ಆ್ಯಪ್ನಗರ

ನಿಯಂತ್ರಣಕ್ಕೆ ಬಂದ ಬೆಂಕಿ: ಸೀರಮ್ ಇನ್ಸ್ಟಿಟ್ಯೂಟ್‌ನ ಎಲ್ಲಾ ಸಿಬ್ಬಂದಿ ಸುರಕ್ಷಿತ!

ಕೋವಿಶೀಲ್ಡ್ ಕೊರೊನಾ ಲಸಿಕೆ ತಯಾರಕ ಸಂಸ್ಥೆ ಸೀರಮ್ ಇನ್ಸ್ಟಿಟ್ಯೂಟ್‌ನಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯನ್ನು ನಂದಿಸುವಲ್ಲಿ ಅಗ್ನಶಾಮಕ ದಳ ಯಶಸ್ವಿಯಾಗಿದೆ. ಟ್ಟಡದಲ್ಲಿ ಸಿಲುಕಿದ್ದ ಎಲ್ಲಾ ಸಿಬ್ಬಂದಿಯನ್ನು ರಕ್ಷಿಸಲಾಗಿದ್ದು, ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

Vijaya Karnataka Web 21 Jan 2021, 5:55 pm
ಪುಣೆ: ಕೋವಿಶೀಲ್ಡ್ ಕೊರೊನಾ ಲಸಿಕೆ ತಯಾರಕ ಸಂಸ್ಥೆ ಸೀರಮ್ ಇನ್ಸ್ಟಿಟ್ಯೂಟ್‌ನಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯನ್ನು ನಂದಿಸುವಲ್ಲಿ ಅಗ್ನಶಾಮಕ ದಳ ಯಶಸ್ವಿಯಾಗಿದೆ.
Vijaya Karnataka Web Serum Institute
ಸೀರಮ್ ಇನ್ಸ್ಟಿಟ್ಯೂಟ್‌ನಲ್ಲಿ ಕಾಣಿಸಿಕೊಂಡ ಬೆಂಕಿ ನಿಯಂತ್ರಣಕ್ಕೆ


ಈ ಕುರಿತು ಮಾತನಾಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಸೀರಮ್ ಇನ್ಸ್ಟಿಟ್ಯೂಟ್‌ನ ಹೊರವಲಯದ ಕಟ್ಟಡಗಳಿಗೆ ತಗುಲಿದ್ದ ಬೆಂಕಿಯನ್ನು ನಂದಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಕಟ್ಟಡದಲ್ಲಿ ಸಿಲುಕಿದ್ದ ಎಲ್ಲಾ ಸಿಬ್ಬಂದಿಯನ್ನು ರಕ್ಷಿಸಲಾಗಿದ್ದು, ಯಾರಿಗೂ ಗಂಭೀರ ಗಾಯಗಳಾಗದಿರುವುದು ಸಂತಸದ ಸಂಗತಿ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.


ಇನ್ನು ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಮಾಲೀಕ ಆದಾರ್ ಪೂನಾವಾಲಾ, ಬೆಂಕಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಘಟನೆಯಲ್ಲಿ ನಮ್ಮ ಯಾವುದೇ ಸಿಬ್ಬಂದಿಗೆ ಗಾಯಗಳಾಗಿಲ್ಲ ಎಂದಿರುವ ಆದಾರ್ ಪೂನಾವಾಲಾ, ಸಿಬ್ಬಂದಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಬೆಂಕಿ ಅವಘಡದಿಂದ ಲಸಿಕೆ ತಯಾರಿಕೆ ಪ್ರಕ್ರಿಯೆಗೆ ಅಡ್ಡಿಯಾಗದು: ಸೀರಮ್ ಭರವಸೆ!

ಇನ್ನು ಬೆಂಕಿ ಅವಘಡಕ್ಕೆ ಆಘಾತ ವ್ಯಕ್ತಪಡಿಸಿ ಕಾಳಜಿ ತೋರಿದ ಎಲ್ಲರಿಗೂ ಧನ್ಯವಾದ ಅರ್ಪಿಸಿದ ಆದಾರ್ ಪೂನಾವಾಲಾ, ಲಸಿಕೆ ಉತ್ಪಾದನೆ ಹಾಗೂ ಹಂಚಿಕೆ ಪ್ರಕ್ರಿಯೆಗೆ ಎಂದಿನಂತೆ ಮುಂದುವರೆಯಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಬೆಂಕಿ ನಂದಿಸುವ ಕಾರ್ಯ ಹಾಗೂ ರಕ್ಷಣಾ ಕಾರ್ಯಾಚರಣೆ ಉಸ್ತುವಾರಿ ಹೊತ್ತಿದ್ದ ಪುಣೆ ಪೊಲೀಸ್ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗೆ ಆದಾರ್ ಪೂನಾವಾಲಾ ವಿಶೇಷ ಧನ್ಯವಾದ ಅರ್ಪಿಸಿದ್ದಾರೆ.


ನಮ್ಮ ಲಸಿಕೆ ಉತ್ಪಾದನೆ ಹಾಗೂ ವಿತರಣೆ ಘಟಕಗಳು ಸುರಕ್ಷಿತವಾಗಿದ್ದು, ಇಂದೂ(ಜ.21--ಗುರುವಾರ) ಕೂಡ ಲಸಿಕೆಯನ್ನು ವಿವಿಧ ಪ್ರದೇಶಗಳಿಗೆ ಸಾಗಿಸುವ ಕಾರ್ಯ ನಡೆದಿದೆ ಎಂದು ಆದಾರ್ ಪೂನಾವಾಲಾ ನುಡಿದರು.

ಬೆಂಕಿ ಅವಘಡದಿಂದ ಹೊಸ ಕಟ್ಟಡದ ಕೆಲವು ಭಾಗಗಳಿಗೆ ಹಾನಿಯಾಗಿದ್ದು, ಶೀಘ್ರದಲ್ಲೇ ದುರಸ್ತಿ ಕಾರ್ಯ ಕೈಗೊಳ್ಳಲಾಗುವುದು. ಅಲ್ಲದೇ ಲಸಿಕೆ ಉತ್ಪಾದನೆ ಹಾಗೂ ಹಂಚಿಕೆ ಪ್ರಕ್ರಿಯೆಯ ವೇಗ ಹೆಚ್ಚಿಸಲಾಗುವುದು ಎಂದು ಆದಾರ್ ಪೂನಾವಾಲಾ ಈ ವೇಳೆ ಭರವಸೆ ನೀಡಿದ್ದರು.

ಪುಣೆ: ಕೊರೊನಾ ಲಸಿಕಾ ತಯಾರಕ ಸೀರಮ್ ಇನ್ಸ್ಟಿಟ್ಯೂಟ್ ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ!

ವಿಶೇಷ ಆರ್ಥಿಕ ವಲಯ(SEZ)ದ ಭಾಗವಾಗಿದ್ದ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಟರ್ಮಿನಲ್ ಗೇಟ್ 1ರ ಒಳಗಿರುವ ಕಟ್ಟಡ ಮೂರು, ನಾಲ್ಕು ಮತ್ತು ಐದನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ