ಆ್ಯಪ್ನಗರ

ಹನುಮಂತಪ್ಪ ಪತ್ನಿಗೆ ಉದ್ಯೋಗ ನೀಡಿದ ಸ್ಮೃತಿ ಇರಾನಿ

ಹುತಾತ್ಮ ಯೋಧ ಹನುಮಂತಪ್ಪ ಕೊಪ್ಪದ್‌ ಅವರ ಪತ್ನಿ ಮಹಾದೇವಿ ಕೊಪ್ಪದ್‌ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಉದ್ಯೋಗಾವಕಾಶ ಕಲ್ಪಿಸಿದ್ದಾರೆ.

ಏಜೆನ್ಸೀಸ್ 9 Mar 2017, 12:56 pm
ಹೊಸದಿಲ್ಲಿ: ಹುತಾತ್ಮ ಯೋಧ ಹನುಮಂತಪ್ಪ ಕೊಪ್ಪದ್‌ ಅವರ ಪತ್ನಿ ಮಹಾದೇವಿ ಕೊಪ್ಪದ್‌ ಅವರಿಗೆ ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾನಿ ಉದ್ಯೋಗಾವಕಾಶ ಕಲ್ಪಿಸಿದ್ದಾರೆ.
Vijaya Karnataka Web smriti irani sends job offer letter to siachen braveheart hanumanthappas wife
ಹನುಮಂತಪ್ಪ ಪತ್ನಿಗೆ ಉದ್ಯೋಗ ನೀಡಿದ ಸ್ಮೃತಿ ಇರಾನಿ


ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಕೊಪ್ಪದ್‌ ಅವರ ಪತ್ನಿ ಮಹಾದೇವಿ ಕೊಪ್ಪದ್‌ಗೆ ಸ್ಮೃತಿ ಇರಾನಿ ಉದ್ಯೋಗಾವಕಾಶ ನೀಡಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಸಂಸದ ರಾಜೀವ್‌ ಚಂದ್ರಶೇಖರ್‌, ಸ್ಮೃತಿ ಅವರಿಗೆ ಧನ್ಯವಾದ ಹೇಳಿದ್ದಾರೆ.

🙏 https://t.co/cXUFfrySIG — Smriti Z Irani (@smritiirani) March 8, 2017 ಕಳೆದ ಫೆಬ್ರವರಿಯಲ್ಲಿ ಸಿಯಾಚಿನ್‌ ಪ್ರದೇಶದಲ್ಲಿ ಹಿಮಪಾತಕ್ಕೆ ಸಿಲುಕಿ 6 ದಿನಗಳ ಕಾಲ ಸಾವು-ಬದುಕಿನ ಹೋರಾಟ ನಡೆಸಿದ್ದ ಯೋಧ ಹನುಮಂತಪ್ಪ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದರು. ಪತ್ನಿ ಮಹಾದೇವಿ, ಮಗು ನೇತ್ರಾ (3) ಹಾಗೂ ಕುಟುಂಬ ಸದಸ್ಯರನ್ನು ಅಗಲಿದ್ದರು.

ಹನುಮಂತಪ್ಪ ಕೊಪ್ಪದ್‌ ಅವರಿಗೆ ಈ ವರ್ಷ ಮರಣೋತ್ತರ ಶೌರ್ಯ ಪ್ರಶಸ್ತಿ ನೀಡಲಾಗಿದೆ. ಕೊಪ್ಪದ್‌ ಪತ್ನಿಗೆ ಕೆಲಸ ಕೊಡುವುದಾಗಿ ರಾಜ್ಯ ಸರಕಾರವೂ ಘೋಷಿಸಿತ್ತು. ಆದರೆ, ಅದಿನ್ನೂ ಭರವಸೆಯಾಗಿಯೇ ಉಳಿದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ