ಆ್ಯಪ್ನಗರ

ದಲಿತ, ಅಲ್ಪಸಂಖ್ಯಾತರ ಹಕ್ಕುಗಳು ಸುರಕ್ಷಿತ: ನಖ್ವಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತರ ಹಕ್ಕುಗಳು ಸಂಪೂರ್ಣ ಸುರಕ್ಷಿತವಾಗಿವೆ ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಕ್ತಾರ್‌ ಅಬ್ಬಾಸ್‌ ನಖ್ವಿ ಹೇಳಿದ್ದಾರೆ.

Vijaya Karnataka 17 Apr 2018, 8:08 am
ರಾಂಪುರ (ಉತ್ತರ ಪ್ರದೇಶ): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತರ ಹಕ್ಕುಗಳು ಸಂಪೂರ್ಣ ಸುರಕ್ಷಿತವಾಗಿವೆ ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಕ್ತಾರ್‌ ಅಬ್ಬಾಸ್‌ ನಖ್ವಿ ಹೇಳಿದ್ದಾರೆ.
Vijaya Karnataka Web Naqui


ಉತ್ತರ ಪ್ರದೇಶದ ರಾಂಪುರದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ''ಮೋದಿ ಆಡಳಿತಾವಧಿಯಲ್ಲಿ ಎಸ್ಸಿ/ಎಸ್ಟಿ, ಅಲ್ಪಸಂಖ್ಯಾತರ ಹಕ್ಕುಗಳಿಗೆ ಧಕ್ಕೆಯಾಗುತ್ತಿದೆ ಎಂದು ಪ್ರತಿಪಕ್ಷಗಳು ಪುಕಾರು ಎಬ್ಬಿಸುತ್ತಿವೆ. ಹಾಗೇನೂ ಇಲ್ಲ. ಸಬ್‌ ಕಾ ಸಾಥ್‌, ಸಬ್‌ ಕಾ ವಿಕಾಸ್‌ ಧ್ಯೇಯದೊಂದಿಗೆ ನಮ್ಮ ಸರಕಾರ ಎಲ್ಲ ವರ್ಗದವರ ಹಿತರಕ್ಷಣೆಗೆ ದುಡಿಯುತ್ತಿದೆ. ಅಭಿವೃದ್ಧಿ ಮೂಲಕ ದೇಶದ ಚಹರೆ ಬದಲಿಸಲು ಯತ್ನಿಸುತ್ತಿದೆ. ಇವೆಲ್ಲವನ್ನೂ ಸಹಿಸದ ಪ್ರತಿಪಕ್ಷಗಳು 'ಮಧ್ಯರಾತ್ರಿ ರಾಜಕೀಯ ಪಿತೂರಿ' ನಡೆಸುತ್ತಿವೆ,'' ಎಂದು ವಾಗ್ದಾಳಿ ನಡೆಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ