ಆ್ಯಪ್ನಗರ

ಆರ್‌ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌ಗೆ ಕೊರೊನಾ‌ ದೃಢ

ದೇಶದಲ್ಲಿ ಕೊರೊನಾ ಅಬ್ಬರ ಇಳಿಮುಖದತ್ತ ಸಾಗಿದೆ. ಈ ಸಂದರ್ಭದಲ್ಲಿ ಆರ್‌ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಅವರಿಗೆ ಕೊರೊನಾ ವೈರಸ್‌ ದೃಢಪಟ್ಟಿದೆ. ಸೋಂಕು ತಗುಲಿರುವುದನ್ನು ಟ್ವೀಟ್‌ ಮೂಲಕ ಖಚಿತಪಡಿಸಿರುವ ಅವರು, ಮನೆಯಿಂದಲೇ ಕಚೇರಿ ಕೆಲಸ ನಿರ್ವಹಿಸುವುದಾಗಿ ಹೇಳಿದ್ದಾರೆ.

Vijaya Karnataka Web 25 Oct 2020, 8:56 pm
ಹೊಸದಿಲ್ಲಿ: ಆರ್‌ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಅವರಿಗೆ ಭಾನುವಾರ ಕೊರೊನಾ ವೈರಸ್‌ ದೃಢಪಟ್ಟಿದೆ. ಸೋಂಕು ತಗುಲಿರುವುದನ್ನು ಟ್ವೀಟ್‌ ಮೂಲಕ ಖಚಿತಪಡಿಸಿರುವ ಅವರು, ಹೋಮ್‌ ಕ್ವಾರಂಟೈನ್‌ನಲ್ಲಿದ್ದೇನೆ ಎಂದು ಹೇಳಿದ್ದಾರೆ.
Vijaya Karnataka Web rbi governor shaktikanta das tests positive for coronavirus
ಆರ್‌ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌ಗೆ ಕೊರೊನಾ‌ ದೃಢ


ನನಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಯಾವುದೇ ರೋಗಲಕ್ಷಣಗಳು ಕಂಡು ಬಂದಿಲ್ಲ, ಚೆನ್ನಾಗಿದ್ದೇನೆ. ಹೋಮ್‌ ಕ್ವಾರಂಟೈನ್‌ ಮೂಲಕ ಕಚೇರಿ ಕೆಲಸಗಳನ್ನು ಮುಂದುವರೆಸಿರುವೆ. ಫೋನ್‌ ಮತ್ತು ವಿಡಿಯೋ ಕಾಲ್‌ ಮೂಲಕ ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದೇನೆ ಎಂದು ಶಕ್ತಿಕಾಂತ್‌ ದಾಸ್‌ ಟ್ವೀಟ್‌ ಮಾಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ತಮ್ಮ ಸಂಪರ್ಕಕ್ಕೆ ಬಂದಿರುವವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಟ್ವೀಟ್‌ ಮೂಲಕ ಆರ್‌ಬಿಐ ಗವರ್ನರ್‌ ಮನವಿ ಮಾಡಿದ್ದಾರೆ. ಇದಕ್ಕೂ ಮುನ್ನ ದೇಶದ ಹಲವು ಗಣ್ಯರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಮಧ್ಯಪ್ರದೇಶ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್, ಸಿಎಂ ಬಿ.ಎಸ್‌.ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ‌ ಸೇರಿ ಅನೇಕರಿಗೆ ಸೋಂಕು ದೃಢಪಟ್ಟಿತ್ತು.‌

ಕೊರೊನಾ ವಿರುದ್ಧದ ಹೋರಾಟದಲ್ಲಿ ಜಯ ನಿಶ್ಚಿತ: ಪ್ರಧಾನಿ ಮೋದಿ ವಿಜಯದಶಮಿ ಸಂದೇಶ!

ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ, ಕೇಂದ್ರ ಸಚಿವ ಸುರೇಶ್‌ ಅಂಗಡಿ ಸೇರಿ ಅನೇಕ ಗಣ್ಯರು ಕೊರೊನಾ ಕಾರಣದಿಂದ ಅಸುನೀಗಿದ್ದಾರೆ. ಇನ್ನು, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 55,000 ಹೊಸ ಪ್ರಕರಣಗಳು ಕಂಡುಬಂದಿದ್ದು, 578 ಜನ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕರ್ನಾಟಕ ಸೇರಿ 6 ರಾಜ್ಯಗಳಲ್ಲಿ ಕೊರೊನಾ ಚೇತರಿಕೆ ಪ್ರಮಾಣ ಹೆಚ್ಚಳ!

ಇದುವರೆಗೂ ದೇಶದಲ್ಲಿ 78,73,664 ಪಾಸಿಟಿವ್‌ ಕೇಸ್‌ಗಳು ಕಂಡುಬಂದಿದ್ದರೆ, 70,85,242 ಜನ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 6,69,801 ಪ್ರಕರಣಗಳು ಸಕ್ರಿಯವಾಗಿದ್ದು, 1,18,621 ಜನ ಇದುವರೆಗೂ ಕೊರೊನಾದಿಂದ ದೇಶದಲ್ಲಿ ಮೃತಪಟ್ಟಿದ್ದಾರೆ.

ಇನ್ನೂ ಇದೆ ಕೊರೊನಾ ಅಬ್ಬರ, ಸಾಲು ಸಾಲು ಹಬ್ಬ, ರಜೆ; ಪ್ರವಾಸ, ಮೋಜಿನ ನಡುವೆ ಇರಲಿ ಎಚ್ಚರ!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ