ಆ್ಯಪ್ನಗರ

ನೇಪಾಳ, ಚೀನಾ ಗಡಿಯಲ್ಲಿ ಏನಾಗುತ್ತಿದೆ ಎಂಬುದಕ್ಕೆ ಸ್ಪಷ್ಟನೆ ಬೇಕು: ರಾಹುಲ್ ಆಗ್ರಹ!

ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕೊರೊನಾ ವೈರಸ್ ಹಾವಳಿ, ನೇಪಾಳ ಹಾಗೂ ಚೀನಾ ಗಡಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಕೇಂದ್ರ ಸರ್ಕಾರ ದೇಶಕ್ಕೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Vijaya Karnataka Web 26 May 2020, 4:09 pm
ನವದೆಹಲಿ: ಲಡಾಖ್ ಗಡಿಯಲ್ಲಿ ಚೀನಿ ಸೈನಿಕರ ಉಪಟಳ ಹಾಗೂ ನೇಪಾಳದ ಗಡಿ ತಗಾದೆ ಕುರಿತು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
Vijaya Karnataka Web Rahul Gandhi
ರಾಹುಲ್ ಗಾಂಧಿ ವಿಡಿಯೋ ಸಂವಾದ


ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ನೇಪಾಳ ಏಕಾಏಕಿ ಗಡಿ ತಗಾದೆ ತೆಗೆದಿರುವುದು ಮತ್ತು ಲಡಾಖ್‌ನಲ್ಲಿ ಚೀನಾ ಹೆಚ್ಚಿನ ಸಂಖ್ಯೆಯಲ್ಲಿ ಸೇನೆ ಜಮಾವಣೆಗೊಳಿಸುತ್ತಿರುವ ಕುರಿತು ಮೋದಿ ಸರ್ಕಾರ ದೇಶಕ್ಕೆ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.

ನೇಪಾಳ ಮತ್ತು ಚೀನಾದ ಗಡಿಗಳಲ್ಲಿ ಏನಾಗುತ್ತಿದೆ ಎಂಬುದರ ಕುರಿತು ದೇಶಕ್ಕೆ ಸ್ಪಷ್ಟನೆ ಇಲ್ಲವಾಗಿದೆ. ಗಡಿಯಲ್ಲಿ ನಡೆಯುತ್ತಿರುವ ಆತಂಕಕಾರಿ ಬೆಳವಣಿಗೆಗಳ ಕುರಿತು ಮೋದಿ ಸರ್ಕಾರ ಕೂಡಲೇ ಜನತೆಗೆ ಮಾಹಿತಿ ನೀಡಬೇಕು ಎಂದು ರಾಹುಲ್ ಆಗ್ರಹಿಸಿದರು.

ಡೋಕ್ಲಾಮ್ ಬಳಿಕ ಮತ್ತೊಂದು ಮಿಲಿಟರಿ ಮುಖಾಮುಖಿಗೆ ಚೀನಾ ಕುಮ್ಮಕ್ಕು?: 'ಗಡಿ'ಬಿಡಿ ಡ್ರ್ಯಾಗನ್!


ಇದೇ ವೇಳೆ ಮೋದಿ ಸರ್ಕಾರದ ಲಾಕ್‌ಡೌನ್ ನೀತಿಯನ್ನು ಟೀಕಸಿದ ರಾಹುಲ್ ಗಾಂಧಿ, ದೇಶದಲ್ಲಿ ಕೊರೊನಾ ವೈರಸ್ ಪ್ರಕರಣ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಲಾಕ್‌ಡೌನ್ ಸಡಿಲಿಕೆ ಮಾಡಿರುವುದು ಸರಿಯಾದ ಕ್ರಮವಲ್ಲ ಎಂದು ಅಭಿಪ್ರಾಯಪಟ್ಟರು.


ದೇಶದಲ್ಲಿ ಲಾಕ್‌ಡೌನ್ ಸಂಪೂರ್ಣ ವಿಫಲವಾಗಿದ್ದು ಸದ್ಯ ದೇಶ ಎದುರಿಸುತ್ತಿರುವ ಸಂಕಷ್ಟಕ್ಕೆ ಲಾಕ್‌ಡೌನ್ ವೈಫಲ್ಯವೇ ಕಾರಣ ಎಂದು ರಾಹುಲ್ ಗಾಂಧಿ ಕೇಂದ್ರದ ವಿರುದ್ಧ ಹರಿಹಾಯ್ದರು.

ಲಾಕ್‌ಡೌನ್ ತೆರವು ಘೋಷಣೆಯಲ್ಲಿ ಪಾರದರ್ಶಕತೆ ಇರಲಿ: ರಾಹುಲ್ ಆಗ್ರಹ!

ಇನ್ನು ಈ ಹಿಂದೆ ಲಾಕ್‌ಡೌನ್ ಹೇರಿಕೆಯ ಕ್ರಮವನ್ನು ಪ್ರಶ್ನಿಸಿದ್ದ ರಾಹುಲ್ ಗಾಂಧಿ, ಇದೀಗ ಲಾಕ್‌ಡೌನ್ ಸಡಿಲಿಕೆಯನ್ನು ಪ್ರಶ್ನಿಸುತ್ತಿರುವುದು ಕಾಂಗ್ರೆಸ್ ಪಕ್ಷದ ದ್ವಂದ್ವ ನಿಲುವಿಗೆ ಸಾಕ್ಷಿ ಎಂದು ಬಿಜೆಪಿ ಕಿಡಿಕಾರಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ