ಆ್ಯಪ್ನಗರ

ನ್ಯಾ.ಖುರೇಷಿ ನೇಮಕ: ಆ. 14ರೊಳಗೆ ತೀರ್ಮಾನಕ್ಕೆ ಬರಲು ಕೇಂದ್ರಕ್ಕೆ ಸೂಚನೆ

ಸಂಸತ್‌ ಅಧಿವೇಶನ ನಡೆಯುತ್ತಿದೆ. ಈ ವಿಚಾರದಲ್ಲಿ ಸ್ಪಷ್ಟ ನಿರ್ಧಾರಕ್ಕೆ ಬರಲು ಸರಕಾರಕ್ಕೆ ಇನ್ನೂ 10 ದಿನಗಳ ಹೆಚ್ಚುವರಿ ಕಾಲಾವಕಾಶ ನೀಡಲಾಗಿದೆ.

Agencies 3 Aug 2019, 5:00 am
ಹೊಸದಿಲ್ಲಿ: ಬಾಂಬೆ ಹೈಕೋರ್ಟ್‌ ನ್ಯಾಯಮೂರ್ತಿ ಎ.ಎ. ಖುರೇಷಿ ಅವರನ್ನು ಮಧ್ಯಪ್ರದೇಶ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸುವಂತೆ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಮಾಡಿದ ಶಿಫಾರಸ್ಸಿನ ಕುರಿತು ಆ. 14ರೊಳಗೆ ನಿರ್ಧಾರಕ್ಕೆ ಬರುವಂತೆ ಸುಪ್ರೀಂ ಕೋರ್ಟ್‌ ಶುಕ್ರವಾರ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಿದೆ. ಕೊಲಿಜಿಯಂ ಮೇ 10ರಂದೇ ಈ ಶಿಫಾರಸು ಮಾಡಿದ್ದರೂ ಕೇಂದ್ರ ಸರಕಾರ ಇದನ್ನು ನಿರ್ಲಕ್ಷಿಸಿ ಜೂನ್‌ 7ರಂದು ನ್ಯಾ. ರವಿಶಂಕರ್‌ ಝಾ ಅವರನ್ನು ಮಧ್ಯಪ್ರದೇಶ ಹೈಕೋರ್ಟ್‌ ಹಂಗಾಮಿ ಸಿಜೆಯಾಗಿ ನೇಮಿಸಿ ಅಧಿಸೂಚನೆ ಹೊರಡಿಸಿದೆ. ಖುರೇಷಿ ಅವರ ವಿಚಾರದಲ್ಲಿ ಕೇಂದ್ರಕ್ಕೆ ಸ್ಪಷ್ಟ ನಿರ್ದೇಶನ ನೀಡುವಂತೆ ಗುಜರಾತ್‌ ಹೈಕೋರ್ಟ್‌ ವಕೀಲರ ಸಂಘವು (ಜಿಎಚ್‌ಸಿಎಎ) ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್‌, ಕೇಂದ್ರಕ್ಕೆ 10 ದಿನಗಳ ಹೆಚ್ಚುವರಿ ಸಮಯ ನೀಡಿದೆ. ''ಸಂಸತ್‌ ಅಧಿವೇಶನ ನಡೆಯುತ್ತಿದೆ. ಈ ವಿಚಾರದಲ್ಲಿ ಸ್ಪಷ್ಟ ನಿರ್ಧಾರಕ್ಕೆ ಬರಲು ಸರಕಾರಕ್ಕೆ ಇನ್ನೂ 10 ದಿನಗಳ ಹೆಚ್ಚುವರಿ ಕಾಲಾವಕಾಶ ನೀಡಲಾಗಿದೆ. ಅಷ್ಟರೊಳಗೆ ಅಭಿಪ್ರಾಯ ಸಲ್ಲಿಸಬೇಕು,'' ಎಂದು ಸಿಜೆಐ ರಂಜನ್‌ ಗೊಗೋಯ್‌ ನೇತೃತ್ವದ ಪೀಠವು ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರಿಗೆ ಸೂಚಿಸಿತು.
Vijaya Karnataka Web sc asks centre to decide by aug 14 appointment of a a kureshi as mp hc chief justice
ನ್ಯಾ.ಖುರೇಷಿ ನೇಮಕ: ಆ. 14ರೊಳಗೆ ತೀರ್ಮಾನಕ್ಕೆ ಬರಲು ಕೇಂದ್ರಕ್ಕೆ ಸೂಚನೆ




ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ