ಆ್ಯಪ್ನಗರ

ಜಮ್ಮು ಕಾಶ್ಮೀರದಲ್ಲಿ ಜನಜೀವನ ಸಹಜ ಸ್ಥಿತಿಯತ್ತ; ಸ್ಥಿರ ದೂರವಾಣಿ ಸೇವೆ ಶೀಘ್ರ ಆರಂಭ

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿ ರದ್ದುಗೊಂಡ ಬಳಿಕ ಪರಿಸ್ಥಿತಿ ಬಿಕ್ಕಟ್ಟಿನಿಂದ ಕೂಡಿದೆ ಎಂಬ ಪಾಕಿಸ್ತಾನಕ್ಕೆ ಮುಖ್ಯ ಕಾರ್ಯದರ್ಶಿ ತಿರುಗೇಟು ನೀಡಿದ್ದಾರೆ.

TIMESOFINDIA.COM 16 Aug 2019, 4:46 pm
ಶ್ರೀನಗರ: ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ಹಾಗೂ 35ಎ ವಿಧಿಯನ್ನು ರದ್ದುಪಡಿಸಿದ ನಂತರ ಹೇರಲಾಗಿದ್ದ ನಿಷೇಧಾಜ್ಞೆಯನ್ನು ಹಿಂಪಡೆಯಲಾಗುತ್ತಿದೆ.

ಇದುವರೆಗೆ ಯಾವುದೇ ಅಹಿತಕರ ಘಟನೆಗಳು ನಡೆಯದಿಲ್ಲ. ಹೀಗಾಗಿ ಕೆಲವು ನಿಬಂಧನೆಗಳನ್ನು ಹಿಂಪಡೆಯಲಾಗುತ್ತಿದೆ ಎಂದು ಜಮ್ಮು ಕಾಶ್ಮೀರ ಮುಖ್ಯ ಕಾರ್ಯದರ್ಶಿ ಬಿವಿಆರ್‌ ಸುಬ್ರಮಣ್ಯನ್‌ ತಿಳಿಸಿದ್ದಾರೆ.

ಜಮ್ಮು ಕಾಶ್ಮೀರ ಪರಿಸ್ಥಿತಿಯ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸುಬ್ರಮಣ್ಯಂ, ಹಲವು ಮಾಹಿತಿ ಹಂಚಿಕೊಂಡರು.

ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಉಗ್ರರು ನಿರಂತರ ದಾಳಿ ನಡೆಸುತ್ತಿರುವುದು ಭಯ ಹುಟ್ಟಿಸಲು ಹಾಗೂ ಅಭಿವೃದ್ಧಿ ಯೋಜನೆಗಳು ಸುಸೂತ್ರವಾಗಿ ನಡೆಯದಂತೆ ಮಾಡಲು ಎಂದು ಅವರು ತಿಳಿಸಿದರು.


ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಳೆದ ಹದಿನೈದು ದಿನಗಳಿಂದ ರಾಜ್ಯದಲ್ಲಿ ಶಾಂತಿ ನೆಲೆಸಿದೆ. ಯಾವುದೇ ರೀತಿಯ ಹಿಂಸಾಚಾರ ನಡೆದಿಲ್ಲ. ಸಾವು-ನೋವಿನ ವರದಿಯೂ ಆಗಿಲ್ಲ ಎಂದು ಸುಬ್ರಮಣ್ಯಂ ವಿವರಿಸಿದರು.

ಜಮ್ಮು ಕಾಶ್ಮೀರದ 22 ಜಿಲ್ಲೆಗಳ ಪೈಕಿ 12 ಜಿಲ್ಲೆಗಳಲ್ಲಿ ಎಲ್ಲ ಕಾರ್ಯಗಳು ಸುಸೂತ್ರವಾಗಿ ಸಾಗುತ್ತಿವೆ. ಮುಂದಿನ ದಿನಗಳಲ್ಲಿ ಕಣಿವೆ ರಾಜ್ಯದಲ್ಲಿ ಸಂಪರ್ಕ ವ್ಯವಸ್ಥೆ ಕೂಡ ಸರಿಪಡಿಸಲಾಗುವುದು. ಇನ್ನೆರಡು ದಿನದಲ್ಲಿ ಸ್ಥಿರ ದೂರವಾಣಿ ಸೇವೆ ಸರಿಯಾಗಲಿದೆ ಎಂದು ತಿಳಿಸಿದರು.


ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಜನಜೀವನ ಶಾಂತರೀತಿಯಲ್ಲಿದೆ. ಮುಂದಿನ ವಾರದಿಂದ ಶಾಲಾ-ಕಾಲೇಜುಗಳು ಪುನಾರಂಭಗೊಳ್ಳಲಿದೆ ಎಂದು ಸುಬ್ರಮಣ್ಯಂ ಮಾಹಿತಿ ನೀಡಿದರು.

ಸಾರಿಗೆ ಸೇವೆಯನ್ನು ಆರಂಭಿಸಲಾಗಿದೆ. ನಿರಂತರವಾಗಿ ಕಾನೂನು ಸುವ್ಯವಸ್ಥೆ ಮೇಲೆ ನಿಗಾ ಇಡಲಾಗಿದೆ ಎಂದರು.

ಜಮ್ಮು ಕಾಶ್ಮೀರದ ಬಹುತೇಕ ಎಲ್ಲ ಸರಕಾರಿ ಕಚೇರಿಗಳು ಕಾರ್ಯಾಚರಣೆ ಆರಂಭಿಸಿವೆ. ಮುಂದಿನ ದಿನಗಳಲ್ಲಿ ಎಲ್ಲವೂ ಸಹಜ ಸ್ಥಿತಿಗೆ ಮರಳುತ್ತದೆ ಎಂದು ಸುಬ್ರಮಣ್ಯಂ ಭರವಸೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ