ ಮಾಡುವುದು ಸರಿಯಲ್ಲ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು.

ಸೋಶಿಯಲ್ ಡಿಸ್ಟನ್ಸಿಂಗ್ ಅರ್ಥ ಎಮೋಶನಲ್ ಡಿಸ್ಟನ್ಸಿಂಗ್ ಅಲ್ಲ: ಮೋದಿ ಮನ್ ಕಿ ಬಾತ್!

ಇದೀಗ ಈ ಕೃತ್ಯ ಎಸಗಿದ ಪೊಲೀಸ್ ಅಧಿಕಾರಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರ್ ಸೌರಭ್ ಭರವಸೆ ನೀಡಿದ್ದಾರೆ.


ಲಾಕ್‌ಡೌನ್‌ ಉಲ್ಲಂಘನೆ ಮಾಡಿದ ಕಾರಣಕ್ಕಾಗಿ ಕರ್ನಾಟಕದಲ್ಲಿ ಪೊಲೀಸ್‌ ಲಾಠಿ ಏಟು ಪ್ರಕರಣ ಸಾಕಷ್ಟು ಸದ್ದು ಮಾಡುತ್ತಿದೆ. ರಸ್ತೆಗಿಳಿದವರ ಮೇಲೆ ಪೊಲೀಸರು ನಡೆಸುತ್ತಿರುವ ಹಲ್ಲೆಗೆ ಸಾಮಾಜಿಕ ಜಾಲತಾಣಗಲ್ಲಿ ವಿರೋಧ ವ್ಯಕ್ತವಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ