ಆ್ಯಪ್ನಗರ

ನಕ್ಸಲರ ನಿರ್ನಾಮಕ್ಕೆ ಶಾ ಪಣ

ಮಾವೋವಾದಿಗಳು ಪ್ರಜಾಪ್ರಭುತ್ವ ಪರಿಕಲ್ಪನೆಯ ವಿರೋಧಿಗಳು ಎಂದು ಬಣ್ಣಿಸಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು, ನಕ್ಸಲರನ್ನು ಮೂಲೋತ್ಪಾಟನೆ ಮಾಡುವುದಾಗಿ ಘೋಷಿಸಿದ್ದಾರೆ.

PTI 27 Aug 2019, 5:00 am
ಹೊಸದಿಲ್ಲಿ: ನಕ್ಸಲ್‌ ಪಿಡುಗನ್ನು ದೇಶದಲ್ಲಿ ನಿರ್ನಾಮಗೊಳಿಸಲು ಕೇಂದ್ರ ಸರಕಾರ ಹಾಗೂ ನಕ್ಸಲ್‌ ಪಿಡಿತ ರಾಜ್ಯಗಳು ಸೋಮವಾರ ಜಂಟಿಯಾಗಿ ಸಂಕಲ್ಪ ತೊಟ್ಟಿವೆ.
Vijaya Karnataka Web naxal-PTI


ಮಾವೋವಾದಿಗಳು ಪ್ರಜಾಪ್ರಭುತ್ವ ಪರಿಕಲ್ಪನೆಯ ವಿರೋಧಿಗಳು ಎಂದು ಬಣ್ಣಿಸಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು, ನಕ್ಸಲರನ್ನು ಮೂಲೋತ್ಪಾಟನೆ ಮಾಡುವುದಾಗಿ ಘೋಷಿಸಿದ್ದಾರೆ.

ಸೋಮವಾರ ನಕ್ಸಲ್‌ ಪೀಡಿತ 10 ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ನಕ್ಸಲ್‌ ನಿಗ್ರಹ ಕಾರ್ಯಾಚರಣೆಯಲ್ಲಿ ತೊಡಗಿರುವ ಅರೆ ಸೇನಾ ಪಡೆಗಳ ಹಿರಿಯ ಅಧಿಕಾರಿಗಳ ಜತೆ ಶಾ ಚರ್ಚೆ ನಡಸಿದರು. ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಇಂತಹ ಸಭೆಯನ್ನು ಶಾ ನಡೆಸಿದ್ದು, ಸರಕಾರದ ಮುಂದಿನ ಕಾರ್ಯಯೋಜನೆಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ; ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ಆಂಧ್ರಪ್ರದೇಶ, ಛತ್ತೀಸ್‌ಗಢ ಸೇರಿದಂತೆ ಹತ್ತು ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

''ನಕ್ಸಲ್‌ ಪೀಡಿತ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಫಲಪ್ರದವಾದ ಸಭೆ ನಡೆಸಿದ್ದೇನೆ. ಈ ರಾಜ್ಯಗಳಲ್ಲಿ ಭದ್ರತೆ ಮತ್ತು ಅಭಿವೃದ್ಧಿ ಕುರಿತಾಗಿ ಹಲವು ವಿಷಯಗಳನ್ನು ಚರ್ಚಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿಎಡಪಂಥೀಯ ನಕ್ಸಲಿಸಂ ಅನ್ನು ಬೇರು ಸಹಿತ ನಾಶಮಾಡಲು ನಾವು ಬದ್ಧವಾಗಿದ್ದೇವೆ,'' ಎಂದು ಸಭೆಯ ಬಳಿಕ ಶಾ ಟ್ವೀಟ್‌ ಮಾಡಿದ್ದಾರೆ.

ಸಭೆಯಲ್ಲಿ ಭಾಗವಹಿಸಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು, ''ನಕ್ಸಲರ ವಿರುದ್ಧ ಹೋರಾಟವು ಕೇಂದ್ರ ಮತ್ತು ರಾಜ್ಯಗಳ ಜಂಟಿ ಜವಾಬ್ದಾರಿ. ಪ್ರಸ್ತುತ ರಾಜ್ಯಗಳ ಮೇಲೆ ಹೆಚ್ಚಿನ ಹೊಣೆ ಹೊರಿಸಿರುವ ಹಾಲಿ ನೀತಿಯನ್ನು ಬದಲಾಯಿಸಬೇಕಿದೆ,'' ಎಂದು ಅಭಿಪ್ರಾಯಪಟ್ಟರು. ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಅವರು ಕೇಂದ್ರದಿಂದ ಹೆಚ್ಚಿನ ಅನುದಾನ ನೀಡಬೇಕೆಂದು ಆಗ್ರಹಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ