ಆ್ಯಪ್ನಗರ

ಎಸ್‌ಬಿಐ ಜತೆ ಸ್ಟೇಟ್‌ ಬ್ಯಾಂಕ್‌ಗಳ ವಿಲೀನಕ್ಕೆ ಸಂಪುಟ ಒಪ್ಪಿಗೆ

ಭಾರತೀಯ ಸ್ಟೇಟ್‌ ಬ್ಯಾಂಕ್‌ ಮತ್ತು ಅದರ ಐದು ಸಹವರ್ತಿ ಬ್ಯಾಂಕ್‌ಗಳನ್ನು ವಿಲೀನಗೊಳಿಸುವ ನಿರ್ಣಯಕ್ಕೆ ಕೇಂದ್ರ ಸಂಪುಟ ಬುಧವಾರ ಅಸ್ತು ಎಂದಿದೆ.

ಏಜೆನ್ಸೀಸ್ 16 Feb 2017, 8:13 am

ಹೊಸದಿಲ್ಲಿ: ಭಾರತೀಯ ಸ್ಟೇಟ್‌ ಬ್ಯಾಂಕ್‌ ಮತ್ತು ಅದರ ಐದು ಸಹವರ್ತಿ ಬ್ಯಾಂಕ್‌ಗಳನ್ನು ವಿಲೀನಗೊಳಿಸುವ ನಿರ್ಣಯಕ್ಕೆ ಕೇಂದ್ರ ಸಂಪುಟ ಬುಧವಾರ ಅಸ್ತು ಎಂದಿದೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆ,ಬ್ಯಾಂಕಿಂಗ್‌ ಕ್ಷೇತ್ರದ ಬಲವೃದ್ಧಿಗೊಳಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿದೆ. ಆದರೆ, ಭಾರತೀಯ ಮಹಿಳಾ ಬ್ಯಾಂಕ್‌ ಅನ್ನು ಎಸ್‌ಬಿಐ ಜತೆ ವಿಲೀನಗೊಳಿಸುವ ಕುರಿತಂತೆ ಯಾವುದೇ ನಿರ್ಣಯ ಕೈಗೊಂಡಿಲ್ಲ.

Vijaya Karnataka Web state banks to merged with sbi
ಎಸ್‌ಬಿಐ ಜತೆ ಸ್ಟೇಟ್‌ ಬ್ಯಾಂಕ್‌ಗಳ ವಿಲೀನಕ್ಕೆ ಸಂಪುಟ ಒಪ್ಪಿಗೆ


ಸಂಪುಟ ನಿರ್ಣಯದೊಂದಿಗೆ ಸ್ಟೇಟ್‌ ಬ್ಯಾಂಕ್‌ ಆಫ್‌ ಬಿಕಾನೇರ್‌ ಅ್ಯಂಡ್‌ ಜೈಪುರ(ಎಸ್‌ಬಿಬಿಜೆ), ಸ್ಟೇಟ್‌ ಬ್ಯಾಂಕ್‌ ಆಫ್‌ ಮೈಸೂರು(ಎಸ್‌ಬಿಎಂ), ಸ್ಟೇಟ್‌ ಬ್ಯಾಂಕ್‌ ಆಫ್‌ ಟ್ರಾವಂಕೂರ್‌(ಎಸ್‌ಬಿಟಿ), ಸ್ಟೇಟ್‌ ಬ್ಯಾಂಕ್‌ ಆಫ್‌ ಪಾಟಿಯಾಲ(ಎಸ್‌ಬಿಪಿ) ಮತ್ತು ಸ್ಟೇಟ್‌ ಬ್ಯಾಂಕ್‌ ಆಫ್‌ ಹೈದರಾಬಾದ್‌(ಎಸ್‌ಬಿಎಚ್‌)ಗಳು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಜತೆ ವಿಲೀನಗೊಳ್ಳಲಿವೆ. ಇದರೊಂದಿಗೆ ಎಸ್‌ಬಿಐ ವಿಶ್ವದ ಬೃಹತ್‌ ಬ್ಯಾಂಕ್‌ಗಳಲ್ಲಿ ಒಂದಾಗಿ ಹೊರಹೊಮ್ಮಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ