ಆ್ಯಪ್ನಗರ

370ನೇ ವಿಧಿ ರದ್ದತಿ ಪ್ರಶ್ನಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ವಿಶೇಷ ವಿಧಿ ರದ್ದುಗೊಳಿಸಿದ ರಾಷ್ಟ್ರಪತಿಗಳ ಆದೇಶ ಪ್ರಶ್ನಿಸಿ ವಕೀಲ ಎಂ.ಎಲ್‌. ಶರ್ಮಾ ಅರ್ಜಿ ಸಲ್ಲಿಸಿದ್ದು, ಆಗಸ್ಟ್‌ 12 ಅಥವಾ 13ರಂದೇ ತುರ್ತು ವಿಚಾರಣೆ ನಡೆಸಬೇಕೆಂದು ಮನವಿ ಮಾಡಿದ್ದರು.

PTI 9 Aug 2019, 5:00 am
ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ವಿಶೇಷ ವಿಧಿ ರದ್ದುಗೊಳಿಸಿದ ರಾಷ್ಟ್ರಪತಿಗಳ ಆದೇಶ ಪ್ರಶ್ನಿಸಿ ವಕೀಲ ಎಂ.ಎಲ್‌. ಶರ್ಮಾ ಅರ್ಜಿ ಸಲ್ಲಿಸಿದ್ದು, ಆಗಸ್ಟ್‌ 12 ಅಥವಾ 13ರಂದೇ ತುರ್ತು ವಿಚಾರಣೆ ನಡೆಸಬೇಕೆಂದು ಮನವಿ ಮಾಡಿದ್ದರು. ಗುರುವಾರ ಈ ಪ್ರಕರಣ ಕೈಗೆತ್ತಿಕೊಂಡ ನ್ಯಾಯಮೂರ್ತಿ ಎನ್‌.ವಿ.ರಮಣ ನೇತೃತ್ವದ ನ್ಯಾಯಪೀಠ, ''ಅರ್ಜಿಯಲ್ಲಿ ಅಂತಹ ತುರ್ತು ಸಂಗತಿಗಳು ಯಾವೂ ಇಲ್ಲ. ಮುಂದಿನ ದಿನಗಳಲ್ಲಿ ಪರಿಗಣಿಸಲಾಗುವುದು,'' ಎಂದು ಮುಂದೂಡಿತು.
Vijaya Karnataka Web supreme

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ