ಆ್ಯಪ್ನಗರ

ನಾಲ್ಕನೇ ಬಾರಿಗೆ ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಸೋಮವಾರ ಸಂಜೆ ಚೌಹಾಣ್‌ ಪ್ರಮಾಣವಚನ

ಸಂಜೆ 7 ಗಂಟೆಗೆ ನಾಲ್ಕನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಶಿವರಾಜ್‌ ಸಿಂಗ್‌ ಚೌಹಾಣ್‌ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳಿವೆ. ಒಂದೊಮ್ಮೆ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದೇ ಆದಲ್ಲಿ, ಕೊರೊನಾ ವೈರಸ್‌ನ್ನು ಎದುರಿಸುವ ಮೊದಲ ಸವಾಲು ಅವರಿಗೆ ಎದುರಾಗಲಿದೆ.

Agencies 23 Mar 2020, 3:40 pm

ಭೋಪಾಲ್‌: ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಮೂರು ಬಾರಿಯ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದ್ದು ಅವರು ಸೋಮವಾರ ಸಂಜೆ 7 ಗಂಟೆಗೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.
Vijaya Karnataka Web BJP vice-president Shivraj Singh Chouhan


ಕಾಂಗ್ರೆಸ್‌ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಬೆಂಬಲಿಗ 22 ಶಾಸಕರ ರಾಜೀನಾಮೆಯಿಂದ ಕಳೆದ ವಾರ ಮಧ್ಯ ಪ್ರದೇಶ ಕಾಂಗ್ರೆಸ್ ಸರಕಾರ ಅಲ್ಪಮತಕ್ಕೆ ಕುಸಿದಿತ್ತು. ಬಹುಮತ ಉಳಿಸಿಕೊಳ್ಳಲು ಭಾರಿ ಕಸರತ್ತು ನಡೆಸಿದ್ದ ಮುಖ್ಯಮಂತ್ರಿ ಕಮಲ್‌ನಾಥ್‌ ಕೊನೆಗೆ ಸುಪ್ರೀಂ ಕೋರ್ಟ್‌ನ ತೀರ್ಪಿನ ಹಿನ್ನೆಲೆಯಲ್ಲಿ ಡೆಡ್‌ಲೈನ್‌ಗಿಂತ ಕೆಲವೇ ಗಂಟೆಗಳ ಮೊದಲು ಗುರುವಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಮೂಲಕ ಕಾಂಗ್ರೆಸ್‌ ಸರಕಾರ ಪತನವಾಗಿತ್ತು.

ಇದೀಗ ವಿಧಾನಸಭೆಯಲ್ಲಿ ಬಿಜೆಪಿ ಬಹುಮತ ಹೊಂದಿದ್ದು, ಮುಂದಿನ ಸರಕಾರ ರಚನೆಗೆ ಸಿದ್ಧತೆ ನಡೆಸಿದೆ. ಸೋಮವಾರ ಅಪರಾಹ್ನ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಇಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ. ಮೂರು ಬಾರಿಯ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಶಿವರಾಜ್‌ ಸಿಂಗ್‌ ಚೌಹಾಣ್‌ಗೆ ಮತ್ತೆ ಒಲಿಯುವುದೇ ಮಧ್ಯ ಪ್ರದೇಶ ಸಿಎಂ ಪದವಿ?

ಬಳಿಕ ಸಂಜೆ 7 ಗಂಟೆಗೆ ಅವರು ನಾಲ್ಕನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳಿವೆ. ಒಂದೊಮ್ಮೆ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದೇ ಆದಲ್ಲಿ, ಕೊರೊನಾ ವೈರಸ್‌ನ್ನು ಎದುರಿಸುವ ಮೊದಲ ಸವಾಲು ಅವರಿಗೆ ಎದುರಾಗಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ