ಆ್ಯಪ್ನಗರ

ವಿದೇಶದಿಂದ ಆಗಮಿಸುವವರಿಗೆ 7 ದಿನ ಕಡ್ಡಾಯ ಕ್ವಾರಂಟೈನ್‌, ನಿಯಮ ಬದಲಿಸಿದ ಕೇಂದ್ರ

ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರು 7 ದಿನಗಳ ಕಾಲ ಮನೆಯಲ್ಲೇ ಕ್ವಾರಂಟೈನ್‌ಗೆ ಒಳಗಾಗುವುದನ್ನು ಕೇಂದ್ರ ಸರಕಾರ ಕಡ್ಡಾಯಗೊಳಿಸಿದೆ. ದೇಶದಲ್ಲಿ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ ಒಂದೇ ಸಮನೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಈ ಕ್ರಮ ಕೈಗೊಂಡಿದ್ದು, ಮಂಗಳವಾರದಿಂದ ನೂತನ ನಿಯಮಗಳು ಜಾರಿಗೆ ಬರಲಿವೆ.

Agencies 7 Jan 2022, 7:33 pm
ಹೊಸದಿಲ್ಲಿ: ಇನ್ನು ಮುಂದೆ ವಿದೇಶದಿಂದ ಭಾರತಕ್ಕೆ ಬಂದಿಳಿಯುವವರು 7 ದಿನಗಳ ಕಾಲ ಮನೆಯಲ್ಲೇ ಕಡ್ಡಾಯವಾಗಿ ಕ್ವಾರಂಟೈನ್‌ಗೆ ಒಳಗಾಗಲೇಬೇಕು. ಮತ್ತು 8ನೇ ದಿನ ಕೊರೊನಾ ಪರೀಕ್ಷೆಗೆ ಒಳಪಡಬೇಕು ಎಂದು ಕೇಂದ್ರ ಸರಕಾರ ಶುಕ್ರವಾರ ಮಾರ್ಗಸೂಚಿ ಹೊರಡಿಸಿದೆ. ದೇಶದಲ್ಲಿ ಓಮಿಕ್ರಾನ್‌ ಪ್ರಕರಣಗಳ ಸಂಖ್ಯೆ ಒಂದೇ ಸಮನೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಈ ಕ್ರಮ ಕೈಗೊಂಡಿದ್ದು, ಮಂಗಳವಾರದಿಂದ ನೂತನ ನಿಯಮಗಳು ಜಾರಿಗೆ ಬರಲಿವೆ.
Vijaya Karnataka Web RTPCR


ಇದೇ ವೇಳೆ ಅಪಾಯದ ದೇಶಗಳ ಪಟ್ಟಿ (ಅಟ್‌ ರಿಸ್ಕ್‌)ಯಲ್ಲಿರುವ ದೇಶಗಳ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಡಿಸೆಂಬರ್‌ನಿಂದ ಇಲ್ಲಿಯವರೆಗೆ ಈ ಪಟ್ಟಿಗೆ 9 ದೇಶಗಳನ್ನು ಸೇರ್ಪಡೆ ಮಾಡಲಾಗಿದೆ.

ಎಲ್ಲಾ ಪ್ರಯಾಣಿಕರು ಏಳು ದಿನಗಳವರೆಗೆ ಹೋಮ್ ಐಸೋಲೇಶನ್‌ನಲ್ಲಿ ಇರಬೇಕು ಮತ್ತು ನಂತರ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಬೇಕು. ಒಂದೊಮ್ಮೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಲ್ಲಿ, ಅವರನ್ನು ಐಸೋಲೇಷನ್‌ ಕೇಂದ್ರಕ್ಕೆ ಕಳುಹಿಸಿ ಸ್ಯಾಂಪಲ್‌ಗಳನ್ನು ಜೀನೋಮ್ ಸೀಕ್ವೆನ್ಸಿಂಗ್‌ ಪರೀಕ್ಷೆಗೆ ಕಳುಹಿಸಲಾಗುತ್ತದೆ.

ಏಳು ತಿಂಗಳ ಬಳಿಕ ಮತ್ತೆ ಲಕ್ಷದ ಗಡಿ ದಾಟಿದ ಕೋವಿಡ್ ಕೇಸ್: ಶೇ 28ರಷ್ಟು ಏರಿಕೆ
ಕೊರೊನಾ ದೃಢಪಟ್ಟಲ್ಲಿ ಅವರ ಬಳಿ ಕುಳಿತಿರುವ ಪ್ರಯಾಣಿಕರು ಮತ್ತು ಕ್ಯಾಬಿನ್ ಸಿಬ್ಬಂದಿಯನ್ನು ಸಂಪರ್ಕಿತರೆಂದು ಪರಿಗಣಿಸಲಾಗುತ್ತದೆ. ಒಂದೊಮ್ಮೆ ಫಲಿತಾಂಶ ನೆಗೆಟಿವ್‌ ಬಂದಲ್ಲಿ ಮುಂದಿನ 7 ದಿನಗಳವರೆಗೆ ಪ್ರಯಾಣಿಕರು ತಮ್ಮ ಆರೋಗ್ಯದ ಬಗ್ಗೆ ಸ್ವಯಂ ಮೇಲ್ವಿಚಾರಣೆ ಮಾಡುತ್ತಿರಬೇಕು ಎಂದು ನಿಮಯಗಳು ಹೇಳಿವೆ.

‘ಅಪಾಯದಲ್ಲಿರುವ’ ಪಟ್ಟಿಯಲ್ಲಿ ಇಲ್ಲದ ದೇಶಗಳಿಂದ ಆಗಮಿಸುವ ಪ್ರಯಾಣಿಕರಲ್ಲಿ ಶೇ. 2 ಪ್ರಯಾಣಿಕರನ್ನು ರ್ಯಾಂಡಮ್‌ ಆಗಿ ಪರೀಕ್ಷಿಸಲಾಗುತ್ತದೆ.

ಭಾರತದಲ್ಲಿ ಶುಕ್ರವಾರ 1,17,100 ಹೊಸ ಕೋವಿಡ್ ಪ್ರಕರಣಗಳನ್ನು ದೃಢಪಟ್ಟಿದ್ದು, 24 ಗಂಟೆಳ ಅಂತರದಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಶೇ. 28ರಷ್ಟು ಏರಿಕೆ ಕಂಡಿದೆ. ಓಮಿಕ್ರಾನ್ ರೂಪಾಂತರದಿಂದ ಕೊರೊನಾ ಪ್ರಕರಣಗಳ ಸಂಖ್ಯೆ ಒಂದೇ ಸಮನೆ ಏರಿಕೆಯಾಗುತ್ತಿದ್ದು, ಒಂದೇ ವಾರದಲ್ಲಿ ಹೊಸ ಕೇಸ್‌ಗಳ ಸಂಖ್ಯೆ 10,000 ರಿಂದ ಒಂದು ಲಕ್ಷ ದಾಟಿದೆ.

ಏರ್‌ಪೋರ್ಟ್‌ನಲ್ಲಿ ಸ್ಕ್ರೀನಿಂಗ್ ಸಮಯದಲ್ಲಿ ರೋಗ ಲಕ್ಷಣಗಳು ಕಂಡುಬಂದ ಪ್ರಯಾಣಿಕರನ್ನು ಪ್ರತ್ಯೇಕಿಸಿ ವೈದ್ಯಕೀಯ ಸೌಲಭ್ಯಕ್ಕೆ ಕರೆದೊಯ್ಯಲಾಗುತ್ತದೆ. ಅವರಿಗೆ ಪರೀಕ್ಷೆಯಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಲ್ಲಿ ಅವರ ಸಂಪರ್ಕಿತರನ್ನು ಗುರುತಿಸಲಾಗುತ್ತದೆ.

ಹೋಮ್ ಕ್ವಾರಂಟೈನ್ ಅಥವಾ ಸ್ವಯಂ-ಆರೋಗ್ಯದ ಮೇಲ್ವಿಚಾರಣೆಯಲ್ಲಿದ್ದಾಗ ಕೊರೊನಾ ಲಕ್ಷಣಗಳು ಕಾಣಿಸಿದಲ್ಲಿ ಅಥವಾ ಕೊರೊನಾ ಸೋಂಕು ದೃಢಪಟ್ಟಲ್ಲಿ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಮಾಹಿತಿ ನೀಡಲು ಪ್ರಯಾಣಿಕರಿಗೆ ಸೂಚಿಸಲಾಗಿದೆ.

"ಅಪಾಯದಲ್ಲಿರುವ" ದೇಶಗಳಿಂದ ಬರುವವರಿಗೂ ನಿಯಮಗಳು ಒಂದೇ ಆಗಿವೆ. ಆದರೆ ಅವರು ಬಂದ ತಕ್ಷಣ ಪರೀಕ್ಷೆಯನ್ನು ತೆಗೆದುಕೊಂಡು, ಫಲಿತಾಂಶ ಬಂದ ಬಳಿಕವಷ್ಟೇ ಮುಂದಿನ ವಿಮಾನದಲ್ಲಿ ಪ್ರಯಾಣಿಸಬಹುದು ಅಥವಾ ತಮ್ಮ ಮನೆಗೆ ತೆರಳಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ