ಆ್ಯಪ್ನಗರ

ಕರ್ನಾಟಕ ರಾಜಕೀಯ: ಸುಪ್ರೀಕೋರ್ಟ್‌ ನಡೆ ಶ್ಲಾಘಿಸಿದ ರಜನಿಕಾಂತ್‌

ಕರ್ನಾಟಕದ ರಾಜಕೀಯ ಬೆಳವಣಿಗೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮಧ್ಯೆ ಪ್ರವೇಶಿಸಿರುವುದನ್ನು ನಟ ರಜನಿಕಾಂತ್‌ ಶ್ಲಾಘಿಸಿದ್ದಾರೆ.

Vijaya Karnataka Web 20 May 2018, 2:31 pm
ಚೆನ್ನೈ: ಕರ್ನಾಟಕದ ರಾಜಕೀಯ ಬೆಳವಣಿಗೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮಧ್ಯೆ ಪ್ರವೇಶಿಸಿರುವುದನ್ನು ನಟ ರಜನಿಕಾಂತ್‌ ಶ್ಲಾಘಿಸಿದ್ದಾರೆ.
Vijaya Karnataka Web rajani


ವಿಶ್ವಾಸಮತ ಸಾಬೀತು ಪ್ರಕ್ರಿಯೆ ಎದುರಿಸದೆಯೇ ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಪ್ರಜಾಪ್ರಭುತ್ವಕ್ಕೆ ಸಂದ ಜಯ ಎಂದು ಅವರು ಹೇಳಿದ್ದಾರೆ.

ರಾಜ್ಯಪಾಲರು ಬಿಜೆಪಿಗೆ ವಿಶ್ವಾಸಮತ ಸಾಬೀತುಪಡಿಸಲು ಹದಿನೈದು ದಿನ ನೀಡಿದ್ದು ಸೂಕ್ತ ಕ್ರಮವಲ್ಲ. ಈ ವಿಚಾರದಲ್ಲಿ ಸುಪ್ರೀಂಕೋರ್ಟ್‌ ಮಧ್ಯೆ ಪ್ರವೇಶಿಸಿ ಕ್ರಮ ಕೈಗೊಂಡಿರುವುದಕ್ಕೆ ಸ್ವಾಗತ ಎಂದು ಅವರು ಹೇಳಿದ್ದಾರೆ.

ರಜನಿ ಮಕ್ಕಳ ಮಂಡ್ರಂನ ಮಹಿಳಾ ಘಟಕದ ಸಭೆಯಲ್ಲಿ ಭಾಗವಹಿಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಯಾವುದೇ ಪಕ್ಷ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರೂ ಸುಪ್ರೀಂಕೋರ್ಟ್‌ ನಿರ್ದೇಶನವನ್ನು ಜಾರಿಗೊಳಿಸಿ ಕಾವೇರಿ ನೀರು ತಮಿಳುನಾಡಿಗ ಹರಿಸುವುದಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಕೋರ್ಟ್‌ ಸ್ಪಷ್ಟ ಆದೇಶ ನೀಡಿರುವಾಗ ನಿರ್ವಹಣಾ ಮಂಡಳಿ ಇಲ್ಲವೇ ಪ್ರಾಧಿಕಾರವೆಂಬ ತಾಂತ್ರಿಕ ಚೌಕಟ್ಟಿಗೆ ಅಂಟಿಕೊಳ್ಳಬಾರದು ಎಂದು ರಜನಿಕಾಂತ್‌ ಹೇಳಿದ್ದಾರೆ.

ಮಹಿಳೆಯರು ಎಲ್ಲಿ ಇರುತ್ತಾರೋ, ಅಲ್ಲಿ ಗೆಲುವು ಇರುತ್ತದೆ ಎಂದ ರಜನಿಕಾಂತ್‌, ಕಮಲ್‌ ಹಾಸನ್‌ ಅವರ 'ಮಕ್ಕಳ್‌ ನೀತಿ ಮಯಂ' ಪಕ್ಷದ ಜತೆ ಮೈತ್ರಿ ಮಾಡಿಕೊಳ್ಳಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದರು. ಈವರೆಗೆ ರಾಜಕೀಯ ಪಕ್ಷಕ್ಕೆ ಚಾಲನೆ ನೀಡಿಲ್ಲ. ಆದ್ದರಿಂದ ನಿರೀಕ್ಷಿತ ಮೈತ್ರಿ ಬಗ್ಗೆ ಈಗ ಮಾತನಾಡುವ ಅಗತ್ಯವಿಲ್ಲ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ