ಆ್ಯಪ್ನಗರ

ಅಪೌಷ್ಟಿಕತೆಯಿಂದ ಬಳಲುವ ಮಕ್ಕಳ ಗುರುತಿಸಲು ಎಲ್ಲಾ ರಾಜ್ಯಗಳಿಗೆ ಕೇಂದ್ರ ಸೂಚನೆ

ಅಪೌಷ್ಟಿಕತೆಯಿಂದ ಬಳಲುವ ಮಕ್ಕಳನ್ನು ಗುರುತಿಸಿ, ಅಗತ್ಯ ಬಿದ್ದರೆ ಆಸ್ಪತ್ರೆಗಳಿಗೆ ದಾಖಲಿಸಲು ಶಿಫಾರಸು ಮಾಡಬೇಕು. ಈ ಅಭಿಯಾನ ಕಾರ್ಯವನ್ನು ಜ. 31ರೊಳಗೆ ಪೂರ್ಣಗೊಳಿಸಬೇಕು ಎಂದು ಸಚಿವಾಲಯವು ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ‍್ಯದರ್ಶಿಗಳಿಗೆ ಪತ್ರ ಬರೆದಿದೆ.

Vijaya Karnataka Web 25 Jan 2021, 8:28 am
ಹೊಸದಿಲ್ಲಿ: ತೀವ್ರತರದ ಅಪೌಷ್ಟಿಕತೆಯಿಂದ ಬಳಲುವ ಮಕ್ಕಳನ್ನು ಗುರುತಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.
Vijaya Karnataka Web malnutrition


ಮಕ್ಕಳು ಮತ್ತು ಮಹಿಳೆಯರಲ್ಲಿ ಪೌಷ್ಟಿಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ತೀವ್ರತರದ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸಮೀಕ್ಷೆಗಾಗಿ ‘ಪೋಷಣ್‌ ಟ್ರ್ಯಾಕರ್‌’ ವ್ಯವಸ್ಥೆಯನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಇಂತಹ ಮಕ್ಕಳನ್ನು ಗುರುತಿಸಿ, ಅಗತ್ಯ ಬಿದ್ದರೆ ಆಸ್ಪತ್ರೆಗಳಿಗೆ ದಾಖಲಿಸಲು ಶಿಫಾರಸು ಮಾಡಬೇಕು. ಈ ಅಭಿಯಾನ ಕಾರ್ಯವನ್ನು ಜ. 31ರೊಳಗೆ ಪೂರ್ಣಗೊಳಿಸಬೇಕು ಎಂದು ಸಚಿವಾಲಯವು ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ‍್ಯದರ್ಶಿಗಳಿಗೆ ಪತ್ರ ಬರೆದಿದೆ.
ಬಂಗಾಳದಲ್ಲಿ ನಿಲ್ಲದ ‘ಜೈ ಶ್ರೀರಾಮ್‌’ ಜಟಾಪಟಿ; ಕಾಂಗ್ರೆಸ್‌, ಎಡಪಕ್ಷಗಳಿಂದ ಮಮತಾಗೆ ಬೆಂಬಲ
ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸಬೇಕು. ಪೌಷ್ಟಿಕತೆಗೆ ಸಂಬಂಧಿಸಿದ ಮಾನದಂಡದ ಪ್ರಕಾರ, ಎಲ್ಲ ಫಲಾನುಭವಿಗಳಿಗೆ ಈ ಕಾರ್ಯಕ್ರಮದ ಲಾಭ ದೊರೆಯುವಂತೆ ನೋಡಿಕೊಳ್ಳಬೇಕು ಎಂದೂ ಸೂಚಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ