ಆ್ಯಪ್ನಗರ

ಮಹಾ ಸೀಟು ಹಂಚಿಕೆ: 25 ಸ್ಥಾನದಲ್ಲಿ ಬಿಜೆಪಿ, 23 ಸ್ಥಾನದಲ್ಲಿ ಶಿವಸೇನೆ ಸ್ಪರ್ಧೆ

ಕಳೆದ ಕೆಲವು ವರ್ಷಗಳಿಂದಲೂ ಬಿಜೆಪಿ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಶಿವಸೇನೆ ಟೀಕಿಸುತ್ತಿತ್ತು. ರಾಮಮಂದಿರ ನಿರ್ಮಾಣ ವಿಷಯದಲ್ಲೂ ಶಿವಸೇನೆಯು ಬಿಜೆಪಿಗೆ ತಿರುಗೇಟು ನೀಡಿತ್ತು.

Vijaya Karnataka Web 18 Feb 2019, 9:33 pm
ಮುಂಬೈ: ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲು ಮುಂದಾಗಿರುವ ಬಿಜೆಪಿ ಮತ್ತು ಶಿವಸೇನೆ ಈಗ ಸೀಟು ಹಂಚಿಕೆ ಪ್ರಕ್ರಿಯೆಯನ್ನೂ ಪೂರ್ಣಗೊಳಿಸಿದೆ.
Vijaya Karnataka Web ಬಿಜೆಪಿ ಶಿವಸೇನೆ
ಬಿಜೆಪಿ ಶಿವಸೇನೆ


ಮುಂಬೈನಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಮತ್ತು ಶಿವಸೇನೆ ಮುಖ್ಯಸ್ಥ ಉದ್ಧವ್‌ ಠಾಕ್ರೆ, ಸೀಟು ಹಂಚಿಕೆ ಬಗ್ಗೆ ಮಾಹಿತಿ ನೀಡಿದರು.

ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ಮತ್ತು ಶಿವಸೇನೆ ಸಮ್ಮತಿಸಿದೆ ಎಂದು ಫಡ್ನವೀಸ್‌ ತಿಳಿಸಿದರು.

ಮೂವರು ನಾಯಕರ ಮಾತುಕತೆಯ ನಂತರ ಸೀಟು ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಒಟ್ಟು 48 ಸ್ಥಾನಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ ಬಿಜೆಪಿ 25 ಮತ್ತು ಶಿವಸೇನೆ 23 ಕ್ಷೇತ್ರಗಳನ್ನು ಹಂಚಿಕೊಂಡಿವೆ.

ಲೋಕಸಭೆ ಮಾತ್ರವಲ್ಲ, ವಿಧಾನಸಭೆ ಚುನಾವಣೆಯಲ್ಲೂ ಬಿಜೆಪಿ, ಶಿವಸೇನೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿವೆ. ವಿಧಾನಸಭೆ ಚುನಾವಣೆ ಉಭಯ ಪಕ್ಷಗಳ ತಲಾ 50:50 ಸೀಟುಗಳನ್ನು ಹಂಚಿಕೊಂಡು ಸ್ಪರ್ಧಿಸಲಿವೆ.

ಕಳೆದ ಕೆಲವು ವರ್ಷಗಳಿಂದಲೂ ಬಿಜೆಪಿ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಶಿವಸೇನೆ ಟೀಕಿಸುತ್ತಿತ್ತು. ರಾಮಮಂದಿರ ನಿರ್ಮಾಣ ವಿಷಯದಲ್ಲೂ ಶಿವಸೇನೆಯು ಬಿಜೆಪಿಗೆ ತಿರುಗೇಟು ನೀಡಿತ್ತು.

ಈಗ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಭಿನ್ನಾಭಿಪ್ರಾಯಗಳನ್ನು ಮರೆತು ಶಿವಸೇನೆ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡು ಸೀಟುಗಳನ್ನು ಹಂಚಿಕೊಂಡಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ