ಆ್ಯಪ್ನಗರ

ಅತ್ಯಾಚಾರ ಸಂತ್ರಸ್ತೆಗೆ ನೌಕರಿ

ಸಂತ್ರಸ್ತೆಯು ಸರಕಾರದ ಈ ಆಫರ್‌ ಒಪ್ಪಿಕೊಂಡಿದ್ದು, ಪೊಲೀಸ್‌ ಇಲಾಖೆ ಸೇರಿ ತನ್ನ ಮೇಲೆ ಅತ್ಯಾಚಾರ ಎಸಗಿದ ದುರುಳರನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆಂದು ಮೂಲಗಳು ಹೇಳಿವೆ

Vijaya Karnataka 21 May 2019, 5:00 am
ಜೈಪುರ: ಚುನಾವಣಾ ಪ್ರಚಾರ ಸಭೆಗಳಲ್ಲೂ ಸದ್ದು ಮಾಡಿದ ಆಲ್ವಾರ್‌ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆಗೆ ಪೊಲೀಸ್‌ ಇಲಾಖೆಯಲ್ಲಿ ಪೇದೆ ಹುದ್ದೆ ನೀಡಲು ರಾಜಸ್ಥಾನ ಸರಕಾರ ನಿರ್ಧರಿಸಿದೆ. ಸಂತ್ರಸ್ತೆಯು ಸರಕಾರದ ಈ ಆಫರ್‌ ಒಪ್ಪಿಕೊಂಡಿದ್ದು, ಪೊಲೀಸ್‌ ಇಲಾಖೆ ಸೇರಿ ತನ್ನ ಮೇಲೆ ಅತ್ಯಾಚಾರ ಎಸಗಿದ ದುರುಳರನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆಂದು ಮೂಲಗಳು ಹೇಳಿವೆ. ಏ.26ರಂದು ತನಘಾಜಿ-ಆಲ್ವಾರ್‌ ಬೈಪಾಸ್‌ ರಸ್ತೆಯಲ್ಲಿ ಬೈಕ್‌ನಲ್ಲಿ ಸಂಚರಿಸುತ್ತಿದ್ದ ದಂಪತಿಯನ್ನು ಐವರು ದುರುಳರು ಅಡ್ಡಗಟ್ಟಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಪತಿಯ ಎದುರೇ ಪತ್ನಿ ಮೇಲೆ ಅತ್ಯಾಚಾರ ಎಸಗಿದ್ದರು. ಇದರಲ್ಲಿ ಒಬ್ಬ ಘಟನೆಯನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್‌ ಮಾಡಿ ವಿಕೃತಿ ಮೆರೆದಿದ್ದ. ಮೇ 2ರಂದು ಎಫ್‌ಐಆರ್‌ ದಾಖಲಾಗಿದ್ದು ಒಬ್ಬನ ಬಂಧನವಾಗಿದೆ. ಇತ್ತೀಚೆಗೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ, ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾಗಿ ನ್ಯಾಯ ಒದಗಿಸುವ ಭರವಸೆ ನೀಡಿದ್ದರು.
Vijaya Karnataka Web rape




ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ