ಆ್ಯಪ್ನಗರ

ಮರಣದಂಡನೆ ಸಿಂಧುತ್ವ: ಸುಪ್ರೀಂ ವಿಭಿನ್ನ ನಿಲುವು

ಮರಣದಂಡನೆಯ ಸಾಂವಿಧಾನಿಕ ಸಿಂಧುತ್ವ ಕುರಿತಾಗಿ ಸುಪ್ರೀಂ ಕೋರ್ಟ್‌ನ ನ್ಯಾಯಪೀಠದಲ್ಲಿ ಬುಧವಾರ ವಿಭಿನ್ನ ಅಭಿಪ್ರಾಯ ವ್ಯಕ್ತ.

Vijaya Karnataka 29 Nov 2018, 7:52 am
ಹೊಸದಿಲ್ಲಿ: ಮರಣದಂಡನೆಯ ಸಾಂವಿಧಾನಿಕ ಸಿಂಧುತ್ವ ಕುರಿತಾಗಿ ಸುಪ್ರೀಂ ಕೋರ್ಟ್‌ನ ನ್ಯಾಯಪೀಠದಲ್ಲಿ ಬುಧವಾರ ವಿಭಿನ್ನ ಅಭಿಪ್ರಾಯ ವ್ಯಕ್ತವಾಯಿತು.
Vijaya Karnataka Web supreme court


ನ್ಯಾ. ಕುರಿಯನ್‌ ಜೋಸೆಫ್‌, ನ್ಯಾ. ದೀಪಕ್‌ ಗುಪ್ತಾ ಮತ್ತು ನ್ಯಾ. ಹೇಮಂತ್‌ ಗುಪ್ತಾ ಅವರನ್ನೊಳಗೊಂಡ ನ್ಯಾಯಪೀಠವು, 2:1 ಬಹುಮತದೊಂದಿಗೆ ಗಲ್ಲು ಶಿಕ್ಷೆ ವಿಧಿಸುವುದನ್ನು ಎತ್ತಿ ಹಿಡಿಯಿತು.

ಅಪರೂಪದಲ್ಲಿ ಅಪರೂಪದ ಪ್ರಕರಣಗಳಲ್ಲಿ ಗಲ್ಲು ಶಿಕ್ಷೆ ವಿಧಿಸುವುದನ್ನು ಉನ್ನತ ಪೀಠವು ಈಗಾಗಲೇ ಎತ್ತಿ ಹಿಡಿದಿರುವುದರಿಂದ ಇಂತಹ ಶಿಕ್ಷೆಯ ಔಚಿತ್ಯವನ್ನು ನ್ಯಾಯಮೂರ್ತಿಗಳಾದ ದೀಪಕ್‌ ಗುಪ್ತಾ ಮತ್ತು ಹೇಮಂತ್‌ ಗುಪ್ತಾ ಪುರಸ್ಕರಿಸಿದರು. ಆದರೆ, ವಿಭಿನ್ನ ನಿಲುವು ವ್ಯಕ್ತಪಡಿಸಿದ ನ್ಯಾ.ಕುರಿಯನ್‌ ಜೋಸೆಫ್‌, ಗಲ್ಲು ಶಿಕ್ಷೆಯು ಅಪರಾಧಗಳನ್ನು ತಡೆಯುವಲ್ಲಿ ಅಥವಾ ಸಂಭಾವ್ಯ ಅಪರಾಧಿಗಳಿಗೆ ಭಯ ಹುಟ್ಟಿಸುವಲ್ಲಿ ವಿಫಲವಾಗಿದೆ ಎಂದರು.

ವ್ಯಕ್ತಿಯೊಬ್ಬರು ತಮಗೆ ವಿಧಿಸಿರುವ ಮರಣದಂಡನೆಯನ್ನು ಜೀವಾವಧಿಗೆ ಇಳಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಪೀಠ ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿತು. ಅಭಿಪ್ರಾಯಭೇದದ ನಡುವೆಯೂ ತ್ರಿಸದಸ್ಯ ಪೀಠ ಗಲ್ಲು ಶಿಕ್ಷೆಯನ್ನು ಜೀವಾವಧಿಗೆ ಮಾರ್ಪಡಿಸಿ ತೀರ್ಪು ನೀಡಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ