ಆ್ಯಪ್ನಗರ

Snooping Row: ಕಂಪ್ಯೂಟರ್‌ ಮೇಲೆ ನಿಗಾ ಸರ್ವಾಧಿಕಾರ ಧೋರಣೆ ಎಂದ ರಾಹುಲ್ ಗಾಂಧಿ

ಭಾರತವನ್ನು ಪೊಲೀಸ್‌ ರಾಜ್ಯವನ್ನಾಗಿ ಮಾಡಲು ಮುಂದಾದಂತಿದೆ ಎಂದು ಟ್ವೀಟ್‌ ಮಾಡಿದ್ದಾರೆ. ಇದು ನರೇಂದ್ರ ಮೋದಿಯವರ ಸರ್ವಾಧಿಕಾರ ಧೋರಣೆಯ ಪ್ರತೀಕವಾಗಿದೆ ಎಂದು ರಾಹುಲ್‌ ಕಿಡಿಕಾರಿದ್ದಾರೆ.

Vijaya Karnataka Web 21 Dec 2018, 7:27 pm
ಹೊಸದಿಲ್ಲಿ: ಕಂಪ್ಯೂಟರ್‌ಗಳ ಮಾಹಿತಿ ಮೇಲೆ ನಿಗಾ ವಹಿಸಲು ಕೇಂದ್ರ ಸರಕಾರ ಆದೇಶ ನೀಡಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ.
Vijaya Karnataka Web ರಾಹುಲ್‌ ಗಾಂಧಿ
ರಾಹುಲ್‌ ಗಾಂಧಿ


ಇದು ಬಿಜೆಪಿ ಮತ್ತು ಕಾಂಗ್ರೆಸ್‌ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ.

ಈ ಆದೇಶಕ್ಕೆ ಪ್ರತಿಕ್ರಿಯೆ ನೀಡಿರುವ ರಾಹುಲ್‌ ಗಾಂಧಿ, ಭಾರತವನ್ನು ಪೊಲೀಸ್‌ ರಾಜ್ಯವನ್ನಾಗಿ ಮಾಡಲು ಮುಂದಾದಂತಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ಇದು ನರೇಂದ್ರ ಮೋದಿಯವರ ಸರ್ವಾಧಿಕಾರ ಧೋರಣೆಯ ಪ್ರತೀಕವಾಗಿದೆ ಎಂದು ರಾಹುಲ್‌ ಕಿಡಿಕಾರಿದ್ದಾರೆ.

ಕಾಂಗ್ರೆಸ್‌ ಮಾತ್ರವಲ್ಲದೇ ಪ್ರತಿಪಕ್ಷಗಳು ಕೂಡ ಕೇಂದ್ರ ಸರಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿವೆ.

ಇದೊಂದು ಅಸಾಂವಿಧಾನಿಕ, ಪ್ರಜಾಪ್ರಭುತ್ವ ವಿರೋಧಿ ಆದೇಶವಾಗಿದೆ ಎಂದು ಎಡಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ