ಆ್ಯಪ್ನಗರ

ಅಂತರ್ಜಾತಿ ಪ್ರೇಮಕ್ಕೆ ವಿರೋಧ: ಪೋಷಕರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಪುತ್ರಿ

ಅಂತರ್ಜಾತಿ ಪ್ರೇಮಕ್ಕೆ ವಿರೋಧ ವ್ಯಕ್ತಪಡಿಸಿದ ಪೋಷಕರು ಕೊಲೆ ಬೆದರಿಕೆ ಹಾಕುತ್ತಿದ್ದಾರೆಂದು ಆರೋಪಿಸಿ ಪ್ರಿಯಾಂಕಾ ಶೆಟೆ ಎಂಬ ಯುವತಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾಳೆ.

TIMESOFINDIA.COM 8 May 2019, 1:02 pm
ಮುಂಬಯಿ: ಪೋಷಕರು ಕೊಲೆ ಬೆದರಿಕೆ ಹಾಕಿದ್ದು, ನನಗೆ ರಕ್ಷಣೆ ನೀಡಿ ಎಂದು ಕೋರಿ 19 ವರ್ಷದ ವಿದ್ಯಾರ್ಥಿನಿಯೊಬ್ಬಳು ಬಾಂಬೆ ಹೈ ಕೋರ್ಟ್ ಮೆಟ್ಟಿಲೇರಿದ್ದಾಳೆ.
Vijaya Karnataka Web court


ಅಂತರ್ಜಾತಿ ಪ್ರೇಮಕ್ಕೆ ವಿರೋಧ ವ್ಯಕ್ತಪಡಿಸಿದ ಪೋಷಕರು ಕೊಲೆ ಬೆದರಿಕೆ ಹಾಕುತ್ತಿದ್ದಾರೆಂದು ಆರೋಪಿಸಿ ಪ್ರಿಯಾಂಕಾ ಶೆಟೆ ಎಂಬ ಯುವತಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾಳೆ.

ಕಳೆದ ಮೂರು ವರ್ಷಗಳಿಂದ ಅಂತರ್ಜಾತಿ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದೇನೆ. ಈ ವಿಷಯ ಮನೆಯಲ್ಲಿ ಗೊತ್ತಾದ ಬಳಿಕ ನನಗೆ ಕಿರುಕುಳ ನೀಡಲಾರಂಭಿಸಿದರು. ಹೀಗಾಗಿ ಮನೆ ಬಿಟ್ಟು ಓಡಿ ಬಂದಿದ್ದೇನೆ. ನಮಗೆ ಕೊಲೆ ಬೆದರಿಕೆ ಇದೆ. ಆದರೆ, ಪೊಲೀಸರು ಸಹ ರಕ್ಷಣೆ ನೀಡುತ್ತಿಲ್ಲ. ಹೀಗಾಗಿ ನ್ಯಾಯಾಲಯದ ಮೊರೆ ಹೋಗಿದ್ದೇನೆ ಎಂದು ಪ್ರಿಯಾಂಕಾ ದೂರಿದ್ದಾಳೆ.

ಪ್ರಿಯಾಂಕಾ ಸೆಟೆ ಎಂಬ ಯುವತಿ ಪರಿಶಿಷ್ಟ ಜಾತಿಗೆ ಸೇರಿದ ಯುವಕನನ್ನು ಪ್ರೀತಿಸುತ್ತಿದ್ದು, ಆಕೆಯ ಮನೆಯವರು ಇದನ್ನು ಒಪ್ಪುತ್ತಿಲ್ಲ. ಯುವತಿಯ ಹೇಳಿಕೆ ಪಡೆದು, ಆಕೆಗೆ ಸೂಕ್ತ ರಕ್ಷಣೆ ನೀಡಿ ಎಂದು ಬಾಂಬೆ ಹೈ ಕೋರ್ಟ್ ನಿರ್ದೇಶನ ನೀಡಿದೆ ಎಂದು ಯುವತಿ ಪರ ವಕೀಲ ನಿತಿನ್ ಸತ್ಪುಟೆ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ