ಆ್ಯಪ್ನಗರ

ಸಿಧು ವಿರುದ್ಧ ರಾಜದ್ರೋಹ ಪ್ರಕರಣ

ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಇಮ್ರಾನ್‌ ಖಾನ್‌ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಪಾಕ್‌ ಸೇನಾ ಮುಖ್ಯಸ್ಥರನ್ನು ಅಪ್ಪಿಕೊಂಡ ಕಾಂಗ್ರೆಸ್‌ ನಾಯಕ ನವಜೋತ್‌ ಸಿಂಗ್‌ ಸಿಧು ವಿರುದ್ಧ ಬಿಹಾರದ ನ್ಯಾಯಾಲಯದಲ್ಲಿ ರಾಜದ್ರೋಹದ ಪ್ರಕರಣ ದಾಖಲಾಗಿದೆ.

Vijaya Karnataka 21 Aug 2018, 10:39 am
ಮುಜಾಫರ್‌ಪುರ: ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಇಮ್ರಾನ್‌ ಖಾನ್‌ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಪಾಕ್‌ ಸೇನಾ ಮುಖ್ಯಸ್ಥರನ್ನು ಅಪ್ಪಿಕೊಂಡ ಕಾಂಗ್ರೆಸ್‌ ನಾಯಕ ನವಜೋತ್‌ ಸಿಂಗ್‌ ಸಿಧು ವಿರುದ್ಧ ಬಿಹಾರದ ನ್ಯಾಯಾಲಯದಲ್ಲಿ ರಾಜದ್ರೋಹದ ಪ್ರಕರಣ ದಾಖಲಾಗಿದೆ.
Vijaya Karnataka Web Sidhu


ಸಿಧು ವಿರುದ್ಧ ಬಿಹಾರದ ಮುಜಾಫರ್‌ಪುರದ ಮುಖ್ಯ ಜುಡಿಶಿಯಲ್‌ ಮ್ಯಾಜಿಸ್ಪ್ರೇಟ್‌ ನ್ಯಾಯಾಲಯದಲ್ಲಿ ವಕೀಲ ಸುಧೂರ್‌ ಓಜಾ ಅವರು ಸೋಮವಾರ ಪ್ರಕರಣ ದಾಖಲಿಸಿದ್ದಾರೆ. '' ಸಿಧು ಅವರ ನಡುವಳಿಕೆ ದೇಶದ ಜನರ ಭಾವನೆಗಳಿಗೆ ಧಕ್ಕೆಯುಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ದೇಶದ್ರೋಹಕ್ಕೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ಸಿಧು ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪ್ರಕರಣವನ್ನು ನ್ಯಾಯಾಲಯ ಪುರಸ್ಕರಿಸಿದ್ದು, ಮುಂದಿನ ವಾರದಲ್ಲಿ ಈ ಸಂಬಂಧ ವಿಚಾರಣೆ ಆರಂಭವಾಗಲಿದೆ,'' ಎಂದು ವಕೀಲ ಸುಧೂರ್‌ ಓಜಾ ತಿಳಿಸಿದ್ದಾರೆ. ಈ ನಡುವೆ, ತಮ್ಮ ವಿರುದ್ಧದ ಟೀಕೆಗಳಿಎಗ ಸಕಾಲದಲ್ಲಿ ದಿಟ್ಟ ಉತ್ತರ ನೀಡುವುದಾಗಿ ಸಿಧು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ