ಆ್ಯಪ್ನಗರ

ರಾಹುಲ್‌ ಗಾಂಧಿಯೇ ನಮ್ಮ ಸಾರಥಿ: ಸುರ್ಜೆವಾಲ

ರಾಹುಲ್‌ ಗಾಂಧಿ ಅವರೇ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದು, ಭವಿಷ್ಯದಲ್ಲೂ ಅವರು ಅದೇ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ ಎಂದು ಪಕ್ಷದ ಪ್ರಧಾನ ವಕ್ತಾರ ರಣದೀಪ್‌ ಸುರ್ಜೆವಾಲ ಹೇಳಿದ್ದಾರೆ.

PTI 13 Jun 2019, 5:00 am
ಹೊಸದಿಲ್ಲಿ: ರಾಹುಲ್‌ ಗಾಂಧಿ ಅವರೇ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದು, ಭವಿಷ್ಯದಲ್ಲೂ ಅವರು ಅದೇ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ ಎಂದು ಪಕ್ಷದ ಪ್ರಧಾನ ವಕ್ತಾರ ರಣದೀಪ್‌ ಸುರ್ಜೆವಾಲ ಬುಧವಾರ ಹೇಳಿದ್ದಾರೆ.
Vijaya Karnataka Web BNG-0212-2-2-RAHUL GANDHI-13


ಇದರೊಂದಿಗೆ ಲೋಕಸಭೆ ಚುನಾವಣೆ ಸೋಲಿನ ಹೊಣೆಹೊತ್ತು ರಾಹುಲ್‌ ಗಾಂಧಿ ರಾಜೀನಾಮೆ ಪ್ರಸ್ತಾಪ ಮುಂದಿಟ್ಟ ಬಳಿಕ ಉಂಟಾಗಿದ್ದ ಕಾಂಗ್ರೆಸ್‌ ಸಾರಥ್ಯದ ಗೊಂದಲಕ್ಕೆ ತಾತ್ಕಾಲಿಕ ಬ್ರೇಕ್‌ ಬಿದ್ದಿದೆ.

ಕೇಂದ್ರದ ಮಾಜಿ ಸಚಿವ ಎ.ಕೆ. ಆ್ಯಂಟನಿ ಸೇರಿದಂತೆ ಪಕ್ಷದ ಹಿರಿಯ ನಾಯಕರು ಹರಿಯಾಣ, ಜಮ್ಮು-ಕಾಶ್ಮೀರ, ಜಾರ್ಖಂಡ್‌ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಪಕ್ಷದ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ಬುಧವಾರ ಸಭೆ ನಡೆಸಿದರು. ಈ ಸಭೆಯ ಬಳಿಕ ಸುರ್ಜೆವಾಲ, ರಾಹುಲ್‌ ಸಾರಥ್ಯದ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ