ಆ್ಯಪ್ನಗರ

'ರಾಮಮಂದಿರ ನಿರ್ಮಾಣದ ಶ್ರೇಯಸ್ಸು ಸುಪ್ರೀಂ ಕೋರ್ಟ್‌ಗೆ ಸಲ್ಲಬೇಕು': ಮಾಯಾವತಿ

ಬಿಎಸ್‌ಪಿ ವರಿಷ್ಠೆ ಮಾಯಾವತಿ ಕೂಡ ತಮ್ಮ ಅಭಿಪ್ರಾಯವನ್ನು ಮಂಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಾಯಾವತಿ ರಾಮಮಂದಿರ ನಿರ್ಮಾಣದ ಶ್ರೇಯಸ್ಸು ಸುಪ್ರೀಂ ಕೋರ್ಟ್‌ಗೆ ಸಲ್ಲಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

Vijaya Karnataka Web 5 Aug 2020, 5:30 pm
ಉತ್ತರಪ್ರದೇಶ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಅಧಿಕೃತ ಅಡಿಗಲ್ಲು ಹಾಕಲಾಗಿದೆ. ರಾಮಜನ್ಮಭೂಮಿಯಲ್ಲಿ ಬೃಹತ್ ಮಟ್ಟದ ಭವ್ಯ ಮಂದಿರ ನಿರ್ಮಾಣ ಇನ್ನೂ ಕೆಲವೇ ವರ್ಷಗಳಲ್ಲಿ ತಲೆಯತ್ತಲಿದೆ. ರಾಮಮಂದಿರದ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲು ಪ್ರಧಾನಿ ಮೋದಿ ಸೇರಿದಂತೆ ಗಣ್ಯಾತಿಗಣ್ಯರು ಸಾಕ್ಷಿಯಾಗಿದ್ದಾರೆ.
Vijaya Karnataka Web MAYAVATHI


'ರಾಮ ಅಂದರೆ ಪ್ರೇಮ, ರಾಮ ಅಂದರೆ ನ್ಯಾಯ': ಭೂಮಿ ಪೂಜೆ ಬೆನ್ನಲ್ಲಿಯೇ ಶ್ರೀರಾಮನ ಸ್ಮರಿಸಿ

ಅನೇಕ ರಾಜಕೀಯ ಪಕ್ಷಗಳು ರಾಮಮಂದಿರ ನಿರ್ಮಾಣ ವಿಷಯವಾಗಿ ತಮ್ಮದೇ ರೀತಿಯ ವ್ಯಾಖ್ಯಾನಗಳನ್ನು ಕೊಡುತ್ತಿದೆ. ಈ ಮಧ್ಯೆ ಬಿಎಸ್‌ಪಿ ವರಿಷ್ಠೆ ಮಾಯಾವತಿ ಕೂಡ ತಮ್ಮ ಅಭಿಪ್ರಾಯವನ್ನು ಮಂಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಾಯಾವತಿ ರಾಮಮಂದಿರ ನಿರ್ಮಾಣದ ಶ್ರೇಯಸ್ಸು ಸುಪ್ರೀಂ ಕೋರ್ಟ್‌ಗೆ ಸಲ್ಲಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಆಸ್ಪತ್ರೆಯಿಂದಲೇ ಅಯೋಧ್ಯೆ ಭೂಮಿ ಪೂಜೆ ಸಂಭ್ರಮಿಸಿದ ಅಮಿತ್ ಶಾ: ನಂಬಿಕೆಯ ವಿಜಯ ಎಂದ ಗೃಹ ಸಚಿವ!

ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಮಾಯಾವತಿ, ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಾಮಜನ್ಮಭೂಮಿ ವಿವಾದಕ್ಕೆ ತೆರೆಎಳೆದು ರಾಮಮಂದಿರ ನಿರ್ಮಾಣಕ್ಕೆ ಅವಕಾಶ ನೀಡಿದ್ದು ಸುಪ್ರೀಂಕೋರ್ಟ್. ಹೀಗಾಗಿ ರಾಮಮಂದಿರ ನಿರ್ಮಾಣದ ಶ್ರೇಯಸ್ಸು ಸುಪ್ರೀಂ ಕೋರ್ಟ್‌ಗೆ ಸಲ್ಲಬೇಕು ಎಂದು ಹೇಳಿದ್ದಾರೆ.

'ಮಂದಿರಕ್ಕಾಗಿ ಬಹಳಷ್ಟು ಜನ ತ್ಯಾಗ ಮಾಡಿದ್ದಾರೆ, ಈ ದಿನ ನವ ಭಾರತಕ್ಕೆ ಹೊಸ ಆರಂಭ'

ಅಯೋಧ್ಯೆ ಸರ್ವಧರ್ಮೀಯರ ಪವಿತ್ರ ಕ್ಷೇತ್ರವಾಗಿದೆ ಎಂದಿರುವ ಮಾಯಾವತಿ, ಇದು ಎಲ್ಲರಿಗೂ ಗೊತ್ತಿರುವ ವಿಚಾರ. ರಾಮಮಂದಿರ ಹಾಗೂ ಬಾಬರಿ ಮಸೀದಿಯ ಭೂ ವಿವಾದದಿಂದಾಗಿ ಈ ಸ್ಥಳ ಸುದ್ದಿಯಲ್ಲಿತ್ತು. ಹಲವು ವರ್ಷಗಳ ಈ ವಿವಾದಕ್ಕೆ ಸುಪ್ರೀಂ ಕೋರ್ಟ್ ತೆರೆ ಎಳೆದು ಈ ವಿವಾದವನ್ನು ರಾಜಕೀಯಗೊಳಿಸಲು ಹೊರಟಿದ್ದ ಕೆಲ ಪಕ್ಷಗಳ ಪ್ರಯತ್ನಕ್ಕೂ ಅಂತ್ಯ ಹಾಡಿದೆ ಎಂದು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ