ಆ್ಯಪ್ನಗರ

ಅಯೋಧ್ಯೆ ತೀರ್ಪು: ಮೇಲ್ಮನವಿ ಸಲ್ಲಿಸಲ್ಲ ಎಂದ ಸುನ್ನಿ ವಕ್ಫ್‌ ಬೋರ್ಡ್‌

ದೇಶದ ಬಹುಕಾಲದಿಂದ ಕಾಯುತ್ತಿದ್ದ ರಾಜಕೀಯ ಮತ್ತು ಧಾರ್ಮಿಕವಾಗಿ ಬಹುಸೂಕ್ಷ್ಮವಾಗಿರುವ ಅಯೋಧ್ಯೆ ತೀರ್ಪು ಹೊರಬಿದ್ದಿದ್ದು, ಅಯೋಧ್ಯೆ ರಾಮ ಜನ್ಮಭೂಮಿ ಎಂಬುದು ಅಧಿಕೃತವಾಗಿದೆ. ಹಕ್ಕಿಗಾಗಿ ಪ್ರಬಲವಾಗಿ ಪ್ರತಿಪಾದಿಸಿದ್ದ ಸುನ್ನಿ ವಕ್ಫ್‌ ಬೋರ್ಡ್‌ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸದಿರಲು ನಿರ್ಧರಿಸಿದೆ.

Vijaya Karnataka Web 9 Nov 2019, 4:48 pm
ಹೊಸದಿಲ್ಲಿ: ಸುಪ್ರೀಂ ಕೋರ್ಟ್‌ ಆದೇಶವನ್ನು ಗೌರವಿಸುತ್ತೇವೆ. ತೀರ್ಪನ್ನು ಪುನಃ ಪರಿಶೀಲಸಬೇಕು ಎಂದು ಮೇಲ್ಮನವಿ ಸಲ್ಲಿಸುವುದಿಲ್ಲ ಎಂದು ಸುನ್ನಿ ವಕ್ಫ್‌ ಬೋರ್ಡ್‌ ತಿಳಿಸಿದೆ. ಉತ್ತರ ಪ್ರದೇಶ ಸುನ್ನಿ ವಕ್ಫ್‌ ಬೋರ್ಡ್‌ನ ಅಧ್ಯಕ್ಷ ಜುಫರ್‌ ಫಾರೂಕ್‌ ಈ ಕುರಿತು ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದು, ತೀರ್ಪಿನ ಕುರಿತು ಮತ್ತೊಮ್ಮೆ ಪರಿಶೀಲಿಸಬೇಕು ಎಂದು ಮೇಲ್ಮನವಿ ಸಲ್ಲಿಸದಿರಲು ನಿರ್ಧರಿಸಿರುವುದಾಗಿ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ.
Vijaya Karnataka Web Muslim Women


ಅಯೋಧ್ಯೆ ತೀರ್ಪು: ರಾಷ್ಟ್ರಾದ್ಯಂತ ಕಂಡುಬಂದ ರೋಚಕ ಕ್ಷಣಗಳ ಫೋಟೊಗಳು ಇಲ್ಲಿವೆ ನೋಡಿ.

ಸುಪ್ರೀಂ ಕೋರ್ಟ್‌ ತೀರ್ಪನ್ನು ಬಹಳ ಗೌರವದಿಂದ ಸ್ವೀಕರಿಸುತ್ತೇವೆ. ಅಯೋಧ್ಯೆ ತೀರ್ಪಿನ ವಿರುದ್ಧ ಯಾವುದೇ ಮೇಲ್ಮನವಿ ಸಲ್ಲಿಸುವುದಿಲ್ಲ. ತೀರ್ಪನ್ನು ಮತ್ತೊಮ್ಮೆ ಪರಿಶೀಲಿಸಬೇಕು ಎಂದು ಮನವಿ ಮಾಡುವುದಿಲ್ಲ. ಹಾಗಾಗಿ ಯಾರಾದರು ವೈಯಕ್ತಿಕವಾಗಿ, ವಕೀಲರ ಮೂಲಕ ಅಥವಾ ಸಂಘಟನೆ ಮೂಲಕ ಉತ್ತರ ಪ್ರದೇಶ ಸುನ್ನಿ ವಕ್ಫ್‌ ಬೋರ್ಡ್‌ ಎಂಬ ಹೆಸರಿನಲ್ಲಿ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿದರೆ ಅದಕ್ಕೆ ನಾವು ಹೊಣೆಗಾರರಾಗುವುದಿಲ್ಲ. ಅಲಹಾಬಾದ್‌ ಹೈಕೋರ್ಟ್‌ ನೀಡಿದ್ದ ತಪ್ಪಾದ ತೀರ್ಪನ್ನು ಬದಿಗಿರಿಸಿ ನಿರ್ಣಾಯಕ ತೀರ್ಪು ನೀಡಿದ ಸುಪ್ರೀಂ ಕೋರ್ಟ್‌ಗೆ ಆಭಾರಿಯಾಗಿದ್ದೇವೆ ಎಂದು ಉತ್ತರ ಪ್ರದೇಶದ ಸುನ್ನಿ ವಕ್ಫ್‌ ಬೋರ್ಡ್‌ನ ಅಧ್ಯಕ್ಷ ಜುಫರ್‌ ಫಾರುಕ್‌ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Ayodhya Verdict: ವಿವಾದಿತ ಜಾಗ ರಾಮ್‌ಲಲ್ಲಾ ಪಾಲು, ಸುನ್ನಿ ವರ್ಕ್‌ ಬೋರ್ಡ್‌ಗೂ ಐದು ಎಕರೆ ಜಾಗ

ಸುಪ್ರೀಂ ಕೋರ್ಟ್‌ ತೀರ್ಪು ಹೊರ ಬೀಳುತ್ತಿದ್ದಂತೆ ಅಸಮಾಧಾನ ವ್ಯಕ್ತ ಪಡಿಸಿದ್ದ ಸುನ್ನಿ ವಕ್ಫ್‌ ಬೋರ್ಡ್‌, ನಾವು ಸುಪ್ರೀಂ ಕೋರ್ಟ್‌ ತೀರ್ಪನ್ನು ಗೌರವಿಸುತ್ತೇವೆ. ಆದರೆ ನಮಗೆ ಈ ತೀರ್ಪು ತೃಪ್ತಿಯನ್ನು ತಂದಿಲ್ಲ. ಮುಂದೆ ಏನು ಮಾಡಬಹುದು ಎಂಬುದನ್ನು ಚರ್ಚಿಸಿ ನಿರ್ಧರಿಸುವುದಾಗಿ ಎಂದು ಪ್ರತಿಕ್ರಿಯೆ ನೀಡಿತ್ತು.

ಅಯೋಧ್ಯೆ ರಾಮ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿ ರಂಜನ್‌ ಗೊಗೊಯಿ ನೇತೃತ್ವದ ಸುಪ್ರೀಂ ಕೋರ್ಟ್‌ನ ಪಂಚಪೀಠ ತೀರ್ಪು ಪ್ರಕಟಿಸಿದ್ದು, 2.77 ಎಕರೆ ಜಮೀನು ರಾಮಲಲ್ಲಾ ಸ್ವತ್ತು ಎಂದಿದೆ. ಸುನ್ನಿ ವಕ್ಫ್‌ ಬೋರ್ಡ್‌ಗೆ ಪ್ರತ್ಯೇಕ ಸ್ಥಳದಲ್ಲಿ 5 ಎಕರೆ ಜಮೀನು ನೀಡುವಂತೆಯೂ ಸುಪ್ರೀಂ ಆದೇಶಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ