ಆ್ಯಪ್ನಗರ

ಉಪ ಸಮರ ಸೋಲಿನ ಹೊಣೆ ಸಿದ್ದರಾಮಯ್ಯ, ದಿನೇಶ್‌ ಮೇಲೆ ಹೊರಿಸುವುದು ಬೇಡ, ಸಾಮೂಹಿಕ ಹೊಣೆಗಾರಿಕೆ ಇರಲಿ: ದೇಶಪಾಂಡೆ

15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್‌ ಮಖಾಡೆ ಮಲಗಿದೆ. ಒಂದಿಬ್ಬರು ನಾಯಕರ ಮೇಲೆ ಸೋಲಿನ ಹೊಣೆ ಹೊರಿಸುವುದು ತರವಲ್ಲ ಎಂದಿದ್ದಾರೆ ಆರ್‌ವಿಡಿ

Vijaya Karnataka Web 10 Dec 2019, 6:13 pm
ಶಿರಸಿ: 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲನುಭವಿಸಿದೆ. ಜನರ ತೀರ್ಪನ್ನು ನಾವು ಒಪ್ಪಿಕೊಳ್ಳಲೇಬೇಕಾಗಿದೆ. ಈ ಸೋಲಿನ ಹೊಣೆಯನ್ನು ಕೇವಲ ಒಂದಿಬ್ಬರು ನಾಯಕರ ಮೇಲೆ ಹೊರಿಸುವುದು ಸರಿಯಲ್ಲ ಎಂದು ಮಾಜಿ ಸಚಿವ ಆರ್‌ವಿ ದೇಶಪಾಂಡೆ ತಿಳಿಸಿದ್ದಾರೆ.
Vijaya Karnataka Web ಆರ್‌ವಿ ದೇಶಪಾಂಡೆ
ಆರ್‌ವಿ ದೇಶಪಾಂಡೆ


ಕಾಂಗ್ರೆಸ್ ಧುರೀಣ, ಮಾಜಿ ಸಚಿವ ಆರ್ ವಿ ದೇಶಪಾಂಡೆ ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಉಪ ಚುನಾವಣೆ ಫಲಿತಾಂಶದ ನಂತರ ನೈತಿಕ ಹೊಣೆ ಹೊತ್ತು ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ. ಆದರೆ ಚುನಾವಣೆ ಎಂದ ಮೇಲೆ ಸಾಮೂಹಿಕ ಜವಾಬ್ದಾರಿ ಇರುತ್ತದೆ. ಇದನ್ನು ಎಲ್ಲರೂ ತಿಳಿದುಕೊಳ್ಳಬೇಕು ಎಂದರು.

ವಿಪಕ್ಷ ನಾಯಕ ಸ್ಥಾನದಲ್ಲಿ ಸಿದ್ದು ಮುಂದುವರಿಕೆ ? ಎಂಬಿ ಪಾಟೀಲ್‌

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಸೋಲಿನ ಹೊಣೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ದಿನೇಶ ಗುಂಡೂರಾವ್ ಅವರಿಬ್ಬರ ಮೇಲೆ ಹಾಕಲು ಸಾಧ್ಯವಿಲ್ಲ ಎಂದು ಮಾಜಿ ಸಚಿವರು ತಿಳಿಸಿದರು.

ಸೋಲು ಗೆಲುವಿಗೆ ಪಕ್ಷದ ಮುಖಂಡರು ಸಾಮೂಹಿಕ ಜವಾಬ್ದಾರಿ ಹೊರಬೇಕಾಗುತ್ತದೆ. ಸಿದ್ದರಾಮಯ್ಯ ಮತ್ತು ದಿನೇಶ್‌ ಗುಂಡೂರಾವ್‌ ಇಬ್ಬರು ತಮ್ಮ ಜವಾಬ್ದರಿಯನ್ನು ಮುಂದುವರಿಸಿಕೊಂಡು ಹೋಗಬೇಕಾಗಿದೆ ಎಂದು ಉಭಯ ನಾಯಕರಿಗೂ ದೇಶಪಾಂಡೆ ಬೆಂಬಲ ವ್ಯಕ್ತಪಡಿಸಿದರು.

ಪಕ್ಷದಲ್ಲಿ ಸರಕಾರದಲ್ಲಿ ನಾನು ಸಾಕಷ್ಟು ಜವಾಬ್ದಾರಿ ಹೊತ್ತು ಕೆಲಸ ಮಾಡಿದ್ದೇನೆ. ಸದ್ಯದ ಮಟ್ಟಿಗೆ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುವ ಮನಸ್ಸು ಇದೆ ಎಂದು ವಿವರಿಸಿದರು.

ಮುಂದಿನ ದಿನಗಳಲ್ಲಿ ಪಕ್ಷವನ್ನು ಬೇರುಮಟ್ಟದಿಂದ ಸಂಘಟಿಸಬೇಕಾದರೆ ನಾಯಕರೆಲ್ಲರೂ ಸಾಮೂಹಿಕವಾಗಿ ಜವಾಬ್ದಾರಿ ವಹಿಸಿಕೊಳ್ಳಬೇಕು. ಆಗ ಪಕ್ಷವನ್ನು ಬಲಪಡಿಸಲು ಸಾಧ್ಯ ಎಂದು ದೇಶಪಾಂಡೆ ವಿವರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ