ಆ್ಯಪ್ನಗರ

ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಮುಖಂಡನ ಗುಂಡಿಕ್ಕಿ ಹತ್ಯೆ

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜ್ಯದಲ್ಲಿ ಮತ್ತೆ ರಕ್ತ ಹರಿದಿದೆ. ಯುಪಿ ಯ ಮಾವೋ ಜಿಲ್ಲೆಯಲ್ಲಿ ಸಮಾಜವಾದಿ ಪಕ್ಷದ ಮುಖಂಡರೊಬ್ಬರನ್ನು ಹಾಡುಹಗಲೇ ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಹೊಲಕ್ಕೆ ಹೋಗುತ್ತಿದ್ದ ಸಮಯದಲ್ಲಿ ಈ ದುರ್ಘಟನೆ ನಡೆದಿದೆ.

Vijaya Karnataka Web 12 Jan 2020, 5:26 pm
ಲಕ್ನೋ: ಉತ್ತರಪ್ರದೇಶದ ಮಾವೋ ಜಿಲ್ಲೆಯ ಮುಹಮ್ಮದಾಬಾದ್ ನಲ್ಲಿ ಸಮಾಜವಾದಿ ಪಕ್ಷದ(ಎಸ್ ಪಿ) ಮುಖಂಡ ಬಿಜ್ಲಿ ಯಾದವ್(40) ಎಂಬವರನ್ನು ಅಪರಿಚಿತರು ಗುಂಡಿಕ್ಕಿ ಕೊಂಡಿರುವ ಘಟನೆ ನಡೆದಿದೆ.
Vijaya Karnataka Web gun


ಭಾನುವಾರ ಮುಂಜಾನೆ ಈ ದುರ್ಘಟನೆ ನಡೆದಿದ್ದು, ಬೆಳಗ್ಗೆ ಹೊಲಕ್ಕೆ ಹೋಗುವಾಗ ಗುಂಡು ಹಾರಿಸಿದರು. ಗುಂಡು ತಗುಲಿದ ಯಾದವ್ ಕುಸಿದುಬಿದ್ದು ಸ್ಥಳದಲ್ಲೇ ಕೊನೆಯುಸಿರೆಳೆದರು.

ಸುದ್ದಿ ತಿಳಿದು ಸ್ಥಳದಲ್ಲಿ ನೂರಾರು ಅಭಿಮಾನಿಗಳು ಜಮಾಯಿಸಿ ಸ್ಥಳೀಯ ಆಡಳಿತದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಯಾದವ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಯಾದವ್ ಹತ್ಯೆಯನ್ನು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಖಂಡಿಸಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಇದು ಸ್ಪಷ್ಟ ಉದಾಹರಣೆ ಎಂದು ಆರೋಪಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ