ಆ್ಯಪ್ನಗರ

ಲೋಕಸಭಾ ಚುನಾವಣೆ: ಉತ್ತರ ಪ್ರದೇಶದಲ್ಲಿ ಎಸ್‌ಪಿ 37, ಬಿಎಸ್‌ಪಿ 38 ಸ್ಥಾನ ಹಂಚಿಕೆ

ಉತ್ತರ ಪ್ರದೇಶದಲ್ಲಿ ಒಟ್ಟು 80 ಲೋಕಸಭಾ ಕ್ಷೇತ್ರಗಳಿವೆ. ಉಭಯ ಪಕ್ಷಗಳು ಬಹುತೇಕ ಸ್ಥಾನದಲ್ಲಿ ಸ್ಪರ್ಧಿಸುತ್ತಿರುವುದರಿಂದ ಕಾಂಗ್ರೆಸ್‌ ಅನ್ನು ಈ ಮೈತ್ರಿಕೂಟದಿಂದ ಎಸ್‌ಪಿ, ಬಿಎಸ್‌ಪಿ ಹೊರಗಿಟ್ಟಿದೆ ಎನ್ನಲಾಗಿದೆ.

Vijaya Karnataka Web 21 Feb 2019, 5:56 pm
ಲಖನೌ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ನರೇಂದ್ರ ಮೋದಿಯನ್ನು ಎದುರಿಸಲು ಮೈತ್ರಿ ಮಾಡಿಕೊಂಡಿರುವ ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಈಗ ಸೀಟು ಹಂಚಿಕೆಯನ್ನೂ ಮಾಡಿಕೊಂಡಿದೆ.
Vijaya Karnataka Web ಮಾಯಾವತಿ, ಅಖಿಲೇಶ್‌
ಮಾಯಾವತಿ, ಅಖಿಲೇಶ್‌


37 ಸ್ಥಾನದಲ್ಲಿ ಎಸ್‌ಪಿ, 38 ಸ್ಥಾನದಲ್ಲಿ ಬಿಎಸ್‌ಪಿ ಸ್ಪರ್ಧಿಸಲಿದೆ.

ಈ ಹಿಂದೆ ಉಭಯ ಪಕ್ಷಗಳು ತಲಾ 38 ಸ್ಥಾನದಲ್ಲಿ ಸ್ಪರ್ಧಿಸುವ ಬಗ್ಗೆ ಘೋಷಣೆ ಮಾಡಲಾಗಿತ್ತು. ಈಗ ಸೀಟುಗಳ ಹಂಚಿಕೆ ಪರಿಷ್ಕರಣಣೆ ಮಾಡಲಾಗಿದ್ದು ಎಸ್‌ಪಿ 37, ಬಿಎಸ್‌ಪಿ 38 ಸ್ಥಾನದಲ್ಲಿ ಕಣಕ್ಕಿಳಿಯಲಿವೆ.

ಉತ್ತರ ಪ್ರದೇಶದಲ್ಲಿ ಒಟ್ಟು 80 ಲೋಕಸಭಾ ಕ್ಷೇತ್ರಗಳಿವೆ. ಉಭಯ ಪಕ್ಷಗಳು ಬಹುತೇಕ ಸ್ಥಾನದಲ್ಲಿ ಸ್ಪರ್ಧಿಸುತ್ತಿರುವುದರಿಂದ ಕಾಂಗ್ರೆಸ್‌ ಅನ್ನು ಈ ಮೈತ್ರಿಕೂಟದಿಂದ ಎಸ್‌ಪಿ, ಬಿಎಸ್‌ಪಿ ಹೊರಗಿಟ್ಟಿದೆ ಎನ್ನಲಾಗಿದೆ.

ಎಸ್‌ಪಿ ಅಧ್ಯಕ್ಷ ಅಖಿಲೇಶ್‌ ಯಾದವ್‌ ಮತ್ತು ಬಿಎಸ್‌ಪಿಯ ಮಾಯಾವತಿ ಜಂಟಿಯಾಗಿ ಈ ಕುರಿತು ಹೇಳಿಕೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ