ಆ್ಯಪ್ನಗರ

ಕೇಂದ್ರದ ಕೃಷಿ ಕಾಯಿದೆಗಳ ವಿರುದ್ಧ ಕಾಯಿದೆ ರಚಿಸಲು ಕಾಂಗ್ರೆಸ್‌ ಆಡಳಿತದ ರಾಜ್ಯಗಳಿಗೆ ಸೋನಿಯಾ ಕರೆ

​​ಸದ್ಯ ಪಂಜಾಬ್‌ನಲ್ಲಿ ಕೇಂದ್ರ ಸರಕಾರದ ಕೃಷಿ ಕಾಯಿದೆಗಳಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಮತ್ತು ಈ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಹೀಗಾಗಿ ರಾಜ್ಯ ಸರಕಾರ ಯಾವ ತೀರ್ಮಾನ ತೆಗೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

Agencies 28 Sep 2020, 7:20 pm
ಹೊಸದಿಲ್ಲಿ: ತಮ್ಮ ಪಕ್ಷ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಕೇಂದ್ರ ಸರಕಾರದ ಕೃಷಿ ಕಾಯಿದೆಗಳ ವಿರುದ್ಧ ಪ್ರತ್ಯೇಕ ಕಾಯಿದೆಗಳನ್ನು ಜಾರಿಗೆ ತರುವಂತೆ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಕರೆ ನೀಡಿದ್ದಾರೆ.
Vijaya Karnataka Web Sonia Gandhi


ಸಂವಿಧಾನದ ಪರಿಚ್ಛೇದ 254 (2)ರ ಅಡಿಯಲ್ಲಿ ಕೇಂದ್ರದ ಕಾಯಿದೆಗಳ ವಿರುದ್ಧ ಕಾಯಿದೆಗಳನ್ನು ರಚಿಸಲು ರಾಜ್ಯ ಶಾಸಕಾಂಗಕ್ಕೆ ನೀಡಿರುವ ಅಧಿಕಾರವನ್ನು ಬಳಸಿ ತಮ್ಮ ತಮ್ಮ ರಾಜ್ಯಗಳಲ್ಲಿ ಕಾಯಿದೆ ಜಾರಿಗೆ ತರುವ ಬಗ್ಗೆ ಚಿಂತನೆ ನಡೆಸುವಂತೆ ಕಾಂಗ್ರೆಸ್‌ ಅಧ್ಯಕ್ಷರು ಪಕ್ಷ ಅಧಿಕಾರವಿರುವ ರಾಜ್ಯಗಳಿಗೆ ಕರೆ ನೀಡಿದ್ದಾರೆ ಎಂದು ಹಿರಿಯ ಕಾಂಗ್ರೆಸ್‌ ನಾಯಕ ಕೆಸಿ ವೇಣುಗೋಪಾಲ್‌ ಟ್ಟೀಟ್‌ ಮಾಡಿದ್ದಾರೆ.

ಸಮವರ್ತಿ ಪಟ್ಟಿಯಲ್ಲಿರುವ ವಿಷಯಗಳಿಗೆ ಸಂಬಂಧಿಸಿದಂತೆ ಸೋನಿಯಾ ಗಾಂಧಿ ಈ ಮಾತುಗಳನ್ನು ಹೇಳಿದ್ದಾರೆ. ಇದರ ಪ್ರಕಾರ, ಒಂದೊಮ್ಮೆ ಸಂಸತ್ತಿನ ಕಾಯಿದೆಗೆ ವಿರುದ್ಧವಾದ ಕಾಯಿದೆಯನ್ನು ರಾಜ್ಯ ಶಾಸಕಾಂಗ ಅನುಮೋದಿಸಿ ಅದಕ್ಕೆ ರಾಷ್ಟ್ರಪತಿಗಳ ಸಹಿ ಬಿದ್ದರೆ ಅಂಥಹ ಕಾಯಿದೆ ರಾಜ್ಯದ ವ್ಯಾಪ್ತಿಯಲ್ಲಿ ಜಾರಿಗೆ ಬರುತ್ತದೆ.

ಕೇಂದ್ರ ಕೃಷಿ ಮಸೂದೆಗಳ ವಿರುದ್ಧ ಪ್ರತಿಭಟನೆ: ಇಂಡಿಯಾ ಗೇಟ್‌ ಬಳಿ ಟ್ರಾಕ್ಟರ್‌ ಸುಟ್ಟು ಆಕ್ರೋಶ, ಐವರು ವಶಕ್ಕೆ!

ಸದ್ಯ ಪಂಜಾಬ್‌ನಲ್ಲಿ ಕೇಂದ್ರ ಸರಕಾರದ ಕಾಯಿದೆ ತೀವ್ರ ವಿರೋಧ ವ್ಯಕ್ತವಾಗಿದೆ. ಮತ್ತು ಈ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿರುವುದು ಗಮನಾರ್ಹ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ