ಆ್ಯಪ್ನಗರ

ಒಂದೇ ದಿನದಲ್ಲಿ ತಣ್ಣಗಾದ 'ಕೈ' ಅತೃಪ್ತಿ..! ಕಾಂಗ್ರೆಸ್‌ ಹಂಗಾಮಿ ಅಧ್ಯಕ್ಷೆಯಾಗಿ ಸೋನಿಯಾ ಮುಂದುವರಿಕೆ

ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಭುಗಿಲೆದ್ದಿದ್ದ ಅಸಮಾಧಾನ ಒಂದೇ ದಿನಕ್ಕೆ ತಣ್ಣಗಾಗಿದ್ದು, ಸುಮಾರು 7 ಗಂಟೆಗಳ ಕಾಲ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಸುಖಾಂತ್ಯವಾಗಿದೆ. ಅಂತಿಮವಾಗಿ ಹಂಗಾಮಿ ಅಧ್ಯಕ್ಷರನ್ನಾಗಿ ಸೋನಿಯಾ ಗಾಂಧಿ ಅವರನ್ನೇ ಮುಂದುವರೆಸಲು ನಿರ್ಧರಿಸಲಾಗಿದೆ.

PTI 24 Aug 2020, 7:48 pm
ಹೊಸದಿಲ್ಲಿ: ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಭುಗಿಲೆದ್ದಿದ್ದ ಅಸಮಾಧಾನ ಸೋಮವಾರದ ಮಟ್ಟಿಗೆ ತಣ್ಣಗಾಗಿದೆ. ಸುಮಾರು 7 ಗಂಟೆಗಳ ಕಾಲ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅಂತಿಮವಾಗಿ ಹಂಗಾಮಿ ಅಧ್ಯಕ್ಷರನ್ನಾಗಿ ಸೋನಿಯಾ ಗಾಂಧಿ ಅವರನ್ನೇ ಮುಂದುವರೆಸಲು ನಿರ್ಧರಿಸಲಾಗಿದೆ. ಇನ್ನು, ಮುಂದಿನ ಆರು ತಿಂಗಳೊಳಗೆ ಪಕ್ಷಕ್ಕೆ ನೂತನ ಅಧ್ಯಕ್ಷರ ನೇಮಕ ಮಾಡಲಾಗುವುದು ಎಂದು ಸಿಡಬ್ಲ್ಯೂಸಿ ಹೇಳಿದೆ.
Vijaya Karnataka Web sonia gandhi to continue as interim congress president
ಒಂದೇ ದಿನದಲ್ಲಿ ತಣ್ಣಗಾದ 'ಕೈ' ಅತೃಪ್ತಿ..! ಕಾಂಗ್ರೆಸ್‌ ಹಂಗಾಮಿ ಅಧ್ಯಕ್ಷೆಯಾಗಿ ಸೋನಿಯಾ ಮುಂದುವರಿಕೆ


ಸೋಮವಾರ ನಡೆದ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ ಹಲವು ಮಹತ್ವದ ವಿದ್ಯಮಾನಗಳಿಗೆ ಸಾಕ್ಷಿಯಾಯಿತು. ಕಾಂಗ್ರೆಸ್ ನಾಯಕತ್ವದಲ್ಲಿ ಬದಲಾವಣೆ ಅಗತ್ಯ ಎಂದು ಗುಲಾಂ ನಬಿ ಆಜಾದ್, ಕಪಿಲ್ ಸಿಬಲ್ ಸೇರಿ 23 ಹಿರಿಯ ಕಾಂಗ್ರೆಸ್‌ ನಾಯಕರು ಸೋನಿಯಾ ಗಾಂಧಿ ಅವರಿಗೆ ಬರೆದ ಪತ್ರದ ಬಗ್ಗೆ ಸಭೆಯಲ್ಲಿ ಬಹಳಷ್ಟು ಚರ್ಚೆಯಾಯಿತು.

ಮುಂದಿನ ಸಿಡಬ್ಲ್ಯೂಸಿ ಸಭೆಯಲ್ಲಿ ನೂತನ ಅಧ್ಯಕ್ಷರನ್ನು ಘೋಷಣೆ ಮಾಡುವ ಸಾಧ್ಯತೆ ಇದ್ದು, ಅಲ್ಲಿಯವರೆಗೂ ಸೋನಿಯಾ ಅವರೇ ಹಂಗಾಮಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹೊಸ ಅಧ್ಯಕ್ಷರ ನೇಮಕವಾಗುವವರೆಗೂ ನೀವೇ ಮುಂದುವರೆಯಬೇಕು ಎಂದು ಹಲವು ನಾಯಕರು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು ಎನ್ನಲಾಗಿದೆ.

ಕಾಂಗ್ರೆಸ್ ಮುನ್ನಡೆಸಲು ‘ಗಾಂಧಿ ಪರಿವಾರ’ದ ಆಚೆ ದಕ್ಷ ಅಧ್ಯಕ್ಷ ಸಿಗಲು ಸಾಧ್ಯವೇ..?

ಇನ್ನು, ಸಭೆಯಲ್ಲಿ ಮಾತನಾಡಿರುವ ಸೋನಿಯಾ ಗಾಂಧಿ, ಕಾಂಗ್ರೆಸ್ ದೊಡ್ಡ ಕುಟುಂಬವಿದ್ದಂತೆ. ನನಗೆ ಯಾರ ವಿರುದ್ಧವೂ ಸಿಟ್ಟಿಲ್ಲ. ಆದರೆ, ಅಭಿಪ್ರಾಯವನ್ನು ಪಕ್ಷದ ವೇದಿಕೆಯಲ್ಲಿ ಮಾತ್ರ ವ್ಯಕ್ತಪಡಿಸಿ ಎಂದು ಹಿರಿಯ ನಾಯಕರಿಗೆ ಸಲಹೆ ನೀಡಿದ್ದಾರೆ. ನಾಯಕತ್ವ ಬದಲಾವಣೆ ಬಗ್ಗೆ ಹಿರಿಯ ನಾಯಕರ ಪತ್ರದ ಬೆನ್ನಲ್ಲೇ ಸೋನಿಯಾ ಗಾಂಧಿ ಎಐಸಿಸಿಯ ಹಂಗಾಮಿ ಅಧ್ಯಕ್ಷೆ ಹುದ್ದೆಯನ್ನು ತೊರೆಯುವುದಾಗಿ ಹೇಳಿದ್ದರು.

'ಗಾಂಧಿ ಕುಟುಂಬದ ಪ್ರಾಬಲ್ಯ ಕುಗ್ಗಿದೆ, ಕಾಂಗ್ರೆಸ್‌ನ ಅಂತ್ಯವಾಗಿದೆ': ಕೈ ಬಿಕ್ಕಟ್ಟಿಗೆ ಉಮಾ ಭಾರತಿ ಟಾಂಗ್‌!

ಸಭೆ ಆರಂಭವಾಗುತ್ತಿದ್ದಂತೆಯೇ ತಮ್ಮ ನಿರ್ಧಾರವನ್ನು ತಿಳಿಸಿದ ಸೋನಿಯಾ ಗಾಂಧಿ, ಹೊಸ ಅಧ್ಯಕ್ಷರ ನೇಮಕ ಪ್ರಕ್ರಿಯೆಯನ್ನು ಮುಂದುವರಿಸಲು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿಗೆ ಕೇಳಿಕೊಂಡಿದ್ದರು. ಈ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್‌ ನಾಯಕರು ಬರೆದ ಪತ್ರದ ಬಗ್ಗೆ ಸೋನಿಯಾ ಗಾಂಧಿ ಉಲ್ಲೇಖಿಸಿದ್ದರು. ಪತ್ರದಲ್ಲಿನ ಅಂಶಗಳನ್ನು ವರ್ಚುವಲ್ ಸಭೆಯಲ್ಲಿ ಪ್ರಸ್ತಾಪಿಸಿದ್ದರು ಎನ್ನಲಾಗಿದೆ.

ಭಿನ್ನಮತ ಸ್ಫೋಟಕ್ಕೆ ವೇದಿಕೆಯಾದ ಕಾರ್ಯಕಾರಿಣಿ ಸಭೆ: ರಾಹುಲ್ ಹೇಳಿಕೆ ಸುತ್ತಮುತ್ತ...!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ