ಆ್ಯಪ್ನಗರ

ಟಿಎಂಸಿಯಿಂದ ರಾಜ್ಯಸಭೆಗೆ ಸ್ಪರ್ಧಿಸಲಿದ್ದಾರಾ ಪ್ರಶಾಂತ್ ಕಿಶೋರ್!

ಮಹತ್ವದ ಬೆಳವಣಿಗೆಯೊಂದರಲ್ಲಿ ಜೆಡಿಯು ಉಚ್ಛಾಟಿತ ನಾಯಕ ಪ್ರಶಾಂತ್ ಕಿಶೋರ್ ಟಿಎಂಸಿಯಿಂದ ರಾಜ್ಯಸಭೆಗೆ ಸ್ಪರ್ಧಿಸುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗಿದೆ. ಮುಂದಿನ ತಿಂಗಳು ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಪ್ರಶಾಂತ್ ಕಿಶೋರ್ ಟಿಎಂಸಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.

Vijaya Karnataka Web 29 Feb 2020, 5:53 pm
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಜೆಡಿಯು ಉಚ್ಛಾಟಿತ ನಾಯಕ ಪ್ರಶಾಂತ್ ಕಿಶೋರ್ ಟಿಎಂಸಿಯಿಂದ ರಾಜ್ಯಸಭೆಗೆ ಸ್ಪರ್ಧಿಸುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗಿದೆ.
Vijaya Karnataka Web Prashant Kishor
Prashant Kishor


ಮುಂದಿನ ತಿಂಗಳು ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಪ್ರಶಾಂತ್ ಕಿಶೋರ್ ಟಿಎಂಸಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.

ಈ ಕುರಿತು ಟಿಎಂಸಿ ನಾಯಕರು ಮಾಹಿತಿ ನೀಡಿದ್ದು, ರಾಜ್ಯಸಭೆ ಚುನಾವಣೆಯಲ್ಲಿ ಪ್ರಶಾಂತ್ ಕಿಶೋರ್ ಅವರನ್ನು ಪಕ್ಷದ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುವ ಕುರಿತು ಮಾತುಕತೆ ನಡೆದಿದೆ ಎಂದು ತಿಳಿಸಿದ್ದಾರೆ.

ಜೆಡಿಎಸ್‌ ಸಹಾಯಕ್ಕೆ ಬರ್ತಾರಾ ಪ್ರಶಾಂತ್‌ ಕಿಶೋರ್‌? ಮಾತುಕತೆ ನಡೆಯುತ್ತಿದೆ ಎಂದ ಎಚ್‌ಡಿಕೆ

ಪ್ರಸ್ತುತ ಟಿಎಂಸಿ ರಾಜ್ಯಸಭೆ ಸದಸ್ಯರಾಗಿರುವ ಮನೀಶ್ ಗುಪ್ತಾ, ಜೋಗನ್ ಚೌಧರಿ, ಅಹ್ಮದ್ ಹಸನ್ ಇಮ್ರಾನ್ ಹಾಗೂ ಕೆಡಿ ಸಿಂಗ್ ಅವರ ಅವಧಿ ಮುಕ್ತಾಯಗೊಳ್ಳಲಿದೆ.

ಈ ಹಿನ್ನೆಲೆಯಲ್ಲಿ ಹೊಸ ಮುಖಗಳ ಹುಡುಕಾಟದಲ್ಲಿರುವ ಸಿಎಂ ಮಮತಾ ಬ್ಯಾನರ್ಜಿ, ಜೆಡಿಯುನಿಂದ ಉಚ್ಛಾಟಿತಗೊಂಡಿರುವ ಪ್ರಶಾಂತ್ ಕಿಶೋರ್ ಅವರನ್ನು ಕಣಕ್ಕಿಳಿಸಲು ಉತ್ಸುಕರಾಗಿದ್ದಾರೆ ಎನ್ನಲಾಗಿದೆ.

ಪಕ್ಷ ಹಾಗೂ ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿದ್ದ ನಿತೀಶ್ ಕುಮಾರ್ ಅವರನ್ನು ಕಳೆದ ತಿಂಗಳಷ್ಟೇ ಜೆಡಿಯುನಿಂದ ಉಚ್ಛಾಟಿಸಲಾಗಿತ್ತು.

ಸುಳ್ಳು ಹೇಳುವುದಕ್ಕೆ ಈ ಮಟ್ಟಕ್ಕೆ ಇಳಿದಿರಾ ನಿತೀಶ್‌: ಪ್ರಶಾಂತ್‌ ಕಿಶೋರ್

ಪ್ರಶಾಂತ್ ಕಿಶೋರ್ ಬಿಜೆಪಿ ಹಾಗೂ ಸಿಎಎ ಜಾರಿಯ ಕಡುವಿರೋಧಿಯಾಗಿದ್ದು, ಈ ಕುರಿತು ನಿತೀಶ್ ಕುಮಾರ್ ಅವರ ಮೌನವನ್ನು ನಿರಂತರವಾಗಿ ಟೀಕಿಸುತ್ತಿದ್ದರು. ಮಾರ್ಚ್ 26 ರಂದು ರಾಜ್ಯಸಭೆ ಸ್ಥಾನಗಳಿಗೆ ಮತದಾನ ನಿಗದಿಯಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ