ಆ್ಯಪ್ನಗರ

ಸೋನಿಯಾ, ರಾಹುಲ್‌ಗೆ ಹಿನ್ನಡೆ: ನ್ಯಾಶನಲ್ ಹೆರಾಲ್ಡ್ ಪ್ರಕರಣದಲ್ಲಿ ಐಟಿ ತನಿಖೆ

ನ್ಯಾಶನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅದಾಯ ತೆರಿಗೆ ಇಲಾಖೆಗೆ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ವಿಚಾರಣೆ ನಡೆಸಲು ದಿಲ್ಲಿ ಹೈಕೋರ್ಟ್ ಒಪ್ಪಿಗೆ ನೀಡಿದೆ.

ಟೈಮ್ಸ್ ಆಫ್ ಇಂಡಿಯಾ 12 May 2017, 5:12 pm
ಹೊಸದಿಲ್ಲಿ: ನ್ಯಾಶನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅದಾಯ ತೆರಿಗೆ ಇಲಾಖೆಗೆ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ವಿಚಾರಣೆ ನಡೆಸಲು ದಿಲ್ಲಿ ಹೈಕೋರ್ಟ್ ಒಪ್ಪಿಗೆ ನೀಡಿದೆ ಎಂದು ಟೈಮ್ಸ್ ನೌ ವರದಿ ಮಾಡಿದೆ.
Vijaya Karnataka Web setback for sonia gandhi rahul delhi high court allows i t probe in national herald case
ಸೋನಿಯಾ, ರಾಹುಲ್‌ಗೆ ಹಿನ್ನಡೆ: ನ್ಯಾಶನಲ್ ಹೆರಾಲ್ಡ್ ಪ್ರಕರಣದಲ್ಲಿ ಐಟಿ ತನಿಖೆ


2012 ರಲ್ಲಿ ಬಿಜೆಪಿ ಸಂಸದ ಸುಬ್ರಮಣ್ಯನ್ ಸ್ವಾಮಿ ಅವರು ಸಲ್ಲಿಸಿದ್ದ ಖಾಸಗಿ ದೂರಿನ ಆಧಾರದ ಮೇಲೆ ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ.

ಸುಮಾರು 2 ಸಾವಿರ ಕೋಟಿ ರೂ. ಮೌಲ್ಯದ ಕಂಪನಿಯನ್ನು ಪಡೆಯಲು ಕೇವಲ 50 ಲಕ್ಷ ರೂ.ಗಳನ್ನು ಪಾವತಿಸಿ ಗಾಂಧಿ ಕುಟುಂಬ ಹಾಗೂ ಇತರರು ಸೇರಿ ಮೋಸ ಮಾಡಿದ್ದಾರೆ ಎಂದು ಸ್ವಾಮಿ ಆರೋಪಿಸಿದ್ದರು. ಗಾಂಧಿ ಕುಟುಂಬದ ಜತೆ ಮೋತಿಲಾಲ್ ವೊರಾ, ಆಸ್ಕರ್ ಫೆರ್ನಾಂಡಿಸ್, ಸುಮನ್ ದುಬೆ ಹಾಗೂ ಸ್ಯಾಮ್ ಪಿಟ್ರೋಡಾ ಪ್ರಕರಣದ ತನಿಖೆಯನ್ನು ಎದುರಿಸುತ್ತಿದ್ದಾರೆ.

ಪ್ರಕರಣದಲ್ಲಿ ಗಾಂಧಿ ಕುಟುಂಬ ಹಾಗೂ ತಮ್ಮನ್ನು ಸಿಲುಕಿಸಲು ತಂತ್ರ ರೂಪಿಸಲಾಗಿದೆ. ಆದರೆ, ಇದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲ ಎಂದು ಪ್ರಕರಣದ ಆರೋಪ ಹೊತ್ತ ಕಾಂಗ್ರೆಸ್ ನಾಯಕರು ವಾದಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ